ಇನ್ನು ಮಾತೃಭಾಷೆಯಲ್ಲಿಯೂ ಎಂಜಿನಿಯರಿಂಗ್ ವ್ಯಾಸಂಗ..! ಯಾವಾಗಿಂದ ಆರಂಭ?
ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (IIT) ಮತ್ತು ನ್ಯಾಶನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಗಳು (NIT) ಮುಂದಿನ ಶೈಕ್ಷಣಿಕ ವರ್ಷದಿಂದ ಮಾತೃಭಾಷೆಯಲ್ಲಿ ಎಂಜಿನಿಯರಿಂಗ್ ಕೋರ್ಸ್ಗಳನ್ನು ನೀಡಲು ಪ್ರಾರಂಭಿಸಲಿದೆ .
ದೆಹಲಿ: ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (IIT) ಮತ್ತು ನ್ಯಾಶನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಗಳು (NIT) ಮುಂದಿನ ಶೈಕ್ಷಣಿಕ ವರ್ಷದಿಂದ ಮಾತೃಭಾಷೆಯಲ್ಲಿ ಎಂಜಿನಿಯರಿಂಗ್ ಕೋರ್ಸ್ಗಳನ್ನು ನೀಡಲು ಪ್ರಾರಂಭಿಸಲಿದೆ ಎಂದು ಶಿಕ್ಷಣ ಸಚಿವಾಲಯ ತಿಳಿಸಿದೆ.
ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಲ್ ಅಧ್ಕಕ್ಷತೆಯಲ್ಲಿ ನಡೆದ ಉನ್ನತ ಮಟ್ಟ್ದ ಪರಿಶೀಲನಾ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.
ತಾಂತ್ರಿಕ ಶಿಕ್ಷಣವನ್ನು ಅದರಲ್ಲಿಯೂ ವಿಶೇಷವಾಗಿ ಎಂಜಿನಿಯರ್ ಕೋರ್ಸ್ಗಳನ್ನು ಪ್ರಾರಂಭಿಸಲು ಮುಂದಿನ ಶೈಕ್ಷಣಿಕ ವರ್ಷದಿಂದ ಮಾತೃಭಾಷೆಯಲ್ಲಿ ಶಿಕ್ಷಣವನ್ನು ನೀಡಲು ಕೆಲವು ಐಐಟಿ ಮತ್ತು ಎನ್ಐಟಿಗಳನ್ನು ಕಿರುಪಟ್ಟಿ (short list) ಮಾಡಲಾಗುತ್ತಿದೆ. ಹಿಂದಿಯಲ್ಲಿ ಮೊದಲು ಎಂಜಿನಿಯರಿಂಗ್ ಕೋರ್ಸ್ ಐಐಟಿ ಬನಾರಸ್ ಹಿಂದು ಯುನಿವರ್ಸಿಟಿ (ಬಿಹೆಚ್ಯು) ಆರಂಭಿಸಲಿದೆ ಎಂದು ಸಚಿವಾಲಯದ ಹಿರಿಯ ಅಧಿಕಾರಿಯೊಬ್ಬರು ಸ್ಪಷ್ಟಪಡಿಸಿದ್ದಾರೆ.
ಸಚಿವಾಲಯದ ವಿವಿಧ ಯೋಜನೆಗಳ ಪರಿಶೀಲನಾ ಸಭೆಯಲ್ಲಿ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಲ್ ಯುಜಿಸಿಗೆ ಎಲ್ಲಾ ವಿದ್ಯಾರ್ಥಿವೇತನ ಮತ್ತು ಫೆಲೋಶಿಪ್ ಸರಿಯಾದ ಸಮಯಕ್ಕೆ ವಿತರಿಸಲಾಗಿದಿಯೇ ಎಂಬುದನ್ನು ಖಚಿತಪಡಿಸಿಕೊಳ್ಳಲು ನಿರ್ದೇಶಿಸಿ, ಇದಕ್ಕೆ ಸಹಾಯವಾಣಿಯನ್ನು ಪ್ರಾರಂಭಿಸುವಂತೆ ತಿಳಿಸಿದರು.