ಡಾ. ಸುದರ್ಶನ್​ಗೆ ಬಿಗ್ ಶಾಕ್: ಬಿಳಿಗಿರಿ ಬೆಟ್ಟದ ಅಕ್ರಮ ರೆಸಾರ್ಟ್ ಬಂದ್​

ಚಾಮರಾಜನಗರ: ಬಿಳಿಗಿರಿ ರಂಗನ ಬೆಟ್ಟದಲ್ಲಿ ಗೊರುಕಾನ ಪರಿಸರ ಶಿಕ್ಷಣ ಮತ್ತು ಆಯುರ್ವೇದ ಚಿಕಿತ್ಸಾ ಕೇಂದ್ರದ ಹೆಸರಿನಲ್ಲಿ ಜಂಗಲ್ ರೆಸಾರ್ಟ್ ನಿರ್ಮಾಣ ಮಾಡಲಾಗಿದೆ. ರೈಟ್ ಲೈವ್ಲಿ ಹುಡ್ ಪ್ರಶಸ್ತಿ ಪುರಸ್ಕೃತ ಡಾ. ಸುದರ್ಶನ್ ಅವರಿಂದ 8 ಎಕರೆ ಭೂ ಪರಿವರ್ತನೆ ಮಾಡಿಸಿ ಐಶಾರಾಮಿಯಾಗಿ ರೆಸಾರ್ಟ್ ನಿರ್ಮಿಸಿದ್ದರು. ಇದೀಗ ಜಿಲ್ಲಾ ಮ್ಯಾಜಿಸ್ಟ್ರೇಟ್​ನ ಬಿ.ಬಿ. ಕಾವೇರಿ ಅವರು ಭೂ ಪರಿವರ್ತನೆ ಆದೇಶವನ್ನು ರದ್ದುಗೊಳಿಸಿದ್ದಾರೆ. ಡಾ. ಸುದರ್ಶ ನ್​ಗೆ ಬಿಗ್ ಶಾಕ್ ಕೊಟ್ಟ ಜಿಲ್ಲಾ ಮ್ಯಾಜಿಸ್ಟ್ರೇಟ್ ಬಿಆರ್​ಟಿ ಟೈಗರ್ ರಿಸರ್ವ್​ನ ಪರಿಸರ ಸೂಕ್ಷ್ಮ […]

ಡಾ. ಸುದರ್ಶನ್​ಗೆ ಬಿಗ್ ಶಾಕ್: ಬಿಳಿಗಿರಿ ಬೆಟ್ಟದ ಅಕ್ರಮ ರೆಸಾರ್ಟ್ ಬಂದ್​
ಸಾಧು ಶ್ರೀನಾಥ್​

Updated on: Jan 04, 2020 | 2:25 PM

ಚಾಮರಾಜನಗರ: ಬಿಳಿಗಿರಿ ರಂಗನ ಬೆಟ್ಟದಲ್ಲಿ ಗೊರುಕಾನ ಪರಿಸರ ಶಿಕ್ಷಣ ಮತ್ತು ಆಯುರ್ವೇದ ಚಿಕಿತ್ಸಾ ಕೇಂದ್ರದ ಹೆಸರಿನಲ್ಲಿ ಜಂಗಲ್ ರೆಸಾರ್ಟ್ ನಿರ್ಮಾಣ ಮಾಡಲಾಗಿದೆ. ರೈಟ್ ಲೈವ್ಲಿ ಹುಡ್ ಪ್ರಶಸ್ತಿ ಪುರಸ್ಕೃತ ಡಾ. ಸುದರ್ಶನ್ ಅವರಿಂದ 8 ಎಕರೆ ಭೂ ಪರಿವರ್ತನೆ ಮಾಡಿಸಿ ಐಶಾರಾಮಿಯಾಗಿ ರೆಸಾರ್ಟ್ ನಿರ್ಮಿಸಿದ್ದರು. ಇದೀಗ ಜಿಲ್ಲಾ ಮ್ಯಾಜಿಸ್ಟ್ರೇಟ್​ನ ಬಿ.ಬಿ. ಕಾವೇರಿ ಅವರು ಭೂ ಪರಿವರ್ತನೆ ಆದೇಶವನ್ನು ರದ್ದುಗೊಳಿಸಿದ್ದಾರೆ.

ಡಾ. ಸುದರ್ಶ ನ್​ಗೆ ಬಿಗ್ ಶಾಕ್ ಕೊಟ್ಟ ಜಿಲ್ಲಾ ಮ್ಯಾಜಿಸ್ಟ್ರೇಟ್
ಬಿಆರ್​ಟಿ ಟೈಗರ್ ರಿಸರ್ವ್​ನ ಪರಿಸರ ಸೂಕ್ಷ್ಮ ವಲಯದಲ್ಲಿ ರೆಸಾರ್ಟ್ ನಿರ್ಮಾಣ ಮಾಡಲಾಗಿದೆ. ಶಿಕ್ಷಣ ಉದ್ದೇಶಕ್ಕೆ ಭೂ ಪರಿವರ್ತನೆ ಮಾಡಿಸಿಕೊಂಡು ಉದ್ದೇಶ ಮರೆಮಾಚಿದ ಆರೋಪವಿತ್ತು. ಈ ಕುರಿತು ತನಿಖಾ ತಂಡ ವರದಿ ನೀಡಿತ್ತು. ಭೂ ಪರಿವರ್ತನೆ ಆದೇಶ ದುರ್ಬಳಕೆ ಮಾಡಿಕೊಂಡು ವಾಣಿಜ್ಯ ಚಟುವಟಿಕೆಗೆ ರೆಸಾರ್ಟ್​ ಬಳಸಿದ್ದು ಸಾಬೀತಾದ ಹಿನ್ನೆಲೆಯಲ್ಲಿ ಭೂ ಪರಿವರ್ತನಾ ಆದೇಶವನ್ನು ರದ್ದುಗೊಳಿಸಲಾಗಿದೆ.

Published On - 2:20 pm, Sat, 4 January 20

ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Loading...
Unable to load recommendations.
Follow Us