ಇಮ್ಮಾವು ಗ್ರಾಮಸ್ಥರಿಂದ ಗ್ರಾಮ ಪಂಚಾಯತಿ ಎಲೆಕ್ಷನ್ ಬಹಿಷ್ಕಾರ

|

Updated on: Dec 17, 2020 | 9:51 AM

ನಾಮಪತ್ರ ಸಲ್ಲಿಸಲು ಇಮ್ಮಾವು ಗ್ರಾಮಸ್ಥರು ಮುಂದಾಗಲ್ಲಿಲ್ಲ. ನಾಮಪತ್ರ ಸಲ್ಲಿಸುವಂತೆ ತಾಲೂಕು ಆಡಳಿತ ಹಾಗೂ ಪೊಲೀಸರು ಮನವಿ ಮಾಡಿ ಮನ ಒಲಿಸಲು ಯತ್ನಿಸಿದರು. ತಾಲೂಕು ಆಡಳಿತ ಹಾಗೂ ಚುನಾವಣಾಧಿಕಾರಿಗಳ ಸಂದಾನ ವಿಫಲಗೊಂಡಿದೆ.

ಇಮ್ಮಾವು ಗ್ರಾಮಸ್ಥರಿಂದ ಗ್ರಾಮ ಪಂಚಾಯತಿ ಎಲೆಕ್ಷನ್ ಬಹಿಷ್ಕಾರ
ಇಮ್ಮಾವು ಅಧಿಕಾರಿಗಳು ಮತ್ತು ಗ್ರಾಮಸ್ಥರ ನಡುವೆ ಮಾತಿನ ಚಕಮಕಿ
Follow us on

ಮೈಸೂರು:  ಏಷಿಯನ್ ಪೈಂಟ್ಸ್ ಕಾರ್ಖಾನೆಯಲ್ಲಿ ಉದ್ಯೋಗ ಭರವಸೆ ನೀಡದ ಹಿನ್ನೆಲೆಯಲ್ಲಿ ನಂಜನಗೂಡು ತಾಲೂಕಿನ ಹುಳಿಮಾವು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಇಮ್ಮಾವು ಗ್ರಾಮಸ್ಥರು ಗ್ರಾಮ ಪಂಚಾಯಿತಿ ಚುನಾವಣಾ ಬಹಿಷ್ಕಾರಕ್ಕೆ ಮುಂದಾಗಿದ್ದಾರೆ.

ಬುಧವಾರ ಅಂದರೆ ನಿನ್ನೆ, ನಾಮಪತ್ರ ಸಲ್ಲಿಸಲು ಕೊನೆ ದಿನವಾಗಿತ್ತು. ಗ್ರಾಮಸ್ಥರು ನಾಮಪತ್ರ ಸಲ್ಲಿಸಲು ಮುಂದಾಗಲ್ಲಿಲ್ಲ. ನಾಮಪತ್ರ ಸಲ್ಲಿಸುವಂತೆ ತಾಲೂಕು ಆಡಳಿತ ಹಾಗೂ ಪೊಲೀಸರು ಮನವಿ ಮಾಡಿ ಮನ ಒಲಿಸಲು ಯತ್ನಿಸಿದರು. ತಾಲೂಕು ಆಡಳಿತ ಹಾಗೂ ಚುನಾವಣಾಧಿಕಾರಿಗಳ ಸಂದಾನ ವಿಫಲಗೊಂಡಿದೆ. ಈ ವೇಳೆ ತಹಶೀಲ್ದಾರ್ ಮಹೇಶ್ ಕುಮಾರ್ ನೇತೃತ್ವದಲ್ಲಿ ಪೊಲೀಸರು ಮತ್ತು ಗ್ರಾಮಸ್ಥರ ನಡುವೆ ಮಾತಿನ ಚಕಮಕಿ ಉಂಟಾಗಿದೆ.

ಇಮ್ಮಾವು ಗ್ರಾಮದ ಜನರು ಕಳೆದ 23 ದಿನಗಳಿಂದ ಅಹೋರಾತ್ರಿ ಪ್ರತಿಭಟನೆ ನಡೆಸುತ್ತಿದ್ದರು. ಗ್ರಾಮ ಪಂಚಾಯತಿ ಚುನಾವಣೆ ಬಹಿಷ್ಕರಿಸುವುದಾಗಿ ಗ್ರಾಮಸ್ಥರು ಎಚ್ಚರಿಕೆ ನೀಡಿದ್ದರು.

ಇಮ್ಮಾವು ಗ್ರಾಮ ನಂಜನಗೂಡು ತಾಲೂಕಿನ ಹುಳಿಮಾವು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿದೆ. ಇದುವರೆಗೂ 16 ವಾರ್ಡ್​ಗಳ ಪೈಕಿ 13 ವಾರ್ಡ್​ಗಳಿಗೆ ಮಾತ್ರ ನಾಮಪತ್ರ ಸಲ್ಲಿಕೆಯಾಗಿದೆ. ಇಮ್ಮಾವು ಗ್ರಾಮದ 3 ವಾರ್ಡ್​ಗಳಿಗೆ ಯಾವೊಬ್ಬ ಅಭ್ಯರ್ಥಿಯೂ ನಾಮಪತ್ರ ಸಲ್ಲಿಸಿಲ್ಲ. ಜಿಲ್ಲಾಡಳಿತದ ಮನವಿ ಮಾಡಿದರೂ ಗ್ರಾಮಸ್ಥರು ಮನವಿಯನ್ನು ಒಪ್ಪಲಿಲ್ಲ.

ಉಡುಪಿ: ಬ್ರಹ್ಮಾವರ ತಾಲೂಕಿನ ಕೋಡಿ ಗ್ರಾಮ ಪಂಚಾಯತಿ ಚುನಾವಣೆ ಬಹಿಷ್ಕಾರ.. ಯಾಕೆ?

Published On - 9:49 am, Thu, 17 December 20