ಚಿತ್ರದುರ್ಗದಲ್ಲಿ ಭೀಕರ ಅಪಘಾತ: ಮೂವರನ್ನು ಬಲಿ ಪಡೆದ ಟ್ಯಾಂಕರ್​ ಲಾರಿ

|

Updated on: Jan 06, 2021 | 7:47 PM

ಚಿತ್ರದುರ್ಗ ತಾಲೂಕಿನ ಕ್ಯಾದಿಗ್ಗೆರೆ ಬಳಿ ಭೀಕರ ಅಪಘಾತ ಸಂಭವಿಸಿದೆ. ಬೆಂಗಳೂರಿನ ಕೆಂಗೇರಿಯ ರೇಣುಕಮ್ಮ(55) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಶಿವು(43), ಶಂಕರ್(42) ಗಂಭೀರವಾಗಿ ಗಾಯಗೊಂಡಿದ್ದರು.

ಚಿತ್ರದುರ್ಗದಲ್ಲಿ ಭೀಕರ ಅಪಘಾತ: ಮೂವರನ್ನು ಬಲಿ ಪಡೆದ ಟ್ಯಾಂಕರ್​ ಲಾರಿ
ಸಾಂದರ್ಭಿಕ ಚಿತ್ರ
Follow us on

ಬೆಂಗಳೂರು: ರಸ್ತೆ ಮೇಲೆ ಸಾಗುವಾಗ ನಾವು ಎಷ್ಟೇ ಎಚ್ಚರಿಕೆಯಿಂದ ಇದ್ದರೂ ಅದು ಸಾಲುವುದಿಲ್ಲ. ಚಿತ್ರದುರ್ಗದಲ್ಲೂ ಇದೇ ರೀತಿ ಆಗಿದೆ. ಟ್ಯಾಂಕರ್ ಲಾರಿಗೆ ಕಾರೊಂದು ಡಿಕ್ಕಿಯಾಗಿದೆ. ಪರಿಣಾಮ ಮೂವರ ಮೃತಪಟ್ಟಿದ್ದಾರೆ.

ಚಿತ್ರದುರ್ಗ ತಾಲೂಕಿನ ಕ್ಯಾದಿಗ್ಗೆರೆ ಬಳಿ ಭೀಕರ ಅಪಘಾತ ಸಂಭವಿಸಿದೆ. ಬೆಂಗಳೂರಿನ ಕೆಂಗೇರಿಯ ರೇಣುಕಮ್ಮ(55) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಶಿವು(43), ಶಂಕರ್(42) ಗಂಭೀರವಾಗಿ ಗಾಯಗೊಂಡಿದ್ದರು. ಇವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಚಿತ್ರದುರ್ಗ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇನ್ನು, ಅಪಘಾತ ಸಂಭವಿಸಲು ಕಾರಣ ಯಾರು ಎನ್ನುವ ವಿಚಾರ ಇನ್ನೂ ಬಹಿರಂಗವಾಗಿಲ್ಲ. ಸದ್ಯ, ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

 

ಅಡ್ಡ ಬಂದ ದ್ವಿಚಕ್ರ ವಾಹನ ತಪ್ಪಿಸಲು ಹೋಗಿ ಅಪಘಾತಕ್ಕಿಡಾದ KSRTC ಬಸ್‌