ಫ್ಯಾನ್ಸ್ ಎಂದು ಯಾಮಾರಿದ ರಶ್ಮಿಕಾ ಮನೆಯವರು, ಒಳಗೆ ಬಂದ್ಮೇಲೆ ಫುಲ್ ಶಾಕ್

ಮಡಿಕೇರಿ: ನಟಿ ರಶ್ಮಿಕಾ ಮಂದಣ್ಣ ಅಭಿಮಾನಿಗಳ ಹೆಸರಿನಲ್ಲಿ ಐಟಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಕೊಡಗು ಜಿಲ್ಲೆಯ ವಿರಾಜಪೇಟೆಯಲ್ಲಿರುವ ರಶ್ಮಿಕಾ ನಿವಾಸ‌ಕ್ಕೆ ರಶ್ಮಿಕಾ ಫ್ಯಾನ್ಸ್ ಅಂತಾ ಎಂಟ್ರಿ ಕೊಟ್ಟ ಐಟಿ ಅಧಿಕಾರಿಗಳನ್ನು ರಶ್ಮಿಕಾ ಮನೆಯವರು ಸ್ವಾಗತಿಸಿದ್ದಾರೆ. ಮನೆ ಒಳಗೆ ಬಂದ ನಂತರ ಬಂದಿರುವುದು ಐಟಿ ಅಧಿಕಾರಿಗಳು ಫ್ಯಾನ್ಸ್ ಅಲ್ಲ ಎಂದು ತಿಳಿದ ಮೇಲೆ ಮನೆಯವರೆಲ್ಲಾ ಕಕ್ಕಾಬಿಕ್ಕಿಯಾಗಿದ್ದಾರೆ. ಸದ್ಯ ರಶ್ಮಿಕಾ ಏನ್ ಮಾಡ್ತಿದ್ದಾರೆ. ಎಲ್ಲಿದ್ದಾರೆ? ತಮಿಳು ಸಿನಿಮಾದಲ್ಲೂ ಫುಲ್ ಬ್ಯುಸಿಯಾಗಿರುವ ರಶ್ಮಿಕಾ ಮಂದಣ್ಣ. ಖ್ಯಾತ ನಟ ಕಾರ್ತಿ ಶಿವಕುಮಾರ್ ಜತೆ […]

ಫ್ಯಾನ್ಸ್ ಎಂದು ಯಾಮಾರಿದ ರಶ್ಮಿಕಾ ಮನೆಯವರು, ಒಳಗೆ ಬಂದ್ಮೇಲೆ ಫುಲ್ ಶಾಕ್
Follow us
ಸಾಧು ಶ್ರೀನಾಥ್​
|

Updated on:Jan 16, 2020 | 2:17 PM

ಮಡಿಕೇರಿ: ನಟಿ ರಶ್ಮಿಕಾ ಮಂದಣ್ಣ ಅಭಿಮಾನಿಗಳ ಹೆಸರಿನಲ್ಲಿ ಐಟಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಕೊಡಗು ಜಿಲ್ಲೆಯ ವಿರಾಜಪೇಟೆಯಲ್ಲಿರುವ ರಶ್ಮಿಕಾ ನಿವಾಸ‌ಕ್ಕೆ ರಶ್ಮಿಕಾ ಫ್ಯಾನ್ಸ್ ಅಂತಾ ಎಂಟ್ರಿ ಕೊಟ್ಟ ಐಟಿ ಅಧಿಕಾರಿಗಳನ್ನು ರಶ್ಮಿಕಾ ಮನೆಯವರು ಸ್ವಾಗತಿಸಿದ್ದಾರೆ. ಮನೆ ಒಳಗೆ ಬಂದ ನಂತರ ಬಂದಿರುವುದು ಐಟಿ ಅಧಿಕಾರಿಗಳು ಫ್ಯಾನ್ಸ್ ಅಲ್ಲ ಎಂದು ತಿಳಿದ ಮೇಲೆ ಮನೆಯವರೆಲ್ಲಾ ಕಕ್ಕಾಬಿಕ್ಕಿಯಾಗಿದ್ದಾರೆ.

ಸದ್ಯ ರಶ್ಮಿಕಾ ಏನ್ ಮಾಡ್ತಿದ್ದಾರೆ. ಎಲ್ಲಿದ್ದಾರೆ? ತಮಿಳು ಸಿನಿಮಾದಲ್ಲೂ ಫುಲ್ ಬ್ಯುಸಿಯಾಗಿರುವ ರಶ್ಮಿಕಾ ಮಂದಣ್ಣ. ಖ್ಯಾತ ನಟ ಕಾರ್ತಿ ಶಿವಕುಮಾರ್ ಜತೆ ನಟಿಸುತ್ತಿದ್ದಾರೆ. ತಮಿಳಿನ ಬಕ್ಕಿಯರಾಜ್ ಕಣ್ಣನ್ ನಿರ್ದೇಶನದ ಸುಲ್ತಾನ್ ಸಿನಿಮಾದ ಚಿತ್ರೀಕರಣದಲ್ಲಿ ಬಿಜಿಯಾಗಿದ್ದಾರೆ. 2021ಕ್ಕೆ ಸಿನಿಮಾ ರಿಲೀಸ್ ಮಾಡಲು ಚಿತ್ರತಂಡ ಪ್ಲಾನ್ ಮಾಡಿಕೊಂಡಿದೆ.

ರಶ್ಮಿಕಾ ತೆಲುಗು ನಂತರ ಮೊದಲ ಬಾರಿಗೆ ತಮಿಳು ಚಿತ್ರರಂಗಕ್ಕೆ ಕಾಲಿಡುತ್ತಿದ್ದಾರೆ. ಕನ್ನಡದಲ್ಲಿ ಕಿರಿಕ್ ಪಾರ್ಟಿ, ಅಂಜನಿ ಪುತ್ರ,ಚಮಕ್, ಯಜಮಾನ, ಪೊಗರು ಸೇರಿದಂತೆ ಒಟ್ಟು ಐದು ಚಿತ್ರಗಳಲ್ಲಿ ರಶ್ಮಿಕಾ ಅಭಿನಯಿಸಿದ್ದಾರೆ. ತೆಲುಗಿನಲ್ಲಿ ಒಪ್ಪಿಕೊಂಡಿರುವ ಚಿತ್ರಗಳನ್ನು ಸೇರಿಸಿದರೆ ಒಟ್ಟು ಏಳು ಚಿತ್ರಗಳಾಗಿವೆ. ಚಲೋ, ಗೀತಗೋವಿಂದಂ, ದೇವದಾಸ್, ಡಿಯರ್ ಕಾಮ್ ರೇಡ್, ಸರಿಲೇರು ನೀಕ್ಕೆವರು, ಭೀಷ್ಮಾ, AA-20 ರಶ್ಮಿಕಾಳ ತೆಲುಗು ಚಿತ್ರಗಳು.

ಸೆರೆನಿಟಿ ಹಾಲ್​ನಲ್ಲಿ ಐಟಿ ಅಧಿಕಾರಿಗಳಿಂದ ಪರಿಶೀಲನೆ: ರಶ್ಮಿಕಾ ಮಂದಣ್ಣ ನಿವಾಸದ ಮೇಲೆ ಐಟಿ ದಾಳಿ ಬೆನ್ನಲೆ ಈಗ ರಶ್ಮಿಕಾ ಮಂದಣ್ಣ ತಂದೆ ಒಡೆತನದ ಸೆರೆನಿಟಿ ಹಾಲ್​ನಲ್ಲಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಒಂದು ತಂಡದಿಂದ ರಶ್ಮಿಕಾ ನಿವಾಸ‌ದಲ್ಲಿ ಪರಿಶೀಲನೆ ನಡೀತಿದ್ರೆ. ಮತ್ತೊಂದು ತಂಡದಿಂದ ಸೆರೆನಿಟಿ ಹಾಲ್​ನಲ್ಲಿ ಪರಿಶೀಲನೆ ನಡೆಯುತ್ತಿದೆ.

Published On - 12:17 pm, Thu, 16 January 20

ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ