ಮಹಾರಾಷ್ಟ್ರದಲ್ಲಿ ಮಳೆ, ಕರ್ನಾಟಕದಲ್ಲಿ ಸಂಕಷ್ಟ: ಆತಂಕದಲ್ಲಿ ನದಿ ಪಾತ್ರದ ಜನತೆ
ಬೆಳಗಾವಿ: ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಗೆ ಕರ್ನಾಟಕದ ಉತ್ತರ ಭಾಗದಲ್ಲಿ ಸಂಕಷ್ಟ ತಲೆದೋರಿದೆ. ಮಹಾರಾಷ್ಟ್ರಕ್ಕೆ ಹೊಂದಿಕೊಂಡಿರುವ ಬೆಳಗಾವಿ ಜಿಲ್ಲೆಯಲ್ಲಿ ಪ್ರವಾಹ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಹೌದು ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಸತತ ಮಳೆಯಿಂದ ನದಿಗಳು ತುಂಬಿ ಹರಿಯುತ್ತಿವೆ. ಯಾವ ಪರಿಯಂದ್ರೆ ಘಟಪ್ರಭಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಪರಿಣಾಮ ನದಿ ದಂಡೆಯ ಮೇಲಿನ ಗ್ರಾಮಗಳು ಜಲಾವೃವಾಗುತ್ತಿದ್ದು, ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಷ್ಟೇ ಅಲ್ಲ ಭಾರತದ ನಯಾಗಾರ ಎಂದೇ ಖ್ಯಾತಿ ಪಡೆದಿರುವ ಗೋಕಾಕ್ ಜಲಪಾತ ಈಗ ಮೈದುಂಬಿ […]
ಬೆಳಗಾವಿ: ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಗೆ ಕರ್ನಾಟಕದ ಉತ್ತರ ಭಾಗದಲ್ಲಿ ಸಂಕಷ್ಟ ತಲೆದೋರಿದೆ. ಮಹಾರಾಷ್ಟ್ರಕ್ಕೆ ಹೊಂದಿಕೊಂಡಿರುವ ಬೆಳಗಾವಿ ಜಿಲ್ಲೆಯಲ್ಲಿ ಪ್ರವಾಹ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ.
ಹೌದು ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಸತತ ಮಳೆಯಿಂದ ನದಿಗಳು ತುಂಬಿ ಹರಿಯುತ್ತಿವೆ. ಯಾವ ಪರಿಯಂದ್ರೆ ಘಟಪ್ರಭಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಪರಿಣಾಮ ನದಿ ದಂಡೆಯ ಮೇಲಿನ ಗ್ರಾಮಗಳು ಜಲಾವೃವಾಗುತ್ತಿದ್ದು, ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ.
ಇಷ್ಟೇ ಅಲ್ಲ ಭಾರತದ ನಯಾಗಾರ ಎಂದೇ ಖ್ಯಾತಿ ಪಡೆದಿರುವ ಗೋಕಾಕ್ ಜಲಪಾತ ಈಗ ಮೈದುಂಬಿ ಹರಿಯುತ್ತಿದೆ. ಬೆಳಗಾವಿ ಜಿಲ್ಲೆಯ ಗೋಕಾಕ್ ನಗರದ ಹೊರ ವಲಯದಲ್ಲಿರುವ ಪಾಲ್ಸ್ ರಭಸದಲ್ಲಿ ದುಮುಕುತ್ತಿದೆ. ಇದರಿಂದಾಗಿ ಗೋಕಾಕ್ ತಾಲೂಕಿನ ನದಿಪಾತ್ರದ ಜನರಲ್ಲಿ ಆತಂಕ ಮನೆಮಾಡಿದೆ.
Published On - 3:46 pm, Thu, 6 August 20