ಹಾಸನ: ಮಾಜಿ ಸಚಿವ ಹಾಗೂ ಜೆಡಿಎಸ್ ನಾಯಕ ಹೆಚ್.ಡಿ.ರೇವಣ್ಣ ಆಪ್ತನ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಹಾಸನ ನಗರದ ಸಂಗಮೇಶ್ವರ ಬಡಾವಣೆಯಲ್ಲಿರುವ ಜೆಡಿಎಸ್ ಕಾರ್ಯಕರ್ತ ಕ್ಲಾಸ್ ಒನ್ ಕಂಟ್ರಾಕ್ಟರ್ ಶಿವಕುಮಾರ್ ಮನೆ ಮೇಲೆ ಐಟಿ ಇಲಾಖೆ ಅಧಿಕಾರಿಗಳು ರೇಡ್ ಮಾಡಿದ್ದಾರೆ.
ನಿನ್ನೆ ಬೆಳಗ್ಗೆ 8 ಗಂಟೆಗೆ ದಾಳಿ ಮಾಡಿದ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಸಂಜೆವರೆಗೂ ಪರಿಶೀಲನೆ ನಡೆಸಿದ್ದಾರೆ. ಅಲ್ಲದೆ, ಇಂದೂ ಸಹ ಹಾಸನದ ಬೇಲೂರು ರಸ್ತೆಯಲ್ಲಿರುವ ಐಟಿ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗುವಂತೆ ಶಿವಕುಮಾರ್ಗೆ ಸೂಚನೆ ನೀಡಿದ್ದಾರೆ.
ಕಳೆದ ಲೋಕಸಭಾ ಚುನಾವಣಾ ಸಂದರ್ಭದಲ್ಲೂ ಹೆಚ್.ಡಿ.ರೇವಣ್ಣ ಆಪ್ತರ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದರು. ಇದೀಗ ಎರಡನೇ ಸುತ್ತಿನಲ್ಲಿ ಮತ್ತೆ ರೇವಣ್ಣ ಅವರ ಕೆಲ ಆಪ್ತರ ನಿವಾಸಗಳ ಮೇಲೆ ದಾಳಿ ಮಾಡಿ ಪರಿಶೀಲನೆ ನಡೆಸುತ್ತಿದ್ದಾರೆ.