India vs England 1st Test Live Streaming: ಫೆ.5ರಿಂದ ಆರಂಭವಾಗುವ ಟೆಸ್ಟ್​ ಪಂದ್ಯದ ನೇರ ಪ್ರಸಾರ ಯಾವ ಚಾನೆಲ್​ನಲ್ಲಿ?

India vs England: ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೊದಲ ಟೆಸ್ಟ್ ಫೆಬ್ರವರಿ 5-9ರ ನಡುವೆ ನಡೆಯಲಿದ್ದು, ಚೆನ್ನೈನ ಎಂ.ಎ.ಚಿದಂಬರಂ ಕ್ರೀಡಾಂಗಣದಲ್ಲಿ ಪಂದ್ಯ ನಡೆಯಲಿದೆ. ಮೊದಲ ಟೆಸ್ಟ್ ಭಾರತೀಯ ಕಾಲಮಾನ ಬೆಳಿಗ್ಗೆ 9.30 ಕ್ಕೆ ಪ್ರಾರಂಭವಾಗಲಿದ್ದು, ಟಾಸ್ ಪ್ರಕ್ರಿಯೆ ಬೆಳಿಗ್ಗೆ 9 ಗಂಟೆಗೆ ನಡೆಯಲಿದೆ.

India vs England 1st Test Live Streaming: ಫೆ.5ರಿಂದ ಆರಂಭವಾಗುವ ಟೆಸ್ಟ್​ ಪಂದ್ಯದ ನೇರ ಪ್ರಸಾರ ಯಾವ ಚಾನೆಲ್​ನಲ್ಲಿ?
ಅಭ್ಯಾಸದಲ್ಲಿ ಕೊಹ್ಲಿ, ರಹಾನೆ
Follow us
ಪೃಥ್ವಿಶಂಕರ
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Feb 04, 2021 | 6:44 PM

ಚೆನ್ನೈ: ಭಾರತ- ಇಂಗ್ಲೆಂಡ್​ ನಡುವಿನ ನಾಲ್ಕು ಟೆಸ್ಟ್ ಸರಣಿಗಾಗಿ ಚೆನ್ನೈನ ಛೆಪಾಕ್​ ಕ್ರಿಕೆಟ್‌ ಮೈದಾನದಲ್ಲಿ ಭರ್ಜರಿ ತಯಾರಿ ನಡೆಯುತ್ತಿದೆ. ಶುಕ್ರವಾರದಿಂದ (ಫೆ.5) ಪ್ರಾರಂಭವಾಗುವ ಟೆಸ್ಟ್​ಗಾಗಿ ಟೀಂ ಇಂಡಿಯಾದ 15 ಆಟಗಾರರನ್ನೊಳಗೊಂಡ ಸ್ಕ್ವಾಡ್​ ಸಹ ರೆಡಿಯಾಗಿದೆ. ಬಿಸಿಸಿಐ ರೆಡಿ ಮಾಡಿರುವ ಈ ಪಟ್ಟಿಯಲ್ಲಿ ಆಸಿಸ್​ ಸರಣಿಯಿಂದ ಹೊರಗುಳಿದಿದ್ದ ಸ್ಟಾರ್​ ಆಟಗಾರರು ತಂಡಕ್ಕೆ ವಾಪಾಸ್ಸಾಗಿದ್ದಾರೆ. ಆದರೆ ವೇಗಿಗಳಾದ ಮೊಹಮ್ಮದ್ ಶಮಿ, ಉಮೇಶ್ ಯಾದವ್ ಮತ್ತು ಆಲ್‌ರೌಂಡರ್ ರವೀಂದ್ರ ಜಡೇಜಾ ಗಾಯದಿಂದ ಚೇತರಿಸಿಕೊಳ್ಳದ ಕಾರಣ ಅವರನ್ನು ಇಂಗ್ಲೆಂಡ್ ಸರಣಿಯ ಮೊದಲಾರ್ಧದಿಂದ ಹೊರಗಿಡಲಾಗಿದೆ.

ಬಲಿಷ್ಠ ತಂಡದೊಂದಿಗೆ ಭಾರತಕ್ಕೆ ಬಂದಿರುವ ಇಂಗ್ಲೆಂಡ್​ ತಂಡ ಈಗಾಗಲೇ ಕ್ವಾರಂಟೈನ್​ ಮುಗಿಸಿ ಅಭ್ಯಾಸದಲ್ಲಿ ನಿರತವಾಗಿದೆ. ಕಳೆದ ಶ್ರೀಲಂಕಾ ಸರಣಿಯಲ್ಲಿ ಅಬ್ಬರಿಸಿದ್ದ ಇಂಗ್ಲೆಂಡ್​ ತಂಡದ ನಾಯಕ ಜೋ ರೂಟ್​, ಈ ಸರಣಿಯಲ್ಲೂ ತಮ್ಮ ಅದ್ಭುತ ಬ್ಯಾಟಿಂಗ್​ ಫಾರ್ಮ್​ ಅನ್ನು ಮುಂದುವರೆಸುವ ತವಕದಲ್ಲಿದ್ದಾರೆ. ಅಲ್ಲದೆ ಜೋ ರೂಟ್​, ಟೆಸ್ಟ್​ ಕ್ರಿಕೆಟ್​ನಲ್ಲಿ  ಸಚಿನ್ ಮಾಡಿರುವ​ ದಾಖಲೆಯನ್ನು ಮುರಿಯುವ ಸಾಮರ್ಥ್ಯ ಹೊಂದಿದ್ದಾರೆ ಎಂಬ ಕ್ರಿಕೆಟ್‌ ಪಂಡಿತರ ಹೊಗಳಿಕೆ ಜೋ ರೂಟ್​ಗೆ ಆನೆಬಲ ತಂದಿದೆ.

ನಾಳೆಯಿಂದ ಆರಂಭಗೊಳ್ಳಲಿರುವ ಪಂದ್ಯದ ವಿವರಗಳು ಇಲ್ಲಿದೆ.. ಚೆನ್ನೈನ ಎಂ.ಎ.ಚಿದಂಬರಂ ಕ್ರೀಡಾಂಗಣದಲ್ಲಿ ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೊದಲ ಟೆಸ್ಟ್ ಫೆ.5-9ರ ನಡುವೆ ನಡೆಯಲಿದೆ. ಮೊದಲ ಟೆಸ್ಟ್ ಭಾರತೀಯ ಕಾಲಮಾನ ಬೆಳಿಗ್ಗೆ 9.30 ಕ್ಕೆ ಪ್ರಾರಂಭವಾಗಲಿದ್ದು, ಟಾಸ್ ಪ್ರಕ್ರಿಯೆ ಬೆಳಿಗ್ಗೆ 9 ಗಂಟೆಗೆ ನಡೆಯಲಿದೆ. ಈ ಹೈವೋಲ್ಟೇಜ್​ ಪಂದ್ಯ ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ (star sports network) ಪ್ರಸಾರವಾಗಲಿದೆ. ಜೊತೆಗೆ ಹಾಟ್‌ಸ್ಟಾರ್ ಡಿಸ್ನಿ (Hotstar Disney) + ಅಪ್ಲಿಕೇಶನ್ ಮತ್ತು ವೆಬ್‌ಸೈಟ್‌ನಲ್ಲೂ ಸಹ ನೇರ ಪ್ರಸಾರ ವೀಕ್ಷಿಸಬಹುದು.

India vs England Test Series : ಗಿಲ್ ಆಡುವುದನ್ನು ನೋಡುತ್ತಿದ್ದರೆ ಮಾರ್ಟಿನ್ ಕ್ರೋವ್ ನೆನಪಾಗುತ್ತಾರೆ: ಕೈಲ್ ಮಿಲ್ಸ್

Published On - 4:11 pm, Thu, 4 February 21

ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ