AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಸ್ಟ್ ಗಾರ್ಡ್ ನಾವಿಕ ಹುದ್ದೆಯ ನೇಮಕಾತಿ ಪ್ರಕ್ರಿಯೆ ಆರಂಭ: ₹ 21,700 ವೇತನ

ಭಾರತೀಯ ಕೋಸ್ಟ್ ಗಾರ್ಡ್ ವತಿಯಿಂದ ನಾವಿಕ ಹುದ್ದೆ ನೇಮಕಾತಿ ಪ್ರಕ್ರಿಯೆ ಪ್ರಾರಂಭಗೊಂಡಿದೆ. ಅರ್ಜಿ ನಮೂನೆಗಳು ಈಗಾಗಲೇ ಭಾರತೀಯ ಕೋಸ್ಟ್​ ಗಾರ್ಡ್​ ಅಧಿಕೃತ ವೆಬ್​ ಸೈಟ್​ನಲ್ಲಿ ಲಭ್ಯವಿದೆ. ಅಭ್ಯರ್ಥಿಗಳು ಡಿಸೆಂಬರ್ 7ರವರೆಗೆ ಅರ್ಜಿ ನಮೂನೆಗಳನ್ನು ಭರ್ತಿ ಮಾಡಲು ಅವಕಾಶಗಳಿದೆ.

ಕೋಸ್ಟ್ ಗಾರ್ಡ್ ನಾವಿಕ ಹುದ್ದೆಯ ನೇಮಕಾತಿ ಪ್ರಕ್ರಿಯೆ ಆರಂಭ: ₹ 21,700 ವೇತನ
ಸಾಂದರ್ಭಿಕ ಚಿತ್ರ
shruti hegde
| Edited By: |

Updated on:Dec 01, 2020 | 12:52 PM

Share

ದೆಹಲಿ: ಭಾರತೀಯ ಕೋಸ್ಟ್ ಗಾರ್ಡ್​ನ ನಾವಿಕ ಹುದ್ದೆ ನೇಮಕಾತಿ ಪ್ರಕ್ರಿಯೆ ಪ್ರಾರಂಭಗೊಂಡಿದೆ. ಅರ್ಜಿ ನಮೂನೆಗಳು ಈಗಾಗಲೇ ಭಾರತೀಯ ಕೋಸ್ಟ್​ ಗಾರ್ಡ್​ ಅಧಿಕೃತ ವೆಬ್​ಸೈಟ್​ನಲ್ಲಿ ಲಭ್ಯವಿದೆ. ಅಭ್ಯರ್ಥಿಗಳು ಡಿಸೆಂಬರ್ 7ರವರೆಗೆ ಅರ್ಜಿ ನಮೂನೆಗಳನ್ನು ಭರ್ತಿ ಮಾಡಲು ಅವಕಾಶಗಳಿದೆ.

ಅರ್ಹತೆ: 10ನೇ ತರಗತಿ ಮುಗಿಸಿದ ಪುರುಷ ಅಭ್ಯರ್ಥಿಗಳಿಗೆ ಅವಕಾಶವಿದೆ. ಕನಿಷ್ಠ ಶೇ 50 ರಷ್ಟು ಅಂಕಪಡೆದಿರಬೇಕು. ವಯೋಮಿತಿ 18ರಿಂದ 22 ವರ್ಷ. ಅಭ್ಯರ್ಥಿಗಳನ್ನು ಅಡುಗೆ ಹಾಗೂ ಉಸ್ತುವಾರಿಗಳಾಗಿ ನೇಮಿಸಲಾಗುವುದು.

ಆಯ್ಕೆ ಪ್ರಕ್ರಿಯೆ: ಲಿಖಿತ ಪರೀಕ್ಷೆ, ದೈಹಿಕ ಸಾಮರ್ಥ್ಯ ಮತ್ತು ಫಿಟ್​ನೆಟ್​ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು ಎಂದು ಭಾರತೀಯ ಕೋಸ್ಟ್​ಗಾರ್ಡ್​ ತಿಳಿಸಿದೆ. ಆ್ಯಪ್ಟಿಟ್ಯೂಡ್ ಟೆಸ್ಟ್​, ಗಣಿತ, ವಿಜ್ಞಾನ, ಇಂಗ್ಲಿಷ್ ವಿಷಯಗಳಿಗೆ ಸಂಬಂಧಿಸಿದಂತೆ ಮೌಖಿಕ ಪರೀಕ್ಷೆಗಳಿರುತ್ತವೆ. ಅಭ್ಯರ್ಥಿಗಳು ಸಾಮಾನ್ಯ ವ್ಯವಹಾರ ಮತ್ತು ಜ್ಞಾನವನ್ನು ಅರಿತಿರಬೇಕು.

ದಿನಾಂಕ: ಪರೀಕ್ಷೆಯು ಜನವರಿ 2021ರಲ್ಲಿ ನಡೆಯಲಿದೆ. ಡಿಸೆಂಬರ್ 1ರಂದು ಅಡ್ಮಿಟ್ ಕಾರ್ಡ್ಅನ್ನು ಬಿಡುಗಡೆ ಮಾಡಲಾಗುತ್ತದೆ. ಡಿಸೆಂಬರ್ 25ರ ಒಳಗೆ ಡೌನ್​ಲೋಡ್ ಮಾಡಿಕೊಳ್ಳಬಹುದು. ಪರೀಕ್ಷಾ ಸ್ಥಳವನ್ನು ಅಧಿಸೂಚನೆಯಲ್ಲಿ ತಿಳಿಸಿದಂತೆ ಆಯ್ಕೆ ಮಾಡಿಕೊಳ್ಳಬಹುದು.

ವೇತನ: ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ₹ 21,700 ವೇತನದ ಜೊತೆಗೆ ತುಟ್ಟಿಭತ್ಯೆ ಇದೆ. ಇದು ನಿಯೋಜಿಸುವ ಸ್ಥಳ, ಕೆಲಸದ ವಿಧಾನ ಅವಲಂಬಿಸಿ ಇತರ ಭತ್ಯೆಗಳು ಸಿಗುತ್ತವೆ ಎಂದು ಭಾರತೀಯ ಕೋಸ್ಟ್ ಗಾರ್ಡ್ ತಿಳಿಸಿದೆ.​

ಆನ್​ಲೈನ್ ಅಧಿಸೂಚನೆ: ನಾವಿಕ ಹುದ್ದೆ ಸಂಬಂಧಿಸಿದಂತೆ ಸಂಪೂರ್ಣ ಅಧಿಸೂಚನೆಗಾಗಿ https://bit.ly/2VohUzw ಲಿಂಕ್ ಕ್ಲಿಕ್ ಮಾಡಿ. ಆನ್​ಲೈನ್​ ಮೂಲಕ ಮಾತ್ರ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ www.joinindiancoustguard.gov.in ವೆಬ್​ಸೈಟ್​ ನೋಡಿ.

Published On - 12:51 pm, Tue, 1 December 20

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು