ಬೆಂಗಳೂರು ಕೈ ಶಾಸಕರಲ್ಲಿ ಆಂತರಿಕ ಭಿನ್ನಮತ, ಸಿದ್ದರಾಮಯ್ಯ ನಿವಾಸದಲ್ಲಿ ಮುಖಂಡರ ಸಭೆ

|

Updated on: Sep 03, 2020 | 1:24 PM

ಬೆಂಗಳೂರು: ಕಾಂಗ್ರೆಸ್ ಪಕ್ಷದಲ್ಲಿ ಆಂತರಿಕ ಭಿನ್ನಮತ ಸ್ಪೋಟಗೊಂಡಿದ್ದು, ನನ್ನ ವಿರುದ್ಧವೇ ಪಿತೂರಿ ನಡೆದಿದೆ ಎಂದು ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಇತ್ತೀಚೆಗೆ ಆರೋಪ ಮಾಡಿದ್ದಾರೆ. ಕೆ.ಜಿ ಹಳ್ಳಿ ಹಾಗೂ ಡಿ.ಜೆ ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಂತಹ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ, ನನ್ನ ಮೇಲೆಯೇ ಪಕ್ಷದಲ್ಲಿ ಪಿತೂರಿ ನಡೆಸಿದ್ದಾರೆ ಎಂದು ಕಾಂಗ್ರೆಸ್ ಪಕ್ಷದ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಆರೋಪ ಮಾಡಿದ್ದಾರೆ. ಆದ್ದರಿಂದ ಪಕ್ಷದಲ್ಲಿನ ಆತಂರಿಕ ಭಿನ್ನಮತ ಶಮನಕ್ಕಾಗಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮನೆಯಲ್ಲಿ ಕಾಂಗ್ರೆಸ್ ಮುಖಂಡರು ಸಭೆ […]

ಬೆಂಗಳೂರು ಕೈ ಶಾಸಕರಲ್ಲಿ ಆಂತರಿಕ ಭಿನ್ನಮತ, ಸಿದ್ದರಾಮಯ್ಯ ನಿವಾಸದಲ್ಲಿ ಮುಖಂಡರ ಸಭೆ
Follow us on

ಬೆಂಗಳೂರು: ಕಾಂಗ್ರೆಸ್ ಪಕ್ಷದಲ್ಲಿ ಆಂತರಿಕ ಭಿನ್ನಮತ ಸ್ಪೋಟಗೊಂಡಿದ್ದು, ನನ್ನ ವಿರುದ್ಧವೇ ಪಿತೂರಿ ನಡೆದಿದೆ ಎಂದು ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಇತ್ತೀಚೆಗೆ ಆರೋಪ ಮಾಡಿದ್ದಾರೆ.

ಕೆ.ಜಿ ಹಳ್ಳಿ ಹಾಗೂ ಡಿ.ಜೆ ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಂತಹ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ, ನನ್ನ ಮೇಲೆಯೇ ಪಕ್ಷದಲ್ಲಿ ಪಿತೂರಿ ನಡೆಸಿದ್ದಾರೆ ಎಂದು ಕಾಂಗ್ರೆಸ್ ಪಕ್ಷದ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಆರೋಪ ಮಾಡಿದ್ದಾರೆ. ಆದ್ದರಿಂದ ಪಕ್ಷದಲ್ಲಿನ ಆತಂರಿಕ ಭಿನ್ನಮತ ಶಮನಕ್ಕಾಗಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮನೆಯಲ್ಲಿ ಕಾಂಗ್ರೆಸ್ ಮುಖಂಡರು ಸಭೆ ಸೇರಿದ್ದಾರೆ.

ಸಿದ್ದರಾಮಯ್ಯ ನೇತೃತ್ವದಲ್ಲಿ ಶಾಸಕರ ಸಭೆ ನಡೆಯುತ್ತಿದ್ದು, ಮಾಜಿ ಸಚಿವ ಕೃಷ್ಣ ಬೈರೇಗೌಡ, ದಿನೇಶ್ ಗುಂಡೂರಾವ್, ಶಾಸಕ ರಿಜ್ವಾನ್ ಅರ್ಷದ್, ಎನ್.ಎ. ಹ್ಯಾರೀಸ್, ಹಾಗೂ ಅಖಂಡ ಶ್ರೀನಿವಾಸ ಮೂರ್ತಿ, ಎಂಎಲ್ ಸಿ ಗೋವಿಂದರಾಜು, ಪಿ.ಆರ್. ರಮೇಶ್, ನಾರಾಯಣ ಸ್ವಾಮಿ, ನಸೀರ್ ಅಹ್ಮದ್, ಐವಾನ್ ಡಿಸೋಜಾ ಸೇರಿ ಹಲವರು ಕಾಂಗ್ರೆಸ್ ಮುಖಂಡರು ಈ ಸಭೆಯಲ್ಲಿ ಭಾಗಿಯಾಗಿದ್ದಾರೆ.

Published On - 1:22 pm, Thu, 3 September 20