IPL 2022: ಪಂಜಾಬ್ ಕಿಂಗ್ಸ್ ತಂಡದ ಸ್ಪೋಟಕ ಬ್ಯಾಟ್ಸ್​ಮನ್​ ಆಗಮನ

ಪಂಜಾಬ್ ಕಿಂಗ್ಸ್ (PBKS) ತಂಡ: ಮಯಾಂಕ್ ಅಗರ್ವಾಲ್ (ನಾಯಕ), ಶಿಖರ್ ಧವನ್, ಜಾನಿ ಬೈರ್‌ಸ್ಟೋವ್, ಲಿಯಾಮ್ ಲಿವಿಂಗ್‌ಸ್ಟೋನ್, ಜಿತೇಶ್ ಶರ್ಮಾ, ಪ್ರಭಾಸಿಮ್ರಾನ್ ಸಿಂಗ್, ಒಡಿಯನ್ ಸ್ಮಿತ್, ಶಾರುಖ್ ಖಾನ್, ಹರ್‌ಪ್ರೀತ್ ಬ್ರಾರ್, ಕಗಿಸೊ ರಬಾಡ,

IPL 2022: ಪಂಜಾಬ್ ಕಿಂಗ್ಸ್ ತಂಡದ ಸ್ಪೋಟಕ ಬ್ಯಾಟ್ಸ್​ಮನ್​ ಆಗಮನ
punjab kings
Follow us
TV9 Web
| Updated By: ಝಾಹಿರ್ ಯೂಸುಫ್

Updated on: Mar 31, 2022 | 6:07 PM

ಮೊದಲ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಮಣಿಸಿರುವ ಪಂಜಾಬ್ ಕಿಂಗ್ಸ್​ ಇದೀಗ 2ನೇ ಪಂದ್ಯಕ್ಕೆ ಸಜ್ಜಾಗುತ್ತಿದೆ. ಶುಕ್ರವಾರ ನಡೆಯಲಿರುವ ತನ್ನ ಎರಡನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡ ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ವಿರುದ್ಧ ಆಡಲಿದೆ. ಕೆಕೆಆರ್ ವಿರುದ್ಧದ ಪಂದ್ಯಕ್ಕೂ ಮುನ್ನ ಪಂಜಾಬ್ ತಂಡಕ್ಕೆ ವಿಕೆಟ್ ಕೀಪರ್ ಬ್ಯಾಟ್ಸ್ ಮನ್ ಜಾನಿ ಬೈರ್​ಸ್ಟೋವ್ ಆಗಮಿಸಿರುವುದು ತಂಡದ ಬಲ ಹೆಚ್ಚಿಸಿದೆ. ಇದಾಗ್ಯೂ ಕೆಕೆಆರ್ ವಿರುದ್ದ ಬೈರ್​ಸ್ಟೋವ್ ಕಾಣಿಸಿಕೊಳ್ಳುವುದು ಅನುಮಾನ. ಏಕೆಂದರೆ ಜಾನಿ ಬೈರ್​ಸ್ಟೋವ್ ಮೂರು ದಿನಗಳ ಕಾಲ ಕ್ವಾರಂಟೈನ್​ಗೆ ಒಳಗಾಗಬೇಕಾಗುತ್ತದೆ. ಹೀಗಾಗಿ ಸಿಎಸ್​ಕೆ ವಿರುದ್ದ ಪಂದ್ಯದಲ್ಲಿ ಕಣಕ್ಕಿಳಿಯಬಹುದು.

ಇನ್ನು ಆರ್​ಸಿಬಿ ವಿರುದ್ದದ ಪಂದ್ಯದ ವೇಳೆ ಬೈರ್​ಸ್ಟೋವ್ ರಾಷ್ಟ್ರೀಯ ತಂಡದಲ್ಲಿದ್ದ ಕಾರಣ ಲಭ್ಯವಿರಲಿಲ್ಲ. ಇಂಗ್ಲೆಂಡ್ ಮತ್ತು ವೆಸ್ಟ್ ಇಂಡೀಸ್ ನಡುವೆ ಮೂರು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಆಡಿದ್ದ ಬೈರ್​ಸ್ಟೋವ್ ಇದೀಗ ಐಪಿಎಲ್​ಗೆ ಆಗಮಿಸಿದ್ದಾರೆ. ಅದರಂತೆ ಮುಂಬರುವ ಪಂದ್ಯಗಳಲ್ಲಿ ಪಂಜಾಬ್ ಕಿಂಗ್ಸ್​ ನಾಯಕ ಮಯಾಂಕ್ ಅಗರ್ವಾಲ್ ಮತ್ತು ಶಿಖರ್ ಧವನ್ ಅವರೊಂದಿಗೆ ಬಲಗೈ ಬ್ಯಾಟ್ಸ್‌ಮನ್ ಬೈರ್‌ಸ್ಟೋವ್ ಬ್ಯಾಟಿಂಗ್ ಲೈನ್‌ಅಪ್‌ಗೆ ಸೇರಲಿದ್ದಾರೆ.

ಇದಾಗ್ಯೂ ಬೈರ್​ಸ್ಟೋವ್ ಆಗಮನದಿಂದಾಗಿ ಪಂಜಾಬ್ ಕಿಂಗ್ಸ್ ತಂಡದಿಂದ ಯಾರು ಹೊರಬೀಳಲಿದ್ದಾರೆ ಎಂಬುದೇ ಕುತೂಹಲ. ಏಕೆಂದರೆ ಆರ್​ಸಿಬಿ ವಿರುದ್ದ ಕಣಕ್ಕಿಳಿದಿದ್ದ ಭಾನುಕಾ ರಾಜಪಕ್ಸೆ ಅತ್ಯುತ್ತಮ ಪ್ರದರ್ಶನ ನೀಡಿದ್ದರು. ಹೀಗಾಗಿ ಅವರನ್ನು ಉಳಿಸಿಕೊಳ್ಳಲಿದೆಯಾ ಅಥವಾ ಅವರ ಸ್ಥಾನದಲ್ಲಿ ವಿಕೆಟ್ ಕೀಪರ್ ಬ್ಯಾಟ್ಸ್​ಮನ್ ಆಗಿ ಜಾನಿ ಬೈರ್​ಸ್ಟೋವ್ ಆಡಲಿದ್ದಾರಾ ಕಾದು ನೋಡಬೇಕಿದೆ. ಕಳೆದ ಸೀಸನ್​ನಲ್ಲಿ ಜಾನಿ ಬೈರ್​ಸ್ಟೋವ್ ಸನ್ ರೈಸರ್ಸ್ ಹೈದರಾಬಾದ್ ತಂಡವನ್ನು ಪ್ರತಿನಿಧಿಸಿದ್ದರು. 28 IPL ಪಂದ್ಯಗಳಲ್ಲಿ 40 ರ ಸರಾಸರಿಯಲ್ಲಿ ಬೈರ್​ಸ್ಟೋವ್ ಒಟ್ಟು 1038 ರನ್ ಗಳಿಸಿದ್ದಾರೆ.

ಪಂಜಾಬ್ ಕಿಂಗ್ಸ್ (PBKS) ತಂಡ: ಮಯಾಂಕ್ ಅಗರ್ವಾಲ್ (ನಾಯಕ), ಶಿಖರ್ ಧವನ್, ಜಾನಿ ಬೈರ್‌ಸ್ಟೋವ್, ಲಿಯಾಮ್ ಲಿವಿಂಗ್‌ಸ್ಟೋನ್, ಜಿತೇಶ್ ಶರ್ಮಾ, ಪ್ರಭಾಸಿಮ್ರಾನ್ ಸಿಂಗ್, ಒಡಿಯನ್ ಸ್ಮಿತ್, ಶಾರುಖ್ ಖಾನ್, ಹರ್‌ಪ್ರೀತ್ ಬ್ರಾರ್, ಕಗಿಸೊ ರಬಾಡ, ರಾಹುಲ್ ಚಹರ್, ಅರ್ಷ್‌ದೀಪ್ ಸಿಂಗ್, ಇಶಾನ್ ಪೊರೆಲ್, ಸಂದೀಪ್ ಶರ್ಮಾ, ಅಥರ್ವ ಪತ್ರಾ, ವೈಭವ್‌, ರಾಜ್ ಅಂಗದ್ ಬಾವಾ, ಬೆನ್ನಿ ಹೋವೆಲ್, ರಿಷಿ ಧವನ್, ಭಾನುಕಾ ರಾಜಪಕ್ಸೆ, ಬಲ್ತೇಜ್ ಸಿಂಗ್, ರಿತಿಕ್ ಚಟರ್ಜಿ, ನಾಥನ್ ಎಲ್ಲಿಸ್, ಪ್ರೇರಕ್ ಮಂಕಡ್.

ಇದನ್ನೂ ಓದಿ: Harshal Patel: ಭರ್ಜರಿ ಬೌಲಿಂಗ್ ಮೂಲಕ ದಾಖಲೆ ಬರೆದ ಹರ್ಷಲ್ ಪಟೇಲ್

ಇದನ್ನೂ ಓದಿ: IPL 2022: ವನಿಂದು ಹಸರಂಗ ವಿಭಿನ್ನ ಸಂಭ್ರಮಕ್ಕೆ ಇದುವೇ ಕಾರಣ..!

Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್