IPL 2024: ಶತಕ ಸಿಡಿಸಿ ಅತ್ಯಂತ ಕಳಪೆ ದಾಖಲೆ ಬರೆದ ರೋಹಿತ್ ಶರ್ಮಾ

IPL 2024: ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್ 2024) 29ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡ ಸೋಲನುಭವಿಸಿದೆ. ಚೆನ್ನೈ ಸೂಪರ್ ಕಿಂಗ್ಸ್ ನೀಡಿದ 206 ರನ್​ಗಳ ಗುರಿಯನ್ನು ಬೆನ್ನತ್ತಿದ ಮುಂಬೈ ಇಂಡಿಯನ್ಸ್ ತಂಡವು 20 ಓವರ್​ಗಳಲ್ಲಿ 6 ವಿಕೆಟ್ ಕಳೆದುಕೊಂಡು 186 ರನ್ ಕಲೆಹಾಕಲಷ್ಟೇ ಶಕ್ತರಾದರು. ಈ ಮೂಲಕ ಸಿಎಸ್​ಕೆ ತಂಡವು 20 ರನ್​ಗಳ ಜಯ ಸಾಧಿಸಿದೆ.

TV9 Web
| Updated By: ಝಾಹಿರ್ ಯೂಸುಫ್

Updated on: Apr 15, 2024 | 8:53 AM

ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ (IPL 2024) ನಡೆದ 29ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡದ ಆರಂಭಿಕ ಆಟಗಾರ ರೋಹಿತ್ ಶರ್ಮಾ (Rohit Sharma) ಆಕರ್ಷಕ ಶತಕ ಬಾರಿಸಿದ್ದರು. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸಿಎಸ್​ಕೆ ತಂಡವು 20 ಓವರ್​ಗಳಲ್ಲಿ 4 ವಿಕೆಟ್ ಕಳೆದುಕೊಂಡು 206 ರನ್ ಕಲೆಹಾಕಿತು.

1 / 6
207 ರನ್​ಗಳ ಕಠಿಣ ಗುರಿಯನ್ನು ಬೆನ್ನತ್ತಿದ ಮುಂಬೈ ಇಂಡಿಯನ್ಸ್ ಪರ ರೋಹಿತ್ ಶರ್ಮಾ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದರು. ಆರಂಭದಲ್ಲಿ ಬಿರುಸಿನ ಆಟಕ್ಕೆ ಒತ್ತು ನೀಡಿದ್ದ ಹಿಟ್​ಮ್ಯಾನ್ ಆ ಬಳಿಕ ನಿಧಾನಗತಿಯಲ್ಲಿ ಸಾಗಿದರು. ಪರಿಣಾಮ ರೋಹಿತ್ ಶರ್ಮಾ ಶತಕ ಪೂರೈಸಲು ಬರೋಬ್ಬರಿ 61 ಎಸೆತಗಳನ್ನು ತೆಗೆದುಕೊಂಡರು.

2 / 6
ಇದರೊಂದಿಗೆ ಐಪಿಎಲ್​ನಲ್ಲಿ ನಿಧಾಗತಿಯಲ್ಲಿ ಸೆಂಚುರಿ ಸಿಡಿಸಿದ ಬ್ಯಾಟರ್​ಗಳ ಪಟ್ಟಿಗೆ ರೋಹಿತ್ ಶರ್ಮಾ ಹೆಸರು ಕೂಡ ಸೇರ್ಪಡೆಯಾಯಿತು. ಅಲ್ಲದೆ ಮುಂಬೈ ಇಂಡಿಯನ್ಸ್ ಪರ ಶತಕ ಪೂರೈಸಲು ಅತೀ ಹೆಚ್ಚು ಎಸೆತಗಳನ್ನು ಎದುರಿಸಿದ 2ನೇ ಬ್ಯಾಟರ್ ಎನಿಸಿಕೊಂಡರು.

3 / 6
ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವುದು ಮುಂಬೈ ಇಂಡಿಯನ್ಸ್ ತಂಡದ ಮಾಜಿ ನಾಯಕ, ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್. 2011 ರಲ್ಲಿ ಕೊಚ್ಚಿನ್ ಟಸ್ಕರ್ಸ್ ಕೇರಳ ತಂಡದ ವಿರುದ್ಧ ಸಚಿನ್ 66 ಎಸೆತಗಳಲ್ಲಿ ಶತಕ ಪೂರೈಸಿದ್ದರು. ಇದು ಮುಂಬೈ ಇಂಡಿಯನ್ಸ್ ಪರ ದಾಖಲಾದ ಅತ್ಯಂತ ನಿಧಾನಗತಿಯ ಸೆಂಚುರಿಯಾಗಿದೆ.

4 / 6
ಇದೀಗ 61 ಎಸೆತಗಳ ಮೂಲಕ ಶತಕ ಪೂರೈಸಿ ರೋಹಿತ್ ಶರ್ಮಾ ಈ ಪಟ್ಟಿಯಲ್ಲಿ 2ನೇ ಸ್ಥಾನ ಅಲಂಕರಿಸಿದ್ದಾರೆ. ಅಲ್ಲದೆ ಮುಂಬೈ ಪರ ಶತಕ ಸಿಡಿಸಲು 60 ಕ್ಕಿಂತ ಹೆಚ್ಚಿನ ಎಸೆತಗಳನ್ನು ಎದುರಿಸಿದ 2ನೇ ಬ್ಯಾಟರ್ ಎಂಬ ಕಳಪೆ ದಾಖಲೆಯೊಂದನ್ನು ಹಿಟ್​ಮ್ಯಾನ್ ತಮ್ಮದಾಗಿಸಿಕೊಂಡಿದ್ದಾರೆ.

5 / 6
ಇನ್ನು ಐಪಿಎಲ್ ಇತಿಹಾಸದಲ್ಲಿ ಅತೀ ಹೆಚ್ಚು ಎಸೆತಗಳನ್ನು ಎದುರಿಸಿ ಶತಕ ಪೂರೈಸಿದ ಕಳಪೆ ದಾಖಲೆ ವಿರಾಟ್ ಕೊಹ್ಲಿ ಹಾಗೂ ಮನೀಶ್ ಪಾಂಡೆ ಹೆಸರಿನಲ್ಲಿದೆ. 2009 ರಲ್ಲಿ ಡೆಕ್ಕನ್ ಚಾರ್ಜರ್ಸ್ ವಿರುದ್ಧ ಮನೀಶ್ ಪಾಂಡೆ 67 ಎಸೆತಗಳಲ್ಲಿ ಶತಕ ಪೂರೈಸಿ ಈ ಕಳಪೆ ದಾಖಲೆ ಬರೆದಿದ್ದರು. ಈ ಬಾರಿಯ ಐಪಿಎಲ್​ನಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ವಿರಾಟ್ ಕೊಹ್ಲಿ 67 ಎಸೆತಗಳಲ್ಲಿ ಸೆಂಚುರಿ ಸಿಡಿಸಿ ಈ ಅನಗತ್ಯ ದಾಖಲೆಯನ್ನು ಸರಿಗಟ್ಟಿದ್ದಾರೆ.

6 / 6
Follow us
‘ಈಗಿನ್ನೂ ಆಡೋಕೆ ಬರುತ್ತಿದೆ, ಅಡ್ಡಗಾಲು ಹಾಕಿದ್ರು’: ಚೈತ್ರಾ ಹಳೇ ರಾಗ

ಡಿನ್ನರ್​ ಸಭೆ ಗದ್ದಲದ ಮಧ್ಯ ಡಿಕೆಶಿ, ಸತೀಶ್, ಪರಮೇಶ್ವರ್ ಸುದ್ದಿಗೋಷ್ಠಿ

ಸಿದ್ದರಾಮಯ್ಯ ಅವರನ್ನು ‘ಹೀರೋ’ ಎಂದು ಕರೆಯುತ್ತಿದ್ದರು ಈ ಹಿರಿಯ ನಟಿ

Video: ಕೇರಳ ಉತ್ಸವದಲ್ಲಿ ಕೆರಳಿದ ಆನೆ, 20ಕ್ಕೂ ಅಧಿಕ ಮಂದಿಗೆ ಗಾಯ

ನಗರದಲ್ಲಿ ನಾಲ್ಕು ಕಡೆ ನಿರ್ಮಿಸಲಾಗಿದೆ ಹೊಸ ಪೊಲೀಸ್ ಠಾಣೆಗಳು!

ನಮ್ಮ ಸಭೆ ರದ್ದಾಗಿಲ್ಲ ಮುಂದೂಡಲ್ಪಟ್ಟಿದೆ ಅಷ್ಟೇ: ಪರಮೇಶ್ವರ್, ಗೃಹ ಸಚಿವ

ಜೆಈ ರವೀಂದ್ರ ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಅರೋಪ ಹಿನ್ನೆಲೆ ದಾಳಿ

Video: ಮಂಜಿನ ಹೊದಿಕೆ ಹೊದ್ದು ಮಲಗಿದ ತಾಜ್​ಮಹಲ್

156 ದಿನ ಗರಿಷ್ಠ ಮಟ್ಟ ಕಾಯ್ದುಕೊಂಡ ಕೆಆರ್​​ಎಸ್, ಮೊದಲ ಬಾರಿಗೆ ದಾಖಲೆ

ಆಟವೆಲ್ಲ ರಂಪಾಟವಾದಾಗ; ಹದ್ದುಮೀರಿ ನಡೆದುಕೊಂಡ ಸ್ಪರ್ಧಿಗಳು