IPL 2024: ಶತಕ ಸಿಡಿಸಿ ಅತ್ಯಂತ ಕಳಪೆ ದಾಖಲೆ ಬರೆದ ರೋಹಿತ್ ಶರ್ಮಾ
TV9 Web | Updated By: ಝಾಹಿರ್ ಯೂಸುಫ್
Updated on:
Apr 15, 2024 | 8:53 AM
IPL 2024: ಇಂಡಿಯನ್ ಪ್ರೀಮಿಯರ್ ಲೀಗ್ನ (ಐಪಿಎಲ್ 2024) 29ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡ ಸೋಲನುಭವಿಸಿದೆ. ಚೆನ್ನೈ ಸೂಪರ್ ಕಿಂಗ್ಸ್ ನೀಡಿದ 206 ರನ್ಗಳ ಗುರಿಯನ್ನು ಬೆನ್ನತ್ತಿದ ಮುಂಬೈ ಇಂಡಿಯನ್ಸ್ ತಂಡವು 20 ಓವರ್ಗಳಲ್ಲಿ 6 ವಿಕೆಟ್ ಕಳೆದುಕೊಂಡು 186 ರನ್ ಕಲೆಹಾಕಲಷ್ಟೇ ಶಕ್ತರಾದರು. ಈ ಮೂಲಕ ಸಿಎಸ್ಕೆ ತಂಡವು 20 ರನ್ಗಳ ಜಯ ಸಾಧಿಸಿದೆ.
1 / 6
ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ (IPL 2024) ನಡೆದ 29ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡದ ಆರಂಭಿಕ ಆಟಗಾರ ರೋಹಿತ್ ಶರ್ಮಾ (Rohit Sharma) ಆಕರ್ಷಕ ಶತಕ ಬಾರಿಸಿದ್ದರು. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸಿಎಸ್ಕೆ ತಂಡವು 20 ಓವರ್ಗಳಲ್ಲಿ 4 ವಿಕೆಟ್ ಕಳೆದುಕೊಂಡು 206 ರನ್ ಕಲೆಹಾಕಿತು.
2 / 6
207 ರನ್ಗಳ ಕಠಿಣ ಗುರಿಯನ್ನು ಬೆನ್ನತ್ತಿದ ಮುಂಬೈ ಇಂಡಿಯನ್ಸ್ ಪರ ರೋಹಿತ್ ಶರ್ಮಾ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದರು. ಆರಂಭದಲ್ಲಿ ಬಿರುಸಿನ ಆಟಕ್ಕೆ ಒತ್ತು ನೀಡಿದ್ದ ಹಿಟ್ಮ್ಯಾನ್ ಆ ಬಳಿಕ ನಿಧಾನಗತಿಯಲ್ಲಿ ಸಾಗಿದರು. ಪರಿಣಾಮ ರೋಹಿತ್ ಶರ್ಮಾ ಶತಕ ಪೂರೈಸಲು ಬರೋಬ್ಬರಿ 61 ಎಸೆತಗಳನ್ನು ತೆಗೆದುಕೊಂಡರು.
3 / 6
ಇದರೊಂದಿಗೆ ಐಪಿಎಲ್ನಲ್ಲಿ ನಿಧಾಗತಿಯಲ್ಲಿ ಸೆಂಚುರಿ ಸಿಡಿಸಿದ ಬ್ಯಾಟರ್ಗಳ ಪಟ್ಟಿಗೆ ರೋಹಿತ್ ಶರ್ಮಾ ಹೆಸರು ಕೂಡ ಸೇರ್ಪಡೆಯಾಯಿತು. ಅಲ್ಲದೆ ಮುಂಬೈ ಇಂಡಿಯನ್ಸ್ ಪರ ಶತಕ ಪೂರೈಸಲು ಅತೀ ಹೆಚ್ಚು ಎಸೆತಗಳನ್ನು ಎದುರಿಸಿದ 2ನೇ ಬ್ಯಾಟರ್ ಎನಿಸಿಕೊಂಡರು.
4 / 6
ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವುದು ಮುಂಬೈ ಇಂಡಿಯನ್ಸ್ ತಂಡದ ಮಾಜಿ ನಾಯಕ, ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್. 2011 ರಲ್ಲಿ ಕೊಚ್ಚಿನ್ ಟಸ್ಕರ್ಸ್ ಕೇರಳ ತಂಡದ ವಿರುದ್ಧ ಸಚಿನ್ 66 ಎಸೆತಗಳಲ್ಲಿ ಶತಕ ಪೂರೈಸಿದ್ದರು. ಇದು ಮುಂಬೈ ಇಂಡಿಯನ್ಸ್ ಪರ ದಾಖಲಾದ ಅತ್ಯಂತ ನಿಧಾನಗತಿಯ ಸೆಂಚುರಿಯಾಗಿದೆ.
5 / 6
ಇದೀಗ 61 ಎಸೆತಗಳ ಮೂಲಕ ಶತಕ ಪೂರೈಸಿ ರೋಹಿತ್ ಶರ್ಮಾ ಈ ಪಟ್ಟಿಯಲ್ಲಿ 2ನೇ ಸ್ಥಾನ ಅಲಂಕರಿಸಿದ್ದಾರೆ. ಅಲ್ಲದೆ ಮುಂಬೈ ಪರ ಶತಕ ಸಿಡಿಸಲು 60 ಕ್ಕಿಂತ ಹೆಚ್ಚಿನ ಎಸೆತಗಳನ್ನು ಎದುರಿಸಿದ 2ನೇ ಬ್ಯಾಟರ್ ಎಂಬ ಕಳಪೆ ದಾಖಲೆಯೊಂದನ್ನು ಹಿಟ್ಮ್ಯಾನ್ ತಮ್ಮದಾಗಿಸಿಕೊಂಡಿದ್ದಾರೆ.
6 / 6
ಇನ್ನು ಐಪಿಎಲ್ ಇತಿಹಾಸದಲ್ಲಿ ಅತೀ ಹೆಚ್ಚು ಎಸೆತಗಳನ್ನು ಎದುರಿಸಿ ಶತಕ ಪೂರೈಸಿದ ಕಳಪೆ ದಾಖಲೆ ವಿರಾಟ್ ಕೊಹ್ಲಿ ಹಾಗೂ ಮನೀಶ್ ಪಾಂಡೆ ಹೆಸರಿನಲ್ಲಿದೆ. 2009 ರಲ್ಲಿ ಡೆಕ್ಕನ್ ಚಾರ್ಜರ್ಸ್ ವಿರುದ್ಧ ಮನೀಶ್ ಪಾಂಡೆ 67 ಎಸೆತಗಳಲ್ಲಿ ಶತಕ ಪೂರೈಸಿ ಈ ಕಳಪೆ ದಾಖಲೆ ಬರೆದಿದ್ದರು. ಈ ಬಾರಿಯ ಐಪಿಎಲ್ನಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ವಿರಾಟ್ ಕೊಹ್ಲಿ 67 ಎಸೆತಗಳಲ್ಲಿ ಸೆಂಚುರಿ ಸಿಡಿಸಿ ಈ ಅನಗತ್ಯ ದಾಖಲೆಯನ್ನು ಸರಿಗಟ್ಟಿದ್ದಾರೆ.