ತಮಿಳುನಾಡಿಗೆ KRS ನೀರು ಹರಿಸುತ್ತಿರೋ ರಾಜ್ಯ ಸರ್ಕಾರ ಒತ್ತಡಕ್ಕೆ ಮಣಿಯಿತಾ?
ಕೆಆರ್ ಎಸ್ ಜಲಾಶಯದಲ್ಲಿ ನೀರಿನ ಮಟ್ಟ ಕಡಿಮೆ ಇದೆ. ಆದರೆ ತಮಿಳುನಾಡು ಸರ್ಕಾರದ ಒತ್ತಡಕ್ಕೆ ಮಣಿದಿರೋ ರಾಜ್ಯ ಸರ್ಕಾರ ನಾಲೆಗಳಿಗೆ ನೀರು ಹರಿಸುವುದನ್ನ ನಿಲ್ಲಿಸಿ, ಇದೀಗ ಕಾವೇರಿ ನದಿಯ ಮೂಲಕ ತಮಿಳುನಾಡಿಗೆ ನೀರು ಹರಿಸುತ್ತಿದೆ.
ಕೆ ಆರ್ ಎಸ್ ಜಲಾಶಯ -ಮಂಡ್ಯ ಜಿಲ್ಲೆಯ ರೈತರ ಜೀವನಾಡಿ. ಅಷ್ಟೇ ಅಲ್ಲ ಬೆಂಗಳೂರು, ಮೈಸೂರು ಸೇರಿದಂತೆ ಹಲವು ಜಿಲ್ಲೆಗಳಿಗೆ ಕುಡಿಯುವ ನೀರನ್ನ ಓದಗಿಸುವ ಜಲಾಶಯ. ಕೆಆರ್ ಎಸ್ ಜಲಾಶಯದಲ್ಲಿ ನೀರಿನ ಮಟ್ಟ ಕಡಿಮೆ ಇದೆ. ಆದರೆ ತಮಿಳುನಾಡು ಸರ್ಕಾರದ ಒತ್ತಡಕ್ಕೆ ಮಣಿದಿರೋ ರಾಜ್ಯ ಸರ್ಕಾರ ನಾಲೆಗಳಿಗೆ ನೀರು ಹರಿಸುವುದನ್ನ ನಿಲ್ಲಿಸಿ, ಇದೀಗ ಕಾವೇರಿ ನದಿಯ ಮೂಲಕ ತಮಿಳುನಾಡಿಗೆ ನೀರು ಹರಿಸುತ್ತಿದೆ. ಇದು ಜಿಲ್ಲೆಯ ರೈತರ ಆಕ್ರೋಶಕ್ಕೂ ಕೂಡ ಕಾರಣವಾಗಿದೆ. ಹೌದು ತಮಿಳುನಾಡು (Tamil Nadu) ಸರ್ಕಾರದ ಒತ್ತಡಕ್ಕೆ ರಾಜ್ಯ ಸರ್ಕಾರ (Karnataka government) ಮಣಿಯಿತಾ ಎಂಬ ಅನುಮಾನ ಮೂಡಿದ್ದು, ಕೆಆರ್ ಎಸ್ ಅಚ್ಚುಕಟ್ಟು ಪ್ರದೇಶ ವ್ಯಾಪ್ತಿಯ ನಾಲೆಗಳಿಗೆ ನೀರು ಹರಿಸುವುದನ್ನ ನಿಲ್ಲಿಸಿ (releasing KRS water), ಕೆಆರ್ ಎಸ್ ಜಲಾಶಯದಿಂದ ಕಾವೇರಿ ನದಿಯ ಮೂಲಕ 5,306 ಕ್ಯೂಸೆಸ್ ನೀರನ್ನ ಬಿಟ್ಟಿದೆ.
ಅಂದಹಾಗೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಕೃಷ್ಣರಾಜಸಾಗರ ಜಲಾಶಯ ಮಂಡ್ಯ ಜಿಲ್ಲೆಯ ರೈತರ ಜೀವನಾಡಿ. ಬೆಂಗಳೂರು, ಮೈಸೂರು ಸೇರಿದಂತೆ ಹಲವು ಜಿಲ್ಲೆಗಳಿಗೆ ಕುಡಿಯುವ ನೀರನ್ನ ಓದಗಿಸುವ ಜಲಾಶಯ. ಜಲಾಶಯದ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾದ ಪರಿಣಾಮ ಜಲಾಶಯದಲ್ಲಿ ಸದ್ಯ 113 ಅಡಿ ನೀರು ಸಂಗ್ರಹವಾಗಿದೆ. ಈ ಮಧ್ಯೆ ತಮಿಳುನಾಡಿಗೆ ನೀರು ಹರಿಸುವಂತೆ ತಮಿಳುನಾಡು ಸರ್ಕಾರ ಕಾವೇರಿ ನೀರು ನಿರ್ವಹನಾ ಮಂಡಳಿಗೆ ಒತ್ತಡ ಹೇರಿತ್ತು. ಹೀಗಾಗಿ ರಾಜ್ಯ ಸರ್ಕಾರ ಇಂತಹ ಪರಿಸ್ಥತಿಯಲ್ಲಿ ಮಂಡ್ಯ ಜಿಲ್ಲೆಯ ನಾಲೆಗಳಿಗೆ ನೀರು ಹರಿಸುವುದನ್ನ ನೆನ್ನೆಯಿಂದಲೇ ಸ್ಥಗಿತಗೊಳಿಸಿ, ಕಾವೇರಿ ನದಿಯ ಮೂಲಕ 5306 ಕ್ಯೂಸೆಸ್ ನೀರನ್ನ ತಮಿಳುನಾಡಿಗೆ ಹರಿಸಲಾಗುತ್ತಿದೆ. ಇದು ಜಿಲ್ಲೆಯ ರೈತರ ಆಕ್ರೋಶಕ್ಕೆ ಕಾರಣವಾಗಿದ್ದು, ನಾಲೆಗಳಿಗೆ ನೀರುಹರಿಸುವಂತೆ ರೈತರು ಸಹಾ ಪ್ರತಿಭಟನೆ ನಡೆಸಿದ್ದಾರೆ. ಅಲ್ಲದೆ ರಾಜ್ಯ ಸರ್ಕಾರದ ವಿರುದ್ದ ಆಕ್ರೋಶ ಸಹ ವ್ಯಕ್ತಪಡಿಸಿದ್ದಾರೆ ರೈತ ಮುಖಂಡ ನಂಜುಂಡೇಗೌಡ.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 8:42 am, Mon, 7 August 23