ವಿಕ್ಟೋರಿಯಾ ಆಸ್ಪತ್ರೆ ಮುಂದೆ ಜನ ಜಮಾವಣೆ.. ಇಂದೇ ಬಿಡುಗಡೆ ಆಗ್ತಾರಾ ವಿ.ಕೆ. ಶಶಿಕಲಾ?
ತಮಿಳುನಾಡು ಮಾಜಿ ಮುಖ್ಯಮಂತ್ರಿ ದಿವಂಗತ ಜಯಲಲಿತಾ ಆಪ್ತೆ, ಅಕ್ರಮ ಆಸ್ತಿ ಸಂಪಾದನೆ ಪ್ರಕರಣದಲ್ಲಿ ಜೈಲು ಸೇರಿದ್ದ ಶಶಿಕಲಾ ಇಂದು ಜೈಲಿನಿಂದ ಬಿಡುಗಡೆಯಾಗಬೇಕಿದೆ. ಆದ್ರೆ ಸದ್ಯ ವಿಕ್ಟೋರಿಯಾ ಆಸ್ಪತ್ರೆಯಲ್ಲಿರುವ ಶಶಿಕಲಾ ನಟರಾಜನ್, ಕೊರೊನಾ ಹಿನ್ನೆಲೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶಶಿಕಲಾರನ್ನು ನೋಡುವ ತವಕದಲ್ಲಿ ವಿಕ್ಟೋರಿಯಾ ಆಸ್ಪತ್ರೆಯ ಮುಂದೆ ಅವರ ನೂರಾರು ಅಭಿಮಾನಿಗಳು ಜಮಾಯಿಸಿದ್ದಾರೆ.
ಬೆಂಗಳೂರು: ಸುಮಾರು 4 ವರ್ಷಗಳ ಜೈಲು ಶಿಕ್ಷೆ ಬಳಿಕ ವಿ.ಕೆ. ಶಶಿಕಲಾ ಇಂದು ಜೈಲುವಾಸದಿಂದ ರಿಲೀಸ್ ಆಗುವ ಸಾದ್ಯತೆಗಳು ಹೆಚ್ಚಾಗಿವೆ. ಕಾನೂನಾತ್ಮಕವಾಗಿ ಶಶಿಕಲಾ ಬಿಡುಗಡೆಯಾಗಬಹದಾದರೂ ಆರೋಗ್ಯದಿಂದಾಗಿ ಅವರಿನ್ನೂ ಆಸ್ಪತ್ರೆಯಲ್ಲೇ ಉಳಿಯುವ ಸಾಧ್ಯತೆಗಳು ಹೆಚ್ಚಾಗಿವೆ.
ಹೌದು, ತಮಿಳುನಾಡು ಮಾಜಿ ಮುಖ್ಯಮಂತ್ರಿ ದಿವಂಗತ ಜಯಲಲಿತಾ ಆಪ್ತೆ, ಅಕ್ರಮ ಆಸ್ತಿ ಸಂಪಾದನೆ ಪ್ರಕರಣದಲ್ಲಿ ಜೈಲು ಸೇರಿದ್ದ ಶಶಿಕಲಾ ಇಂದು ಜೈಲಿನಿಂದ ಬಿಡುಗಡೆಯಾಗಬೇಕಿದೆ. ಆದ್ರೆ ಸದ್ಯ ವಿಕ್ಟೋರಿಯಾ ಆಸ್ಪತ್ರೆಯಲ್ಲಿರುವ ಶಶಿಕಲಾ ನಟರಾಜನ್, ಕೊರೊನಾ ಹಿನ್ನೆಲೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇದೇ ವೇಳೆ, ತಮ್ಮ ಅಧಿನಾಯಕಿ ಶಶಿಕಲಾರನ್ನು ನೋಡುವ ತವಕದಲ್ಲಿ ವಿಕ್ಟೋರಿಯಾ ಆಸ್ಪತ್ರೆಯ ಮುಂದೆ ಅವರ ನೂರಾರು ಅಭಿಮಾನಿಗಳು ಜಮಾಯಿಸಿದ್ದಾರೆ. ಅಭಿಮಾನಿಗಳು ಜಮಾವಣೆ ಹಿನ್ನೆಲೆ ಪೊಲೀಸ್ ಬಿಗಿಭದ್ರತೆ ಕೈಗೊಳ್ಳಲಾಗಿದೆ.
Published On - 10:55 am, Wed, 27 January 21