ಕೋಟಿಕೋಟಿ ವಂಚನೆ ಆರೋಪಿಯ ಜತೆ ನಟಿ ಜಾಕ್ವೆಲಿನ್ ಫರ್ನಾಂಡಿಸ್ ರೊಮ್ಯಾನ್ಸ್; ಫೋಟೋ ಲೀಕ್
200 ಕೋಟಿ ರೂ. ವಂಚನೆ ಪ್ರಕರಣದಲ್ಲಿ ಜಾಕ್ವೆಲಿನ್ ಕೈವಾಡ ಇದೆಯೋ ಇಲ್ಲವೋ ಎಂಬುದನ್ನು ಅಧಿಕಾರಿಗಳು ಪತ್ತೆ ಹಚ್ಚುತ್ತಿದ್ದಾರೆ. ಹೀಗಿರುವಾಗಲೇ ಜಾಕ್ವೆಲಿನ್ ಅವರು ಸುಕೇಶ್ ಜತೆ ಡೇಟಿಂಗ್ ನಡೆಸುತ್ತಿದ್ದರು ಎಂದು ವಕಲೀರು ಹೇಳಿದ್ದರು.
ಉದ್ಯಮಿಗಳಿಗೆ 200 ಕೋಟಿ ರೂಪಾಯಿ ವಂಚನೆ ಹಾಗೂ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾಕ್ವೆಲಿನ್ ಫರ್ನಾಂಡಿಸ್ ಸಂಕಷ್ಟಕ್ಕೆ ಸಿಲುಕಿದ್ದಾರೆ. ಪ್ರಕರಣದ ಕಿಂಗ್ಪಿನ್ ಸುಕೇಶ್ ಚಂದ್ರಶೇಖರ್ ಲಿಂಕ್ ಹೊಂದಿದ್ದರು ಎನ್ನಲಾಗಿದೆ. ಉದ್ಯಮಿಗಳಿಗೆ 200 ಕೋಟಿ ರೂ. ವಂಚಿಸಿದ ಆರೋಪದಲ್ಲಿ ಸುಕೇಶ್ ಚಂದ್ರಶೇಖರ್ ವಿಚಾರಣೆ ಎದುರಿಸುತ್ತಿದ್ದಾರೆ. ಅವರ ಜೊತೆ ಸಂಪರ್ಕದಲ್ಲಿ ಇದ್ದರು ಎಂಬ ಕಾರಣಕ್ಕೆ ಜಾಕ್ವೆಲಿನ್ ಫರ್ನಾಂಡಿಸ್ ಮೇಲೂ ಅನುಮಾನ ಮೂಡಿತ್ತು. ಈಗ ಇಬ್ಬರೂ ಆಪ್ತವಾಗಿರುವ ಫೋಟೋ ಲೀಕ್ ಆಗಿದೆ.
ಜಾಕ್ವೆಲಿನ್ ಫರ್ನಾಂಡಿಸ್ ಜತೆ ಮುಖ್ಯ ಆರೋಪಿ ಸುಕೇಶ್ ಚಂದ್ರಶೇಖರ್ ಹಲವು ಬಾರಿ ದೂರವಾಣಿ ಮೂಲಕ ಮಾತನಾಡಿರುವುದು ಅಧಿಕಾರಿಗಳಿಗೆ ತಿಳಿದುಬಂದಿದೆ. ಇಬ್ಬರ ನಡುವಿನ ವ್ಯವಹಾರ ಯಾವ ರೀತಿ ಇತ್ತು? 200 ಕೋಟಿ ರೂ. ವಂಚನೆ ಪ್ರಕರಣದಲ್ಲಿ ಜಾಕ್ವೆಲಿನ್ ಕೈವಾಡ ಇದೆಯೋ ಇಲ್ಲವೋ ಎಂಬುದನ್ನು ಅಧಿಕಾರಿಗಳು ಪತ್ತೆ ಹಚ್ಚುತ್ತಿದ್ದಾರೆ. ಹೀಗಿರುವಾಗಲೇ ಜಾಕ್ವೆಲಿನ್ ಅವರು ಸುಕೇಶ್ ಜತೆ ಡೇಟಿಂಗ್ ನಡೆಸುತ್ತಿದ್ದರು ಎಂದಿದ್ದರು. ಈ ಹೇಳಿಕೆ ಸೆನ್ಸೇಶನ್ ಸೃಷ್ಟಿ ಮಾಡಿತ್ತು. ಹೀಗಿರುವಾಗಲೇ ಫೋಟೋ ಲೀಕ್ ಆಗಿದೆ.
ಜಾಕ್ವೆಲಿನ್ ಫರ್ನಾಂಡಿಸ್ ಮತ್ತು ಸುಕೇಶ್ ಚಂದ್ರಶೇಖರ್ ಇಬ್ಬರ ನಡುವಿನ ರೋಮ್ಯಾಂಟಿಕ್ ಪೋಟೋ ಬಿಡುಗಡೆ ಆಗಿದೆ. ಕೆಲ ತಿಂಗಳ ಹಿಂದಷ್ಟೇ ಈ ಫೋಟೋ ತೆಗೆಯಲಾಗಿದೆ ಎನ್ನಲಾಗಿದೆ. ಅಕ್ಟೋಬರ್ನಲ್ಲಿ ಜಾರಿ ನಿರ್ದೇಶನಾಲಯದಿಂದ ಜಾಕ್ವೆಲಿನ್ ಫರ್ನಾಂಡೀಸ್ಗೆ ಸಮನ್ಸ್ ನೀಡಲಾಗಿತ್ತು.
ದೆಹಲಿ ಜೈಲಿನಲ್ಲಿ ಸುಕೇಶ್ ಚಂದ್ರಶೇಖರ್ ಇದ್ದಾರೆ. ಈತ ದೆಹಲಿ ಜೈಲಿನಲ್ಲಿ ಇದ್ದುಕೊಂಡೇ ಉದ್ಯಮಿಗಳ ಪತ್ನಿಯರಿಗೆ ಕಾಲ್ ಮಾಡಿ ಹಣ ವಸೂಲಿ ಮಾಡುತ್ತಿದ್ದರು ಎಂದು ವರದಿ ಆಗಿದೆ. ಈ ಮೊದಲು ತಮಿಳುನಾಡಿನ ಟಿಟಿವಿ ದಿನಕರನ್ಗೆ ಎಐಎಡಿಎಂಕೆ ಪಕ್ಷದ ಚಿಹ್ನೆ ಕೊಡಿಸುವುದಾಗಿ ಹೇಳಿ ಹಣ ಪಡೆದು ವಂಚನೆ ಮಾಡಿದ್ದ ಬಗ್ಗೆ ದೂರು ದಾಖಲಾಗಿದೆ. ಇವರ ಒಡೆತನದಲ್ಲಿ ಇದ್ದ ಚೆನ್ನೈನ ಬಂಗಲೆ, 82 ಲಕ್ಷ ರೂ. ಹಣ ಹಾಗೂ 10ಕ್ಕೂ ಹೆಚ್ಚು ಐಷಾರಾಮಿ ಕಾರುಗಳನ್ನು ಇಡಿ ಅಧಿಕಾರಿಗಳು ವಶಪಡಿಸಿಕೊಂಡಿದ್ದರು.
ಇದನ್ನೂ ಓದಿ: ನಾಲ್ಕು ಬಾರಿ ವಿಚಾರಣೆಯಿಂದ ತಪ್ಪಿಸಿಕೊಂಡ ‘ವಿಕ್ರಾಂತ್ ರೋಣ’ ನಟಿ ಜಾಕ್ವೆಲಿನ್ ಫರ್ನಾಂಡಿಸ್; ಮುಂದಿನ ಕ್ರಮ ಏನು?
ಅಕ್ರಮ ಹಣ ವರ್ಗಾವಣೆ ಪ್ರಕರಣದ ಕಿಂಗ್ ಪಿನ್ ಜತೆ ‘ವಿಕ್ರಾಂತ್ ರೋಣ’ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಡೇಟಿಂಗ್?
Published On - 3:53 pm, Sat, 27 November 21