ನೋಡ ನೋಡುತ್ತಿದ್ದಂತೆ ಧಗಧಗನೆ ಹೊತ್ತಿ ಉರಿದ ‘ಜಾಗ್ವಾರ್’ ಕಾರು, ಎಲ್ಲಿ?
ಬೆಂಗಳೂರು: ಹೆದ್ದಾರಿಯಲ್ಲಿ ಜಾಗ್ವಾರ್ ಕಾರು ಧಗಧಗನೆ ಹೊತ್ತಿ ಉರಿದಿರುವ ಘಟನೆ ನಗರದ ಮಾದನಾಯಕನಹಳ್ಳಿಯಲ್ಲಿ ನಡೆದಿದೆ.ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಮಾದನಾಯಕನಹಳ್ಳಿ ಬಳಿ ಈ ಘಟನೆ ಸಂಭವಿಸಿದೆ. ತಾಂತ್ರಿಕ ದೋಷದಿಂದ ಜಾಗ್ವಾರ್ ಕಾರು ಹೊತ್ತಿ ಉರಿದಿರಬಹುದೆಂಬ ಶಂಕೆ ವ್ಯಕ್ತವಾಗಿದೆ. ಮಾಹಿತಿ ತಿಳಿದ ಕೂಡಲೇ ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಆದರೆ ಬೆಂಕಿಯ ತೀವ್ರತೆಗೆ ಜಾಗ್ವಾರ್ ಕಾರು ಭಾಗಶಃ ಉರಿದು ಹೋಗಿದೆ. ನೆಲಮಂಗಲ ಸಂಚಾರಿ ಪೊಲೀಸ್ ಠಾಣ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಅವಘಡದಲ್ಲಿ ಅದೃಷ್ಟಷಾವತ್ […]

ಬೆಂಗಳೂರು: ಹೆದ್ದಾರಿಯಲ್ಲಿ ಜಾಗ್ವಾರ್ ಕಾರು ಧಗಧಗನೆ ಹೊತ್ತಿ ಉರಿದಿರುವ ಘಟನೆ ನಗರದ ಮಾದನಾಯಕನಹಳ್ಳಿಯಲ್ಲಿ ನಡೆದಿದೆ.ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಮಾದನಾಯಕನಹಳ್ಳಿ ಬಳಿ ಈ ಘಟನೆ ಸಂಭವಿಸಿದೆ.
ತಾಂತ್ರಿಕ ದೋಷದಿಂದ ಜಾಗ್ವಾರ್ ಕಾರು ಹೊತ್ತಿ ಉರಿದಿರಬಹುದೆಂಬ ಶಂಕೆ ವ್ಯಕ್ತವಾಗಿದೆ. ಮಾಹಿತಿ ತಿಳಿದ ಕೂಡಲೇ ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಆದರೆ ಬೆಂಕಿಯ ತೀವ್ರತೆಗೆ ಜಾಗ್ವಾರ್ ಕಾರು ಭಾಗಶಃ ಉರಿದು ಹೋಗಿದೆ. ನೆಲಮಂಗಲ ಸಂಚಾರಿ ಪೊಲೀಸ್ ಠಾಣ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಅವಘಡದಲ್ಲಿ ಅದೃಷ್ಟಷಾವತ್ ಕಾರಿನಲ್ಲಿದ್ದ ಮೂರು ಜನ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಾರು ಬೆಂಗಳೂರು ಕಡೆಯಿಂದ ತುಮಕೂರು ಮಾರ್ಗವಾಗಿ ಚಲಿಸುತ್ತಿತ್ತು, ಈ ವೇಳೆ ರಸ್ತೆಯಲ್ಲಿ ಅಫ್ ಅದ್ದರಿಂದ ಬ್ಯಾನೆಟ್ ಎತ್ತಿದ್ದಾರೆ. ಬ್ಯಾನೆಟ್ ಎತ್ತಿದ ತಕ್ಷಣವೇ ಇಡೀ ಕಾರು ಹೊತ್ತಿ ಉರಿದಿದೆ.
Published On - 5:15 pm, Sun, 22 November 20