ಪುನರ್ವಸತಿ ಕೇಂದ್ರ ಜಾಗ ತೆರವು ವಿರೋಧಿಸಿ ಹಳಿಂಗಳಿ ಗ್ರಾಮಸ್ಥರು, ಜೈನಮುನಿಗಳಿಂದ ಪ್ರತಿಭಟನೆ

ತಮದಡ್ಡಿ ಹಾಗೂ ಹಳಿಂಗಳಿ ಗ್ರಾಮಸ್ಥರ ಮಧ್ಯೆ ಒಂದೇ ಜಾಗಕ್ಕಾಗಿ ಹೋರಾಟ ನಡೆಯುತ್ತಿದೆ. ತಮದಡ್ಡಿ ಸಂತ್ರಸ್ತರಿಗೆ ಪುನರ್ವಸತಿ ಕೇಂದ್ರಕ್ಕೆ ಜಾಗ ನೀಡಲು ಅಧಿಕಾರಿಗಳು ತಿಳಿಸಿದ್ದಾರೆ. ಈ‌ ಜಾಗ ಬಿಟ್ಟು ಬೇರೆ ಕಡೆ ಕೊಡಿ ಎಂದು‌ ಹಳಿಂಗಳಿ ಗ್ರಾಮಸ್ಥರು, ಭದ್ರಗಿರಿ ಜೈನಮಂದಿರದ ಭಕ್ತರು ಹಾಗೂ‌ ಮುನಿಗಳು ಒತ್ತಾಯಿಸಿದ್ದಾರೆ.

ಪುನರ್ವಸತಿ ಕೇಂದ್ರ ಜಾಗ ತೆರವು ವಿರೋಧಿಸಿ ಹಳಿಂಗಳಿ ಗ್ರಾಮಸ್ಥರು, ಜೈನಮುನಿಗಳಿಂದ ಪ್ರತಿಭಟನೆ
ಪುನರ್ವಸತಿ ಕೇಂದ್ರ ಜಾಗ ತೆರವು ವಿರೋಧಿಸಿ ಹಳಿಂಗಳಿ ಗ್ರಾಮಸ್ಥರು, ಜೈನಮುನಿಗಳಿಂದ ಪ್ರತಿಭಟನೆ
Follow us
TV9 Web
| Updated By: ಆಯೇಷಾ ಬಾನು

Updated on:Aug 04, 2021 | 9:40 AM

ಬಾಗಲಕೋಟೆ: ಪುನರ್ವಸತಿ ಕೇಂದ್ರ ಜಾಗ ತೆರವಿಗೆ ವಿರೋಧ ವ್ಯಕ್ತಪಡಿಸಿ ಬಾಗಲಕೋಟೆ ಜಿಲ್ಲೆ ರಬಕವಿಬನಹಟ್ಟಿ ತಾಲೂಕಿನ ಹಳಿಂಗಳಿ ಭದ್ರಗಿರಿ ಬೆಟ್ಟದ ಜೈನಮಂದಿರದ ಜೈನಮುನಿ ಪ್ರತಿಭಟನೆ ನಡೆಸುತ್ತಿದ್ದಾರೆ. ಕಲ್ಲುಗಳಿಂದ ನಿರ್ಮಿಸಿದ ಗುಂಪಾದಲ್ಲಿ ಕೂತು ಜೈನಮುನಿ ಶಾಂತಿಧರ್ಮಭೂಷಣ ಮಹಾರಾಜರು ಪ್ರತಿಭಟನೆಗೆ ಮುಂದಾಗಿದ್ದಾರೆ.

ತಮದಡ್ಡಿ ಹಾಗೂ ಹಳಿಂಗಳಿ ಗ್ರಾಮಸ್ಥರ ಮಧ್ಯೆ ಒಂದೇ ಜಾಗಕ್ಕಾಗಿ ಹೋರಾಟ ನಡೆಯುತ್ತಿದೆ. ತಮದಡ್ಡಿ ಸಂತ್ರಸ್ತರಿಗೆ ಪುನರ್ವಸತಿ ಕೇಂದ್ರಕ್ಕೆ ಜಾಗ ನೀಡಲು ಅಧಿಕಾರಿಗಳು ತಿಳಿಸಿದ್ದಾರೆ. ಈ‌ ಜಾಗ ಬಿಟ್ಟು ಬೇರೆ ಕಡೆ ಕೊಡಿ ಎಂದು‌ ಹಳಿಂಗಳಿ ಗ್ರಾಮಸ್ಥರು, ಭದ್ರಗಿರಿ ಜೈನಮಂದಿರದ ಭಕ್ತರು ಹಾಗೂ‌ ಮುನಿಗಳು ಒತ್ತಾಯಿಸಿದ್ದು. ನಿನ್ನೆ ಮದ್ಯಾಹ್ನದಿಂದಲೇ ಆಹೋರಾತ್ರಿ ಪ್ರತಿಭಟನೆ ನಡೆಸುತ್ತಿದ್ದಾರೆ. ಈಗಲೂ ಬೆಟ್ಟದಲ್ಲಿ ಪ್ರತಿಭಟನೆ ಮುಂದುವರೆದಿದೆ. ಪ್ರತಿಭಟನೆಯಲ್ಲಿ ನೂರಾರು ಸಂಖ್ಯೆಯಲ್ಲಿ ಮಹಿಳೆಯರು ಕೂಡ ಭಾಗಿಯಾಗಿದ್ದಾರೆ.

ಇಂದು‌ ಜಾಗದಲ್ಲಿನ ಗಿಡಗಳನ್ನು ತೆರವುಗೊಳಿಸಿ ಜಾಗದ ಅಳತೆ ಮಾಡಲು‌ ಕಂದಾಯ ಇಲಾಖೆ ಅಧಿಕಾರಿಗಳು ಮುಂದಾಗಿದ್ದಾರೆ. ಜಾಗದಲ್ಲಿ ಯಾವುದೇ ತೆರವು ಕಾರ್ಯ, ಯಾವುದೇ ಚಟುವಟಿಕೆ ನಡೆಸದಂತೆ ಹಳಿಂಗಳಿ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗದ್ದಲ ಗಲಾಟೆ ಸಾಧ್ಯತೆ ಹಿನ್ನೆಲೆಯಲ್ಲಿ ಸ್ಥಳದಲ್ಲಿ ಬ್ಯಾರಿಕೇಡ್ ಹಾಕಿ ಪೊಲೀಸ್ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.

ಸ್ಥಳದಲ್ಲಿ ಉದ್ವಿಗ್ನ ವಾತಾವರಣ‌ ಇನ್ನು ಪ್ರತಿಭಟಾನಾಕಾರರು ಹಾಗೂ ಪೊಲೀಸರ ಮಧ್ಯೆ ವಾಗ್ವಾದ. ಪ್ರತಿಭಟನೆ ಕೈ ಬಿಡುವಂತೆ ಪೊಲೀಸರು ಒತ್ತಾಯಿಸಿದ್ದು ಪೊಲೀಸರಿಗೆ ಕೇರ್ ಮಾಡದೆ ಪ್ರತಿಭಟನೆ ಮುಂದುವರೆದಿದೆ. ಪ್ರತಿಭಟನಾಕಾರರನ್ನು ಬಂಧಿಸಿ ಡಿಎಆರ್ ವಾಹನಕ್ಕೆ ಹಾಕಿಕೊಂಡು ಪೊಲೀಸರು ಹೊರಟಿದ್ದು ಸ್ಥಳದಲ್ಲಿ ಉದ್ವಿಗ್ನ ವಾತಾವರಣ‌ ನಿರ್ಮಾಣವಾಗಿದೆ. ಜಾಗ ಶುಚಿಗೊಳಿಸಲು ಕಂದಾಯ ಇಲಾಖೆ ಸಿಬ್ಬಂದಿ ಆಗಮಿಸಿದ್ದ ವೇಳೆ ಸೀಮೆಎಣ್ಣೆ ಸುರಿದುಕೊಂಡು ಮಹಿಳೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ಇದನ್ನೂ ಓದಿ: Lovlina Borgohain: ಊರಿನ ಭವಿಷ್ಯ ಬದಲಿಸಿದ ಆ ಒಂದು ಗೆಲುವು: ದಶಕಗಳಿಂದ ಅಭಿವೃದ್ದಿ ಕಾಣದ ಲವ್ಲಿನಾ ಹಳ್ಳಿಗೆ ಹೊಸ ರಸ್ತೆ ನಿರ್ಮಾಣ

Published On - 8:04 am, Wed, 4 August 21

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್