ಈ ಬಾರಿ ಕೇವಲ 30 ರಿಂದ 40 ನಿಮಿಷಗಳಲ್ಲೇ ಜಂಬೂ ಸವಾರಿ ಮುಕ್ತಾಯ

ಮೈಸೂರು: ಕಿಲ್ಲರ್ ಕೊರೊನಾದಿಂದಾಗಿ ಈ ಬಾರಿ ವಿಶ್ವವಿಖ್ಯಾತ ಮೈಸೂರು ದಸರಾವನ್ನು ಸರಳವಾಗಿ ಆಚರಿಸಲಾಗುತ್ತಿದೆ. ಅಕ್ಟೋಬರ್ 25 ಅಂದ್ರೆ ನಾಳೆ ಜಂಬೂ ಸವಾರಿ ಮೆರವಣಿಗೆ ನಡೆಯಲಿದ್ದು, ಕ್ಷಣಗಣನೆ ಶುರುವಾಗಿದೆ. ಕೊರೊನಾ ಭೀತಿಯಿಂದಾಗಿ ಜಂಬೂ ಸವಾರಿ ಮೆರವಣಿಗೆ ಕೇವಲ ಅರಮನೆ ಆವರಣಕ್ಕೆ ಮಾತ್ರ ಸೀಮಿತವಾಗಿದೆ. ಪ್ರತಿ ವರ್ಷ 5.5 ಕಿ.ಮೀ.ಸಾಗುತ್ತಿದ್ದ ಜಂಬೂ ಸವಾರಿ ಮೆರವಣಿಗೆ ಈ ಬಾರಿ ಕೇವಲ 400 ಮೀಟರ್ ಅಂತರದಲ್ಲೇ ಅಂತ್ಯವಾಗಲಿದ್ದು, 30 ರಿಂದ 40 ನಿಮಿಷಗಳಲ್ಲೇ ಜಂಬೂ ಸವಾರಿ ಪೂರ್ಣಗೊಳ್ಳಲಿದೆ. ನಾಳೆ ಮಧ್ಯಾಹ್ನ 2:59 ರಿಂದ […]

ಈ ಬಾರಿ ಕೇವಲ 30 ರಿಂದ 40 ನಿಮಿಷಗಳಲ್ಲೇ ಜಂಬೂ ಸವಾರಿ ಮುಕ್ತಾಯ
Follow us
ಆಯೇಷಾ ಬಾನು
|

Updated on: Oct 25, 2020 | 3:43 PM

ಮೈಸೂರು: ಕಿಲ್ಲರ್ ಕೊರೊನಾದಿಂದಾಗಿ ಈ ಬಾರಿ ವಿಶ್ವವಿಖ್ಯಾತ ಮೈಸೂರು ದಸರಾವನ್ನು ಸರಳವಾಗಿ ಆಚರಿಸಲಾಗುತ್ತಿದೆ. ಅಕ್ಟೋಬರ್ 25 ಅಂದ್ರೆ ನಾಳೆ ಜಂಬೂ ಸವಾರಿ ಮೆರವಣಿಗೆ ನಡೆಯಲಿದ್ದು, ಕ್ಷಣಗಣನೆ ಶುರುವಾಗಿದೆ. ಕೊರೊನಾ ಭೀತಿಯಿಂದಾಗಿ ಜಂಬೂ ಸವಾರಿ ಮೆರವಣಿಗೆ ಕೇವಲ ಅರಮನೆ ಆವರಣಕ್ಕೆ ಮಾತ್ರ ಸೀಮಿತವಾಗಿದೆ.

ಪ್ರತಿ ವರ್ಷ 5.5 ಕಿ.ಮೀ.ಸಾಗುತ್ತಿದ್ದ ಜಂಬೂ ಸವಾರಿ ಮೆರವಣಿಗೆ ಈ ಬಾರಿ ಕೇವಲ 400 ಮೀಟರ್ ಅಂತರದಲ್ಲೇ ಅಂತ್ಯವಾಗಲಿದ್ದು, 30 ರಿಂದ 40 ನಿಮಿಷಗಳಲ್ಲೇ ಜಂಬೂ ಸವಾರಿ ಪೂರ್ಣಗೊಳ್ಳಲಿದೆ. ನಾಳೆ ಮಧ್ಯಾಹ್ನ 2:59 ರಿಂದ 3:20 ರೊಳಗಿನ ಶುಭ ಮಕರ ಲಗ್ನದಲ್ಲಿ ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಲಾಗುತ್ತೆ. ಬಳಿಕ 3:40 ರಿಂದ 4:15 ರೊಳಗಿನ ಶುಭ ಕುಂಭ ಲಗ್ನದಲ್ಲಿ ಅಭಿಮನ್ಯುವಿನ ಬೆನ್ನಿನ ಮೇಲೆ ಚಿನ್ನದ ಅಂಬಾರಿಯನಿಟ್ಟು ಅದರಲ್ಲಿ ‌ನಾಡ ಅಧಿದೇವತೆ ಚಾಮುಂಡೇಶ್ವರಿ ದೇವಿಯ ಉತ್ಸವ ಮೂರ್ತಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಸೇರಿದಂತೆ ಗಣ್ಯರಿಂದ ಪುಷ್ಪಾರ್ಚನೆ ಮಾಡಲಾಗುತ್ತೆ. ನಾಳಿನ ಜಂಬೂ ಸವಾರಿಯಲ್ಲಿ 4 ಕಲಾತಂಡ, ಅಶ್ವಾರೋಹಿ ದಳದ 2 ತುಕಡಿ, 2 ಸ್ತಬ್ದ ಚಿತ್ರ, ಕರ್ನಾಟಕ ಪೊಲೀಸ್ ವಾಹನದ ಆನೆಗಾಡಿ ಸಾಗಲಿದೆ. ಹೀಗಾಗಿ ಮೈಸೂರು ಅರಮನೆ ಆವರಣದಲ್ಲಿ ಸಕಲ ಸಿದ್ದತೆಗಳು ನಡೆಯುತ್ತಿವೆ.

ಪ್ರತಿ ವರ್ಷ ಲಕ್ಷಾಂತರ ಮಂದಿ ಈ ಭವ್ಯ ವೈಭವವನ್ನು ಕಣ್ತುಂಬಿಕೊಳ್ಳುತ್ತಿದ್ದರು. ಆದೆರ ಈ ಬಾರಿ ಕೋವಿಡ್ ಭೀತಿಯ ಹಿನ್ನೆಲೆಯಲ್ಲಿ ಕೇವಲ 300 ಜನರಿಗೆ ಮಾತ್ರ ಅನುಮತಿ ನೀಡಲಾಗಿದೆ. ಮೈಸೂರು ಅರಮನೆಯ ಸುತ್ತಮುತ್ತ ಜನಜಂಗುಳಿ ಉಂಟಾಗದಂತೆ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.

ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್