
ಬಳ್ಳಾರಿ: ಜಿಲ್ಲೆಯಲ್ಲಿರುವ ಕರ್ನಾಟಕ-ಆಂಧ್ರ ಅಂತರರಾಜ್ಯ ಗಡಿ ಗುರುತನ್ನು ಮಾಜಿ ಸಚಿವ ಜನಾರ್ದನ ರೆಡ್ಡಿ ಮಾಲೀಕತ್ವದ ಕಂಪನಿ ನಾಶಪಡಿಸಿರುವ ಆರೋಪದ ಹಿನ್ನೆಲೆಯಲ್ಲಿ ಸರ್ವೆ ಕಾರ್ಯ ಆರಂಭವಾಗಿದೆ. ಸುಪ್ರೀಂ ಕೋರ್ಟ್ ನಿರ್ದೇಶನದ ಮೇರೆಗೆ ಕರ್ನಾಟಕ ಮತ್ತು ಆಂಧ್ರ ಪ್ರದೇಶದ ಸರ್ವೆ ಅಧಿಕಾರಿಗಳಿಂದ ಸಮೀಕ್ಷೆ ನಡೆಸಲಾಗುತ್ತಿದೆ.