AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೈಎಲೆಕ್ಷನ್ ರಿಸಲ್ಟ್ ಬಳಿಕ JDS ಮತ್ತೆ ಕಿಂಗ್ ಮೇಕರ್ ಆಗಲಿದೆ -ಕುಮಾರಸ್ವಾಮಿ

ಬೆಳಗಾವಿ: ಡಿ.9ರ ನಂತರ ರಾಜ್ಯ ರಾಜಕೀಯದಲ್ಲಿ ಜೆಡಿಎಸ್ ಮತ್ತೆ ಕಿಂಗ್ ಮೇಕರ್ ಆಗಲಿದೆ ಎನ್ನುವ ಮೂಲಕ ಮಾಜಿ ಸಿಎಂ ಹೆಚ್​.ಡಿ.ಕುಮಾರಸ್ವಾಮಿ ಮತ್ತೆ ಮೈತ್ರಿ ಬಗ್ಗೆ ಸುಳಿವು ಬಿಟ್ಟುಕೊಟ್ಟಿದ್ದಾರೆ. ಗೋಕಾಕ್ ತಾಲೂಕಿನ ಹಿರೇನಂದಿ ಗ್ರಾಮದಲ್ಲಿ ಜೆಡಿಎಸ್ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಹೆಚ್​.ಡಿ.ಕುಮಾರಸ್ವಾಮಿ ಭಾಗಿಯಾಗಿದ್ದರು. ಈ ವೇಳೆ ಉಪಚುನಾವಣೆ ಫಲಿತಾಂಶ ಬಳಿಕ ಜೆಡಿಎಸ್​ ಕಿಂಗ್​ ಮೇಕರ್ ಆಗಲಿದೆ. ಆದ್ರೆ ಕಿಂಗ್‌ ಮೇಕರ್ ನಾನಲ್ಲ, ರಾಜ್ಯದ ಜನ ಕಿಂಗ್‌ ಮೇಕರ್ ಎಂದು ಕುಮಾರಸ್ವಾಮಿ ಹೇಳಿದ್ದಾರೆ. ನಮ್ಮ ಶಾಸಕರು ಹನಿಟ್ರ್ಯಾಪ್​ನಲ್ಲಿದ್ರೆ ಬಹಿರಂಗಪಡಿಸಲಿ: […]

ಬೈಎಲೆಕ್ಷನ್ ರಿಸಲ್ಟ್ ಬಳಿಕ JDS ಮತ್ತೆ ಕಿಂಗ್ ಮೇಕರ್ ಆಗಲಿದೆ -ಕುಮಾರಸ್ವಾಮಿ
ಹೆಚ್​.ಡಿ ಕುಮಾರಸ್ವಾಮಿ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Dec 01, 2019 | 12:14 PM

Share

ಬೆಳಗಾವಿ: ಡಿ.9ರ ನಂತರ ರಾಜ್ಯ ರಾಜಕೀಯದಲ್ಲಿ ಜೆಡಿಎಸ್ ಮತ್ತೆ ಕಿಂಗ್ ಮೇಕರ್ ಆಗಲಿದೆ ಎನ್ನುವ ಮೂಲಕ ಮಾಜಿ ಸಿಎಂ ಹೆಚ್​.ಡಿ.ಕುಮಾರಸ್ವಾಮಿ ಮತ್ತೆ ಮೈತ್ರಿ ಬಗ್ಗೆ ಸುಳಿವು ಬಿಟ್ಟುಕೊಟ್ಟಿದ್ದಾರೆ.

ಗೋಕಾಕ್ ತಾಲೂಕಿನ ಹಿರೇನಂದಿ ಗ್ರಾಮದಲ್ಲಿ ಜೆಡಿಎಸ್ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಹೆಚ್​.ಡಿ.ಕುಮಾರಸ್ವಾಮಿ ಭಾಗಿಯಾಗಿದ್ದರು. ಈ ವೇಳೆ ಉಪಚುನಾವಣೆ ಫಲಿತಾಂಶ ಬಳಿಕ ಜೆಡಿಎಸ್​ ಕಿಂಗ್​ ಮೇಕರ್ ಆಗಲಿದೆ. ಆದ್ರೆ ಕಿಂಗ್‌ ಮೇಕರ್ ನಾನಲ್ಲ, ರಾಜ್ಯದ ಜನ ಕಿಂಗ್‌ ಮೇಕರ್ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ನಮ್ಮ ಶಾಸಕರು ಹನಿಟ್ರ್ಯಾಪ್​ನಲ್ಲಿದ್ರೆ ಬಹಿರಂಗಪಡಿಸಲಿ: ಇದೇ ವೇಳೆ ಮಾತನಾಡಿದ ಅವರು, ಹನಿ ಟ್ರ್ಯಾಪ್‌ ಬಗ್ಗೆ ಹೆಚ್ಚಾಗಿ ಎನು ಹೇಳುವುದಿಲ್ಲ. ಈ ಕುರಿತು ಮುಂದಿನ ದಿನಗಳಲ್ಲಿ ಎಲ್ಲವೂ ಬಹಿರಂಗ ಪಡಿಸುವೆ. ಈಗ ಅವರದ್ದೇ ಸರ್ಕಾರ ಇದೆ. ನಮ್ಮ ಶಾಸಕರು ಹನಿಟ್ರ್ಯಾಪ್​ನಲ್ಲಿದ್ದರೆ ಬಹಿರಂಗ ಪಡಿಸಲಿ ಎಂದು ಬಿಜೆಪಿಗೆ ಹೆಚ್​.ಡಿ.ಕುಮಾರಸ್ವಾಮಿ ಸವಾಲ್ ಹಾಕಿದ್ದಾರೆ.

Published On - 12:14 pm, Sun, 1 December 19

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು