ಬೆಳಗಾವಿ: ಡಿ.9ರ ನಂತರ ರಾಜ್ಯ ರಾಜಕೀಯದಲ್ಲಿ ಜೆಡಿಎಸ್ ಮತ್ತೆ ಕಿಂಗ್ ಮೇಕರ್ ಆಗಲಿದೆ ಎನ್ನುವ ಮೂಲಕ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಮತ್ತೆ ಮೈತ್ರಿ ಬಗ್ಗೆ ಸುಳಿವು ಬಿಟ್ಟುಕೊಟ್ಟಿದ್ದಾರೆ.
ಗೋಕಾಕ್ ತಾಲೂಕಿನ ಹಿರೇನಂದಿ ಗ್ರಾಮದಲ್ಲಿ ಜೆಡಿಎಸ್ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಹೆಚ್.ಡಿ.ಕುಮಾರಸ್ವಾಮಿ ಭಾಗಿಯಾಗಿದ್ದರು. ಈ ವೇಳೆ ಉಪಚುನಾವಣೆ ಫಲಿತಾಂಶ ಬಳಿಕ ಜೆಡಿಎಸ್ ಕಿಂಗ್ ಮೇಕರ್ ಆಗಲಿದೆ. ಆದ್ರೆ ಕಿಂಗ್ ಮೇಕರ್ ನಾನಲ್ಲ, ರಾಜ್ಯದ ಜನ ಕಿಂಗ್ ಮೇಕರ್ ಎಂದು ಕುಮಾರಸ್ವಾಮಿ ಹೇಳಿದ್ದಾರೆ.
ನಮ್ಮ ಶಾಸಕರು ಹನಿಟ್ರ್ಯಾಪ್ನಲ್ಲಿದ್ರೆ ಬಹಿರಂಗಪಡಿಸಲಿ:
ಇದೇ ವೇಳೆ ಮಾತನಾಡಿದ ಅವರು, ಹನಿ ಟ್ರ್ಯಾಪ್ ಬಗ್ಗೆ ಹೆಚ್ಚಾಗಿ ಎನು ಹೇಳುವುದಿಲ್ಲ. ಈ ಕುರಿತು ಮುಂದಿನ ದಿನಗಳಲ್ಲಿ ಎಲ್ಲವೂ ಬಹಿರಂಗ ಪಡಿಸುವೆ. ಈಗ ಅವರದ್ದೇ ಸರ್ಕಾರ ಇದೆ. ನಮ್ಮ ಶಾಸಕರು ಹನಿಟ್ರ್ಯಾಪ್ನಲ್ಲಿದ್ದರೆ ಬಹಿರಂಗ ಪಡಿಸಲಿ ಎಂದು ಬಿಜೆಪಿಗೆ ಹೆಚ್.ಡಿ.ಕುಮಾರಸ್ವಾಮಿ ಸವಾಲ್ ಹಾಕಿದ್ದಾರೆ.
Published On - 12:14 pm, Sun, 1 December 19