AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಜಿ ಪ್ರಧಾನಿ ದೇವೇಗೌಡ ನೇತೃತ್ವದಲ್ಲಿ ಪೆಟ್ರೋಲ್, ಡೀಸೆಲ್‌, ಗ್ಯಾಸ್ ಬೆಲೆ ಏರಿಕೆ ಖಂಡಿಸಿ JDSನಿಂದ ಪ್ರತಿಭಟನೆ

ಪೆಟ್ರೋಲ್, ಡೀಸೆಲ್‌, ಗ್ಯಾಸ್, ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ JDS ಪ್ರತಿಭಟನೆ ನಡೆಸುತ್ತಿದ್ದಾರೆ. ಬೆಂಗಳೂರಿನ JDS​ ಕಚೇರಿ ಜೆ.ಪಿ.ಭವನದಿಂದ ಶುರುವಾಗಿರುವ ಮೆರವಣಿಗೆ ಮೌರ್ಯ ವೃತ್ತ ತಲುಪಿದೆ.

ಮಾಜಿ ಪ್ರಧಾನಿ ದೇವೇಗೌಡ ನೇತೃತ್ವದಲ್ಲಿ ಪೆಟ್ರೋಲ್, ಡೀಸೆಲ್‌, ಗ್ಯಾಸ್ ಬೆಲೆ ಏರಿಕೆ ಖಂಡಿಸಿ JDSನಿಂದ  ಪ್ರತಿಭಟನೆ
ಪೆಟ್ರೋಲ್, ಡೀಸೆಲ್‌, ಗ್ಯಾಸ್, ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ JDS ಪ್ರತಿಭಟನೆ ನಡೆಯುತ್ತಿದೆ
ಆಯೇಷಾ ಬಾನು
|

Updated on:Feb 24, 2021 | 2:15 PM

Share

ಬೆಂಗಳೂರು: ಪೆಟ್ರೋಲ್, ಡೀಸೆಲ್‌, ಗ್ಯಾಸ್ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ JDS ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ. ಬೆಂಗಳೂರಿನ JDS​ ಕಚೇರಿ ಜೆ.ಪಿ.ಭವನದಿಂದ ಶುರುವಾಗಿರುವ ಮೆರವಣಿಗೆ ಮೌರ್ಯ ವೃತ್ತ ತಲುಪಿದೆ. ಸದ್ಯ ಮೌರ್ಯ ವೃತ್ತದಲ್ಲಿ JDS ಕಾರ್ಯಕರ್ತರು​ ಪ್ರತಿಭಟನೆ ನಡೆಸುತ್ತಿದ್ದಾರೆ. ಹೆಚ್.ಡಿ.ಕುಮಾರಸ್ವಾಮಿ ಮೈಸೂರಿಗೆ ತೆರಳಿರುವ ಹಿನ್ನೆಲೆಯಲ್ಲಿ JDS ವರಿಷ್ಠ ಹೆಚ್.ಡಿ.ದೇವೇಗೌಡ ನೇತೃತ್ವದಲ್ಲಿ ಧರಣಿ ನಡೆಯುತ್ತಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರ ಹಾಕುತ್ತಿದ್ದಾರೆ.

ಶಿವಮೊಗ್ಗದಲ್ಲಿ ಕಾಂಗ್ರೆಸ್​ನಿಂದ ಧರಣಿ ದಿನಬಳಕೆ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಶಿವಮೊಗ್ಗದಲ್ಲಿ ಕಾಂಗ್ರೆಸ್ ಧರಣಿ ನಡೆಸುತ್ತಿದೆ. ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಘಟಕ ಅಧ್ಯಕ್ಷ ಸುಂದರೇಶ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿದ್ದು ಬ್ಯಾರಿಕೇಡ್ ತಳ್ಳಿ ಶಿವಮೊಗ್ಗ ರೈಲ್ವೆ ನಿಲ್ದಾಣಕ್ಕೆ ನುಗ್ಗಲು ಯತ್ನಿಸುತ್ತಿದೆ. ಹಾಗೂ ರೈಲ್ವೆ ನಿಲ್ದಾಣಕ್ಕೆ ಮುತ್ತಿಗೆ ಹಾಕುವುದಕ್ಕೆ ಯತ್ನಿಸಲಾಗುತ್ತಿದೆ. ಇದಕ್ಕೆ ಪೊಲೀಸರು ಅವಕಾಶ ನೀಡದ ಹಿನ್ನೆಲೆಯಲ್ಲಿ ಪೊಲೀಸರು ಮತ್ತು ಕೈ ಕಾರ್ಯಕರ್ತರ ನಡುವೆ ವಾಕ್ಸಮರ ನಡೆಯುತ್ತಿದೆ.

ಬೆಲೆ ಏರಿಕೆಯಿಂದ ಜನ ಸಾಮಾನ್ಯರು ಸಾಕಷ್ಟು ತೊಂದರೆ ಅನುಭವಿಸುತ್ತಿದ್ದಾರೆ. ಪ್ರತಿ‌ ನಿತ್ಯ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆಯಾಗುತ್ತಿದೆ. ಡೀಸೆಲ್ ಹಾಗೂ ಪೆಟ್ರೋಲ್ ದರ ರಾಜಸ್ತಾನದಲ್ಲಿ 100 ರ ಗಡಿ ದಾಟಿದೆ. ಅದರ ಎಫೆಕ್ಟ್ ದಿನ ನಿತ್ಯದ ವಸ್ತುಗಳ ಮೇಲೆ ಆಗಿದೆ. ಕೋವಿಡ್​ನಿಂದ ಲಕ್ಷಾಂತರ ಜನ ಅನಾರೋಗ್ಯಕ್ಕೆ ಪೀಡಿತರಾಗಿದ್ದಾರೆ. ಅವರು ಸೇವಿಸುವ ಮಾತ್ರೆಗಳ ಬೆಲೆ ಎರಡು ಮೂರು ಪಟ್ಟು ಹೆಚ್ಚಾಗಿದೆ. ಜನರ ಜೀವನ ದುಸ್ಥರವಾಗಿದೆ. ಇದೆಲ್ಲದನ್ನು ವಿರೋಧಿಸಿ ಇಂದು ನಾವು ಪ್ರತಿಭಟನೆ ನಡೆಸುತ್ತಿದ್ದೇವೆ. ಕೇಂದ್ರ ಹಾಗೂ ರಾಜ್ಯ ಸರ್ಕಾರ ಮಾನವೀಯತೆ ದೃಷ್ಟಿಯಿಂದ ನೋಡಬೇಕು ಎಂದು ಜೆಡಿಎಸ್ ಬೆಂಗಳೂರು ನಗರ ಅಧ್ಯಕ್ಷ ಪ್ರಕಾಶ್ ತಿಳಿಸಿದ್ರು.

ಕ್ರಿಕೆಟ್‌ನಲ್ಲಿ ಸೆಂಚುರಿ ಬಾರಿಸಿದರೆ ಖುಷಿಯಾಗುತ್ತೆ. ಆದರೆ ಪೆಟ್ರೋಲ್ ಬೆಲೆ ಸೆಂಚುರಿ ಬಾರಿಸಿದೆ. ಅಚ್ಛೇ ದಿನ್ ಬರುತ್ತೆ ಅಂತ ಮೋದಿ ಹೇಳಿದ್ದರು. ಈಗ ಬಡವರು ಜೀವನ ನಡೆಸಲಾಗದ ಸ್ಥಿತಿ‌ಬಂದಿದೆ. ಕಾರ್ಮಿಕರಿಗೆ ಕೆಲಸ ಇಲ್ಲ, ಎಲ್ಲರೂ ಬೀದಿಗೆ ಬಂದಿದ್ದಾರೆ. ಪೆಟ್ರೋಲ್ ಬೆಲೆ ಏರಿಕೆಯಿಂದ ಆಹಾರ ಧಾನ್ಯಗಳೂ ತುಟ್ಟಿಯಾಗಿವೆ. ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬೆಲೆ ಏರಿಕೆ ಆಗಿಲ್ಲ. ಮೋದಿ ಕೂಡಲೇ ಬೆಲೆ ಇಳಿಕೆ ಮಾಡಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಹೋರಾಟ ತೀವ್ರಗೊಳ್ಳಲಿದೆ ಅಂತಾ ಮಾಜಿ MLC ಟಿ.ಎ.ಶರವಣ ಹೇಳಿದರು.

JDS Protest

ಪೆಟ್ರೋಲ್, ಡೀಸೆಲ್‌, ಗ್ಯಾಸ್, ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ JDS ಪ್ರತಿಭಟನೆ ನಡೆಯುತ್ತಿದೆ

JDS Protest

ಪೆಟ್ರೋಲ್, ಡೀಸೆಲ್‌, ಗ್ಯಾಸ್, ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ JDS ಪ್ರತಿಭಟನೆ ನಡೆಯುತ್ತಿದೆ

ಇದನ್ನೂ ಓದಿ: Petrol rate: ಪೆಟ್ರೋಲ್ ಮೇಲೆ ಕೇಂದ್ರ, ರಾಜ್ಯಗಳಿಗೆ ಕಟ್ಟುವ ತೆರಿಗೆ ಲೆಕ್ಕ ಇಲ್ಲಿದೆ

Published On - 12:42 pm, Wed, 24 February 21

ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು