ಹಾಸನಕ್ಕೆ ರೈಲಿನಲ್ಲಿ ಬಂದ HDD: ತಾವೇ ಅನುಮೋದಿಸಿದ ಮಾರ್ಗದಲ್ಲಿ ಮೊದಲ ಸಂಚಾರ!

ಹಾಸನ: ಇದೇ ಮೊದಲ ಬಾರಿಗೆ ಮಾಜಿ ಪ್ರಧಾನಿ ಹಾಗೂ ಜೆಡಿಎಸ್​ ವರಿಷ್ಠ ಹೆಚ್​.ಡಿ.ದೇವೇಗೌಡರು ಹಾಸನಕ್ಕೆ ರೈಲಿನಲ್ಲಿ ಪ್ರಯಾಣ ಮಾಡಿದ್ದಾರೆ. ಬೆಂಗಳೂರಿನಿಂದ ಹಾಸನಕ್ಕೆ ರೈಲಿನಲ್ಲಿ ಆಗಮಿಸಿದ ದೇವೇಗೌಡರಿಗೆ ಹೂಗುಚ್ಛ ನೀಡಿ ಜೆಡಿಎಸ್ ಕಾರ್ಯಕರ್ತರು ಭರ್ಜರಿಯಾಗಿ ಸ್ವಾಗತಿಸಿದರು. ತಾವು ಪ್ರಧಾನಿಯಾಗಿದ್ದ ಸಂದರ್ಭದಲ್ಲಿ ಹಾಸನ-ಬೆಂಗಳೂರು ಮಾರ್ಗಕ್ಕೆ ರೈಲ್ವೆ ಯೋಜನೆಯನ್ನು ಹೆಚ್​.ಡಿ.ದೇವೇಗೌಡರು ಮಂಜೂರು ಮಾಡಿದ್ದರು. ಹಾಸನ ಜಿಲ್ಲೆ ಭಾಗದ ದಶಕಗಳ ಕನಸನ್ನು ದೇವೇಗೌಡರು ನನಸು ಮಾಡಿದ್ದರು. ಇಂದು ಇದೇ ಮೊದಲ ಬಾರಿಗೆ ಬೆಂಗಳೂರಿನಿಂದ ಹಾಸನಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದಾರೆ. ಹಾಸನ ರೈಲು ನಿಲ್ದಾಣದಲ್ಲಿ ದೇವೇಗೌಡರಿಗೆ ಜೆಡಿಎಸ್ […]

ಹಾಸನಕ್ಕೆ ರೈಲಿನಲ್ಲಿ ಬಂದ HDD: ತಾವೇ ಅನುಮೋದಿಸಿದ ಮಾರ್ಗದಲ್ಲಿ ಮೊದಲ ಸಂಚಾರ!
ಸಾಧು ಶ್ರೀನಾಥ್​

Updated on: Mar 01, 2020 | 2:21 PM

ಹಾಸನ: ಇದೇ ಮೊದಲ ಬಾರಿಗೆ ಮಾಜಿ ಪ್ರಧಾನಿ ಹಾಗೂ ಜೆಡಿಎಸ್​ ವರಿಷ್ಠ ಹೆಚ್​.ಡಿ.ದೇವೇಗೌಡರು ಹಾಸನಕ್ಕೆ ರೈಲಿನಲ್ಲಿ ಪ್ರಯಾಣ ಮಾಡಿದ್ದಾರೆ. ಬೆಂಗಳೂರಿನಿಂದ ಹಾಸನಕ್ಕೆ ರೈಲಿನಲ್ಲಿ ಆಗಮಿಸಿದ ದೇವೇಗೌಡರಿಗೆ ಹೂಗುಚ್ಛ ನೀಡಿ ಜೆಡಿಎಸ್ ಕಾರ್ಯಕರ್ತರು ಭರ್ಜರಿಯಾಗಿ ಸ್ವಾಗತಿಸಿದರು.

ತಾವು ಪ್ರಧಾನಿಯಾಗಿದ್ದ ಸಂದರ್ಭದಲ್ಲಿ ಹಾಸನ-ಬೆಂಗಳೂರು ಮಾರ್ಗಕ್ಕೆ ರೈಲ್ವೆ ಯೋಜನೆಯನ್ನು ಹೆಚ್​.ಡಿ.ದೇವೇಗೌಡರು ಮಂಜೂರು ಮಾಡಿದ್ದರು. ಹಾಸನ ಜಿಲ್ಲೆ ಭಾಗದ ದಶಕಗಳ ಕನಸನ್ನು ದೇವೇಗೌಡರು ನನಸು ಮಾಡಿದ್ದರು. ಇಂದು ಇದೇ ಮೊದಲ ಬಾರಿಗೆ ಬೆಂಗಳೂರಿನಿಂದ ಹಾಸನಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದಾರೆ. ಹಾಸನ ರೈಲು ನಿಲ್ದಾಣದಲ್ಲಿ ದೇವೇಗೌಡರಿಗೆ ಜೆಡಿಎಸ್ ಕಾರ್ಯಕರ್ತರು ಜೈಕಾರ ಹಾಕಿ ಅದ್ಧೂರಿಯಾಗಿ ಸ್ವಾಗತಿಸಿದರು.


sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us