AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಕೀಯ ರಣರಂಗವಾಗಲಿದೆ ತುರುವೇಕೆರೆ: BJP ಶಾಸಕ ವಿರುದ್ಧ JDS ಬೃಹತ್​ ಪ್ರತಿಭಟನೆ

ತುಮಕೂರು: ಜಿಲ್ಲೆಯ ತುರುವೇಕೆರೆ ತಾಲೂಕಿನ ಗುಡ್ಡೇನಹಳ್ಳಿಯಲ್ಲಿ ಜಮೀನು ಒತ್ತುವರಿಯಾಗಿದ್ದ ಆರೋಪದಡಿ ಬಿಜೆಪಿ ಶಾಸಕ ಮಸಾಲೆ ಜಯರಾಮ್​ ರೈತರ ಜಮೀನು ತೆರವುಗೊಳಿಸಿದ್ದಾರೆ ಎಂದು ಖಂಡಿಸಿ ಇಂದು ಪಟ್ಟಣದಲ್ಲಿ ಜೆಡಿಎಸ್​ನಿಂದ ಬೃಹತ್​ ಪ್ರತಿಭಟನೆಯನ್ನ ಹಮ್ಮಿಕೊಳ್ಳಲಾಗಿದೆ. ಹಾಲಿ ಶಾಸಕ ಮಸಾಲೆ ಜಯರಾಮ್ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಮಾಜಿ ಶಾಸಕ MT ಕೃಷ್ಣಪ್ಪ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದ್ದು ಮಾಜಿ ಸಿಎಂ ಕುಮಾರಸ್ವಾಮಿ ಸಹ ಪ್ರತಿಭಟನೆಯಲ್ಲಿ ಭಾಗಿಯಾಗುವ ಸಾಧ್ಯತೆಯಿದೆ. ಜೊತೆಗೆ, ಪಟ್ಟಣದಲ್ಲಿ 144 ಸೆಕ್ಷನ್ ಜಾರಿ ಇದ್ದರೂ ಮಾಜಿ ಶಾಸಕ MT ಕೃಷ್ಣಪ್ಪ […]

ರಾಜಕೀಯ ರಣರಂಗವಾಗಲಿದೆ ತುರುವೇಕೆರೆ: BJP ಶಾಸಕ ವಿರುದ್ಧ JDS ಬೃಹತ್​ ಪ್ರತಿಭಟನೆ
KUSHAL V
|

Updated on:Aug 31, 2020 | 11:49 AM

Share

ತುಮಕೂರು: ಜಿಲ್ಲೆಯ ತುರುವೇಕೆರೆ ತಾಲೂಕಿನ ಗುಡ್ಡೇನಹಳ್ಳಿಯಲ್ಲಿ ಜಮೀನು ಒತ್ತುವರಿಯಾಗಿದ್ದ ಆರೋಪದಡಿ ಬಿಜೆಪಿ ಶಾಸಕ ಮಸಾಲೆ ಜಯರಾಮ್​ ರೈತರ ಜಮೀನು ತೆರವುಗೊಳಿಸಿದ್ದಾರೆ ಎಂದು ಖಂಡಿಸಿ ಇಂದು ಪಟ್ಟಣದಲ್ಲಿ ಜೆಡಿಎಸ್​ನಿಂದ ಬೃಹತ್​ ಪ್ರತಿಭಟನೆಯನ್ನ ಹಮ್ಮಿಕೊಳ್ಳಲಾಗಿದೆ. ಹಾಲಿ ಶಾಸಕ ಮಸಾಲೆ ಜಯರಾಮ್ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಮಾಜಿ ಶಾಸಕ MT ಕೃಷ್ಣಪ್ಪ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದ್ದು ಮಾಜಿ ಸಿಎಂ ಕುಮಾರಸ್ವಾಮಿ ಸಹ ಪ್ರತಿಭಟನೆಯಲ್ಲಿ ಭಾಗಿಯಾಗುವ ಸಾಧ್ಯತೆಯಿದೆ. ಜೊತೆಗೆ, ಪಟ್ಟಣದಲ್ಲಿ 144 ಸೆಕ್ಷನ್ ಜಾರಿ ಇದ್ದರೂ ಮಾಜಿ ಶಾಸಕ MT ಕೃಷ್ಣಪ್ಪ ಪ್ರತಿಭಟನೆಗೆ ಸಿದ್ಧತೆ ಮಾಡಿಕೊಂಡಿದ್ದಾರೆ.

ಜಿಲ್ಲೆಯ ತುರುವೇಕೆರೆ ತಾಲೂಕಿನ ಗುಡ್ಡೇನಹಳ್ಳಿ ಗ್ರಾಮದ ಬಳಿ ಜಮೀನು ಒತ್ತುವರಿಯಾಗಿದ್ದ ಆರೋಪದಡಿ ಅದನ್ನು ತೆರವುಗೊಳಿಸಲಾಗಿತ್ತು. ಈ ತೆರವು ಕಾರ್ಯಾಚರಣೆಗೆ ಶಾಸಕರ ಬೆಂಬಲವಿತ್ತ ಎಂಬ ಆರೋಪದ ಹಿನ್ನೆಲೆಯಲ್ಲಿ ಇಂಧು ಪ್ರತಿಭಟನೆ ನಡೆಯಲಿದೆ.

ತುರುವೇಕೆರೆ ಪಟ್ಟಣಕ್ಕೆ ಖಾಕಿ ಸರ್ಪಗಾವಲು ಮಧ್ಯಾಹ್ನ 12 ಕ್ಕೆ ಪ್ರತಿಭಟನೆ ನಡೆಯಲಿರುವ ಹಿನ್ನೆಲೆಯಲ್ಲಿ ಇಡೀ ತುರುವೇಕೆರೆ ಪಟ್ಟಣದಲ್ಲಿ ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿದೆ. ಜೆಡಿಎಸ್ ಕಾರ್ಯಕರ್ತರು ಒಂದೆಡೆ ಸೇರದಂತೆ ಎಚ್ಚರಿಕೆ ವಹಿಸಲಾಗಿದ್ದು ಇಡೀ ತುರುವೇಕೆರೆಯಲ್ಲಿ ನೂರಾರು ಪೊಲೀಸರ ಸರ್ಪಗಾವಲು ಕಂಡುಬಂತು.

ಸೆಕ್ಷನ್ 144 ಜಾರಿಯಾದ ಹಿನ್ನೆಲೆಯಲ್ಲಿ ಪೊಲೀಸರ ಬಂದೋಬಸ್ತ್ ಹೆಚ್ಚಿಸಲಾಗಿದ್ದು 3 DySP, 30 PSI, 5 KSRP ತುಕಡಿಗಳನ್ನ ನಿಯೋಜಿಸಲಾಗಿದೆ. ಎರಡೂ ಪಕ್ಷಗಳಿಗೆ ಪ್ರತಿಭಟನೆ ನಡೆಸಲು ಅವಕಾಶ ನೀಡದ ಹಿನ್ನೆಲೆಯಲ್ಲಿ ತುರವೇಕೆರೆ ಗಡಿಯಲ್ಲೇ ಮಾಜಿ ಸಿಎಂ HD ಕುಮಾರಸ್ವಾಮಿರನ್ನ ತಡೆಯೋ ಸಾಧ್ಯತೆಯಿದೆ. ಸೆಕ್ಷನ್ 144 ನಡುವೆಯೇ HDK ಪ್ರತಿಭಟನೆ ನಡೆಸಲು ಆಗಮಿಸ್ತಿರೋ ಹಿನ್ನೆಲೆಯಲ್ಲಿ ಜೆಡಿಎಸ್ ಕಾರ್ಯಕರ್ತರನ್ನ ಒಟ್ಟುಗೂಡದಂತೆ ಎಚ್ಚರವಹಿಸಿರೋ ಖಾಕಿ ಪಡೆ ಬಿಜೆಪಿ ಕಾರ್ಯಕರ್ತರ ಮೇಲೂ ಕಣ್ಣಿಟ್ಟಿದ್ದಾರೆ. ಜೊತೆಗೆ, ತುರುವೇಕೆರೆಯಲ್ಲೇ SP ಕೋನಾವಂ ಶ್ರೀಕೃಷ್ಣ ಮೊಕ್ಕಾಂ ಹೂಡಿದ್ದಾರೆ.

Published On - 11:28 am, Mon, 31 August 20

ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?