AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

JEE ಮುಖ್ಯ ಪರೀಕ್ಷಾ ವೇಳಾಪಟ್ಟಿ ಪ್ರಕಟ; ಕನ್ನಡ ಸೇರಿದಂತೆ 13 ಭಾಷೆಗಳಲ್ಲಿ ಪರೀಕ್ಷೆ ಬರೆಯಲು ಅವಕಾಶ

ಕೇಂದ್ರ ಶಿಕ್ಷಣ ಖಾತೆ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್ ಪರೀಕ್ಷಾ ವೇಳಾಪಟ್ಟಿ ಬಿಡುಗಡೆ ಮಾಡಿದ್ದಾರೆ. ಫೆಬ್ರವರಿ, ಮಾರ್ಚ್, ಏಪ್ರಿಲ್, ಮೇ ತಿಂಗಳಲ್ಲಿ ಜೆಇಇ ಮುಖ್ಯ ಪರೀಕ್ಷೆ ನಡೆಯಲಿದೆ. ವಿದ್ಯಾರ್ಥಿಗಳು ತಮ್ಮ ಅನುಕೂಲಕ್ಕೆ ತಕ್ಕಂತೆ ಪರೀಕ್ಷೆ ಬರೆಯಬಹುದು.

JEE ಮುಖ್ಯ ಪರೀಕ್ಷಾ ವೇಳಾಪಟ್ಟಿ ಪ್ರಕಟ; ಕನ್ನಡ ಸೇರಿದಂತೆ 13 ಭಾಷೆಗಳಲ್ಲಿ ಪರೀಕ್ಷೆ ಬರೆಯಲು ಅವಕಾಶ
ಸಚಿವ ರಮೇಶ್​ ಪೋಖ್ರಿಯಾಲ್
Skanda
| Edited By: |

Updated on: Dec 16, 2020 | 7:48 PM

Share

ದೆಹಲಿ: ಎಂಜಿನಿಯರಿಂಗ್ ಕಾಲೇಜುಗಳಿಗೆ ಪ್ರವೇಶ ಪಡೆಯಲು ನಡೆಯುವ ಜೆಇಇ ಪರೀಕ್ಷೆಯ 2021ನೇ ಸಾಲಿನ ವೇಳಾಪಟ್ಟಿ ಬಿಡುಗಡೆಯಾಗಿದೆ. ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್ ಪರೀಕ್ಷಾ ವೇಳಾಪಟ್ಟಿ ಬಿಡುಗಡೆ ಮಾಡಿದ್ದಾರೆ. ಫೆ.23ರಿಂದ26 ರವರೆಗೆ ಜೆಇಇ ಮುಖ್ಯ ಪರೀಕ್ಷೆ ನಡೆಯಲಿದ್ದು ಇದೇ ಮೊದಲ ಬಾರಿಗೆ 13 ಭಾಷೆಗಳಲ್ಲಿ ಪರೀಕ್ಷೆ ನಡೆಸಲಾಗುವುದು ಎಂದು ಪೋಖ್ರಿಯಾಲ್ ತಿಳಿಸಿದ್ದಾರೆ.

ಮುಂದಿನ ವರ್ಷ ಒಟ್ಟು ನಾಲ್ಕು ಬಾರಿ ಪರೀಕ್ಷೆ ನಡೆಸಲು ಕೇಂದ್ರ ನಿರ್ಧರಿಸಿದೆ. ಫೆಬ್ರವರಿ, ಮಾರ್ಚ್, ಏಪ್ರಿಲ್, ಮೇ ತಿಂಗಳಲ್ಲಿ ಜೆಇಇ ಮುಖ್ಯ ಪರೀಕ್ಷೆ ನಡೆಯಲಿದೆ. ವಿದ್ಯಾರ್ಥಿಗಳು ತಮ್ಮ ಅನುಕೂಲಕ್ಕೆ ತಕ್ಕಂತೆ ಪರೀಕ್ಷೆ ಬರೆಯಬಹುದು. ಪರೀಕ್ಷೆ ಮುಗಿದ ನಾಲ್ಕೈದು ದಿನಗಳಲ್ಲಿ ಫಲಿತಾಂಶ ಪ್ರಕಟಿಸುವ ವ್ಯವಸ್ಥೆ ರೂಪಿಸಲಾಗುತ್ತಿದೆ ಎಂದು ರಮೇಶ್ ಪೋಖ್ರಿಯಾಲ್ ನಿಶಾಂಕ್ ಘೋಷಿಸಿದ್ದಾರೆ.

ಮುಂದಿನ ವರ್ಷ ಪ್ರಾದೇಶಿಕ ಭಾಷೆಗಳಲ್ಲಿ ಕೂಡ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುತ್ತಿದೆ. ಇದೇ ಮೊದಲ ಭಾರಿಗೆ 13 ಭಾಷೆಯಲ್ಲಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿದೆ. ಹೊಸ ಶಿಕ್ಷಣ ನೀತಿಯಡಿ ಕನ್ನಡ, ತಮಿಳು, ತೆಲುಗು, ಉರ್ದು, ಮಲಯಾಳಿ ಸೇರಿದಂತೆ 13 ಭಾಷೆಯಲ್ಲಿ ಜೆಇಇ‌ ಪರೀಕ್ಷೆ ಬರೆಯಲು ಅವಕಾಶವಿದೆ ಎಂದು ಹೇಳಿದ್ದಾರೆ.

ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ಹೀಗಿರುತ್ತದೆ

Follow Us
Skanda
Skanda
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
RSS ಕಚೇರಿಯಲ್ಲೇ ಫಾರ್ಮ್-7 ಮುದ್ರಣ: ತನ್ವೀರ್ ಸೇಠ್ ಆರೋಪ
RSS ಕಚೇರಿಯಲ್ಲೇ ಫಾರ್ಮ್-7 ಮುದ್ರಣ: ತನ್ವೀರ್ ಸೇಠ್ ಆರೋಪ