ಉತ್ತರ ಪ್ರದೇಶದ ಝಾನ್ಸಿಯಲ್ಲಿ ಟ್ರ್ಯಾಕ್ಟರ್ ಟ್ರಾಲಿ ಉರುಳಿ 11 ಮಂದಿ ಸಾವು

ರಸ್ತೆಯಲ್ಲಿ ಅಡ್ಡಬಂದ ಪ್ರಾಣಿಯೊಂದಕ್ಕೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲೆಂದು ಚಾಲಕ ಏಕಾಏಕಿ ಬ್ರೇಕ್ ಹಾಕಿದಾಗ ಟ್ರಾಲಿ ಉರುಳಿತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಉತ್ತರ ಪ್ರದೇಶದ ಝಾನ್ಸಿಯಲ್ಲಿ ಟ್ರ್ಯಾಕ್ಟರ್ ಟ್ರಾಲಿ ಉರುಳಿ 11 ಮಂದಿ ಸಾವು
ಪೊಲೀಸ್ ಠಾಣೆಯಲ್ಲಿ ನೆರೆದಿರುವ ಸಂಬಂಧಿಕರು.
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Oct 15, 2021 | 6:52 PM

ಝಾನ್ಸಿ: ಉತ್ತರ ಪ್ರದೇಶದ ಝಾನ್ಸಿ ಸಮೀಪ ಶುಕ್ರವಾರ ಟ್ರ್ಯಾಕ್ಟರ್ ಟ್ರಾಲಿ ಉರುಳಿ 11 ಮಂದಿ ಸಾವನ್ನಪ್ಪಿದ್ದಾರೆ. ರಸ್ತೆಯಲ್ಲಿ ಅಡ್ಡಬಂದ ಪ್ರಾಣಿಯೊಂದಕ್ಕೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲೆಂದು ಚಾಲಕ ಏಕಾಏಕಿ ಬ್ರೇಕ್ ಹಾಕಿದಾಗ ಟ್ರಾಲಿ ಉರುಳಿತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಘಟನೆಯಲ್ಲಿ ಆರು ಮಂದಿಗೆ ಗಂಭೀರ ಗಾಯಗಳಾಗಿವೆ. ಚಿರ್​ಗಾವ್​ ಪ್ರದೇಶದಲ್ಲಿ ಘಟನೆ ಸಂಭವಿಸಿದೆ ಎಂದು ಪೊಲೀಸರು ಹೇಳಿದ್ದಾರೆ.

ಮಧ್ಯಪ್ರದೇಶದ ಪಾಂಡೊಖರ್ ಗ್ರಾಮದಿಂದ ಸುಮಾರು 30 ಕುಟುಂಬಗಳು ಎರಾಚ್​ನಲ್ಲಿರುವ ದೇವಸ್ಥಾನಕ್ಕೆ ಟ್ರ್ಯಾಕ್ಟರ್​ಗಳಲ್ಲಿ ಯಾತ್ರೆ ಹೋಗುತ್ತಿದ್ದರು. ಈ ವೇಳೆ ಟ್ರಾಲಿ ಉರುಳಿತು ಎಂದು ಹಿರಿಯ ಪೊಲೀಸ್ ಅಧಿಕಾರಿ ಶಿವಹರಿ ಮೀನಾ ತಿಳಿಸಿದ್ದಾರೆ. ಮೃತರ ಪೈಕಿ ನಾಲ್ವರು ಮಕ್ಕಳು ಮತ್ತು ಏಳು ಮಂದಿ ಮಹಿಳೆಯರು ಸೇರಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಘಟನೆ ಕುರಿತು ಸಂತಾಪ ವ್ಯಕ್ತಪಡಿಸಿರುವ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಗಾಯಾಳುಗಳಿಗೆ ಅಗತ್ಯ ವೈದ್ಯಕೀಯ ನೆರವು ಒದಗಿಸಲು ಹಾಗೂ ಮೃತರ ಕುಟುಂಬಗಳಿಗೆ ಸಾಂತ್ವನ ಹೇಳಲು ಸೂಚಿಸಿದ್ದಾರೆ.

ದಸರಾ ಮೆರವಣಿಗೆ ಮೇಲೆ ಕಾರು ಹರಿದು ನಾಲ್ವರ ಸಾವು ದಸರಾ ಮೆರವಣಿಗೆ ಮೇಲೆ ಕಾರು ಹರಿದು ನಾಲ್ವರು ಮೃತಪಟ್ಟಿರುವ ಘಟನೆ ಛತ್ತೀಸ್​ಗಡದ ಜಶ್​ಪುರ ಪಟ್ಟಣದಲ್ಲಿ ನಡೆದಿದೆ. ದಸರಾ ಮೆರವಣಿಗೆ ಮೂರ್ತಿ ವಿಸರ್ಜನೆ ವೇಳೆ ಈ ಅವಘಡ ಸಂಭವಿಸಿದ್ದು, 20ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೆರವಣಿಗೆಯಲ್ಲಿದ್ದವರ ಮೇಲೆ ನುಗ್ಗಿದ ಕಾರನ್ನು ಬೆನ್ನಟ್ಟಿ ಹೋದ ಸ್ಥಳೀಯರು ಆಕ್ರೋಶದಿಂದ ಬೆಂಕಿ ಹಚ್ಚಿದ್ದಾರೆ. ಘಟನಾ ಸ್ಥಳದಲ್ಲಿ ನೂರಾರು ಜನರು ನೆರೆದಿದ್ದು ಕಾರು ನುಗ್ಗಿಸಿದವರ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಛತ್ತೀಸಗಡ-ಜಾರ್ಖಂಡ್ ರಾಜ್ಯದ ಗಡಿಯಲ್ಲಿರುವ ಜಶಪುರದಲ್ಲಿ ದುರಂತ ಸಂಭವಿಸಿದೆ. ಗಾಂಜಾ ತುಂಬಿದ್ದ ಕಾರನ್ನು ಪೊಲೀಸರು ಹಿಡಿಯಬಹುದು ಎಂದು ವೇಗವಾಗಿ ಓಡಿಸಿದ್ದಾರೆ. ಈ ವೇಳೆ ದುರ್ಗಾ ವಿಸರ್ಜನೆಯ ಮೆರವಣಿಗೆಯಲ್ಲಿದ್ದ ಭಕ್ತರ ಮೇಲೆ ಕಾರು ಹರಿದಿದೆ. ಕಾರು ಚಾಲಕನನ್ನು ಪೊಲೀಸರು ಬಂಧಿಸಿದ್ದು, ಶೋಧದ ವೇಳೆ ಕಾರಿನಲ್ಲಿ ಗಾಂಜಾ ಪತ್ತೆಯಾಗಿದೆ. ಮೃತರಿಗೆ ತಲಾ ₹ 50 ಲಕ್ಷ ಪರಿಹಾರ ನೀಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ನಾಯಕ ರಮಣ್ ಸಿಂಗ್ ಒತ್ತಾಯಿಸಿದ್ದಾರೆ.

(Jhansi Accident 11 Killed After Tractor Trolley Overturns In Uttar Pradesh Jhansi)

ಇದನ್ನೂ ಓದಿ: ನೆಲಮಂಗಲ, ರಾಮನಗರದಲ್ಲಿ ರಸ್ತೆ ಅಪಘಾತ: ಒಟ್ಟು ಮೂವರು ಸಾವು ಇದನ್ನೂ ಓದಿ: ಉಪ್ಪಿನಂಗಡಿ ಬಳಿ ಭೀಕರ ಅಪಘಾತ; ಸರ್ಕಾರಿ ಬಸ್ ಹರಿದು ತಾಯಿ, ಮಗು ಸ್ಥಳದಲ್ಲೇ ಸಾವು

ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಆಮರಣಾಂತ ಉಪವಾಸ ಸತ್ಯಾಗ್ರಹ, ಪ್ರಶಾಂತ್ ಕಿಶೋರ್ ಬಂಧನ
ಆಮರಣಾಂತ ಉಪವಾಸ ಸತ್ಯಾಗ್ರಹ, ಪ್ರಶಾಂತ್ ಕಿಶೋರ್ ಬಂಧನ
ಈ ವಾರದ ಟಾಸ್ಕ್​ ಗೆದ್ದರೆ ಸಿಗಲಿದೆ ಡೈರೆಕ್ಟ್​ ಫಿನಾಲೆಗೆ ಏರುವ ಟಿಕೆಟ್
ಈ ವಾರದ ಟಾಸ್ಕ್​ ಗೆದ್ದರೆ ಸಿಗಲಿದೆ ಡೈರೆಕ್ಟ್​ ಫಿನಾಲೆಗೆ ಏರುವ ಟಿಕೆಟ್
Daily Devotional: ಪಚ್ಚ ಕರ್ಪೂರದ ಮಹತ್ವ ಮತ್ತು ಉಪಯೋಗ ತಿಳಿಯಿರಿ
Daily Devotional: ಪಚ್ಚ ಕರ್ಪೂರದ ಮಹತ್ವ ಮತ್ತು ಉಪಯೋಗ ತಿಳಿಯಿರಿ