AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಂದಿದೆ ಜಿಯೋ ಹೊಸ ಶ್ರೇಣಿಯ 5 ಪ್ರಿಪೇಯ್ಡ್ ಯೋಜನೆಗಳು: ಜಿಯೋ ಬಳಕೆದಾರರು ಈಗ ಎಲ್ಲ ವಿಡಿಯೋ ನೋಡಬಹುದು

ಭಾರತದ ಅತಿದೊಡ್ಡ ಟೆಲಿಕಾಂ ಆಪರೇಟರ್ ಆಗಿರುವ ಜಿಯೋ ಹೊಸ ಶ್ರೇಣಿಯ ಪ್ರಿಪೇಯ್ಡ್ ಯೋಜನೆಗಳನ್ನು ಆರಂಭಿಸಿದೆ. ಡಿಸ್ನಿ+ ಹಾಟ್‌ಸ್ಟಾರ್‌ ನಲ್ಲಿರುವ ಎಲ್ಲಾ ವಿಷಯಗಳನ್ನು ನೋಡುವ ಅವಕಾಶವನ್ನು ಈ ಪ್ಲಾನ್‌ಗಳು ಒಳಗೊಂಡಿರಲಿದೆ. ಇದರಿಂದ ಜಿಯೋ ಗ್ರಾಹಕರಿಗೆ ಮತ್ತಷ್ಟು ಲಾಭವಾಗಲಿದೆ.

ಬಂದಿದೆ ಜಿಯೋ ಹೊಸ ಶ್ರೇಣಿಯ 5 ಪ್ರಿಪೇಯ್ಡ್ ಯೋಜನೆಗಳು: ಜಿಯೋ ಬಳಕೆದಾರರು ಈಗ ಎಲ್ಲ ವಿಡಿಯೋ ನೋಡಬಹುದು
ಜಿಯೋ ಹೊಸ ಶ್ರೇಣಿಯ ಪ್ರಿಪೇಯ್ಡ್ ಯೋಜನೆಗಳು ಬಂದಿವೆ: ಜಿಯೋ ಬಳಕೆದಾರರು ಈಗ ಎಲ್ಲ ವಿಡಿಯೋ ನೋಡಬಹುದು
Follow us
TV9 Web
| Updated By: ಸಾಧು ಶ್ರೀನಾಥ್​

Updated on:Sep 01, 2021 | 10:02 AM

ಭಾರತದ ಅತಿದೊಡ್ಡ ಟೆಲಿಕಾಂ ಆಪರೇಟರ್ ಆಗಿರುವ ಜಿಯೋ ಹೊಸ ಶ್ರೇಣಿಯ ಪ್ರಿಪೇಯ್ಡ್ ಯೋಜನೆಗಳನ್ನು ಆರಂಭಿಸಿದೆ. ಡಿಸ್ನಿ+ ಹಾಟ್‌ಸ್ಟಾರ್‌ ನಲ್ಲಿರುವ ಎಲ್ಲಾ ವಿಷಯಗಳನ್ನು ನೋಡುವ ಅವಕಾಶವನ್ನು ಈ ಪ್ಲಾನ್‌ಗಳು ಒಳಗೊಂಡಿರಲಿದೆ. ಇದರಿಂದ ಜಿಯೋ ಗ್ರಾಹಕರಿಗೆ ಮತ್ತಷ್ಟು ಲಾಭವಾಗಲಿದೆ. 

ಭಾರತೀಯ ಮಾರುಕಟ್ಟೆಯಲ್ಲಿ ತನ್ನ ಯೋಜನೆ ಮತ್ತು ಕೊಡುಗೆಗಳನ್ನು ಪರಿಷ್ಕರಿಸುತ್ತಿರುವ ಜಿಯೋ, ಹಿಂದಿನದಕ್ಕಿಂತ ಹೆಚ್ಚಿ ವಿಷಯಗಳನ್ನು ನೋಡುವ ಅವಕಾಶವನ್ನು ಹೊಂದಿರುವ ಡಿಸ್ನಿ+ ಹಾಟ್‌ಸ್ಟಾರ್‌ನ 1 ವರ್ಷದ ಚಂದಾದಾರಿಕೆಯನ್ನು ನೀಡುವುದರ ಜೊತೆಗೆ ಅನಿಯಮಿತ ಧ್ವನಿ, ಡೇಟಾ, ಎಸ್‌ಎಂಎಸ್, ಜಿಯೋ ಆಪ್‌ಗಳು ಮತ್ತು ಇತರ ಪ್ರಯೋಜನಗಳನ್ನು ನೀಡಲಿದೆ.

ಹಳೇ ಜಿಯೋ ಪ್ಲಾನ್‌ಗಳು:

ಮೊದಲು ಜಿಯೋ ತನ್ನ ಯೋಜನೆಗಳಲ್ಲಿ ಡಿಸ್ನಿ+ ಹಾಟ್‌ಸ್ಟಾರ್ ವಿಐಪಿ ಚಂದಾದಾರಿಕೆಯನ್ನು ನೀಡುತ್ತಿತ್ತು. ಈ ಚಂದಾದಾರಿಕೆಯಲ್ಲಿ ಲೈವ್ ಕ್ರೀಡೆಗಳು, ಹಾಟ್ ಸ್ಟಾರ್ ವಿಶೇಷಗಳು, ಬ್ಲಾಕ್ ಬಸ್ಟರ್ ಚಲನಚಿತ್ರಗಳು ಮತ್ತು ಟಿವಿ ಕಾರ್ಯಕ್ರಮಗಳಿಗೆ ಬಳಕೆದಾರರು ಪ್ರವೇಶವನ್ನು ಪಡೆಯುತ್ತಿದ್ದರು. ಇದರೊಂದಿಗೆ 3 ಭಾರತೀಯ ಭಾಷೆಗಳಲ್ಲಿ ಡಬ್ ಮಾಡಲಾದ ವಿಷಯಗಳನ್ನು ನೋಡಬಹುದಾಗಿತ್ತು.

ಹೊಚ್ಚ ಹೊಸ ಯೋಜನೆಗಳು:

ಹೊಸ ಜಿಯೋ ಯೋಜನೆಗಳು ಡಿಸ್ನಿ+ ಹಾಟ್‌ಸ್ಟಾರ್ ನಲ್ಲಿರುವ ಎಲ್ಲಾ ಹೊಸ ವಿಷಯಗಳನ್ನು ನೋಡುವ ಅವಕಾಶ ನೀಡಲಿದೆ. ಡಿಸ್ನಿ+ ಓರಿಜಿನಲ್ಸ್‌, ಡಿಸ್ನಿ ಟಿವಿ ಶೋಗಳು ಸೇರಿದಂತೆ ಇಂಗ್ಲಿಷ್ ಭಾಷೆಯಲ್ಲಿ ಅಂತರಾಷ್ಟ್ರೀಯ ಕಂಟೆಂಟ್‌ಗಳನ್ನು ನೋಡುವ ಅವಕಾಶವನ್ನು ಮಾಡಿಕೊಡಲಿದೆ. ಇದರೊಂದಿಗೆ ಮಾರ್ವೆಲ್, ಸ್ಟಾರ್ ವಾರ್ಸ್, ನ್ಯಾಷನಲ್ ಜಿಯೋಗ್ರಾಫಿಕ್, HBO, FX, ಶೋಟೈಮ್ ಮತ್ತು ಇನ್ನಷ್ಟು ವಿಷಯಗಳಿಗೆ ಮುಕ್ತ ಪ್ರವೇಶವನ್ನು ನೀಡಲಿದೆ.

ಹೊಸ ಜಿಯೋ ಯೋಜನೆಗಳು ಡಿಸ್ನಿ + ಹಾಟ್ ಸ್ಟಾರ್ ಸಬ್‌ಸ್ಕ್ರಿಪ್ಶನ್ ನೊಂದಿಗೆ:

ಪ್ಲಾನ್‌ 1 : ರೂ. 499

ಈ ಪ್ಲಾನ್‌ನಲ್ಲಿ ಬಳಕೆದಾರರು ಪ್ರತಿ ನಿತ್ಯ ವೇಗದ 3 GB ಡೇಟಾವನ್ನು ಪಡೆಯಲಿದ್ದಾರೆ. ಇದಲ್ಲದೇ ಅನಿಯಮಿತ ಕರೆಗಳು ಮತ್ತು ಮೇಸೆಜ್‌ ಕಳುಹಿಸುವ ಅವಕಾಶವು ದೊರೆಯಲಿದೆ. 28 ದಿನಗಳ ವ್ಯಾಲಿಡಿಟಿಯನ್ನು ಹೊಂದಿದ್ದು, ಡಿಸ್ನಿ + ಹಾಟ್ ಸ್ಟಾರ್ ಸಬ್‌ಸ್ಕ್ರಿಪ್ಶನ್ ಸಹ ಲಭ್ಯವಿರಲಿದೆ. ಇದಕ್ಕಾಗಿ ರೂ. 499 ಪಾವತಿ ಮಾಡಬೇಕಾಗಿದೆ.

ಪ್ಲಾನ್‌ 2 : ರೂ. 666

ಈ ಪ್ಲಾನ್‌ನಲ್ಲಿ ಬಳಕೆದಾರರು ಪ್ರತಿ ನಿತ್ಯ ವೇಗದ 2 GB ಡೇಟಾವನ್ನು ಪಡೆಯಲಿದ್ದಾರೆ. ಇದಲ್ಲದೇ ಅನಿಯಮಿತ ಕರೆಗಳು ಮತ್ತು ಮೇಸೆಜ್‌ ಕಳುಹಿಸುವ ಅವಕಾಶವು ದೊರೆಯಲಿದೆ. 56 ದಿನಗಳ ವ್ಯಾಲಿಡಿಟಿಯನ್ನು ಹೊಂದಿದ್ದು, ಡಿಸ್ನಿ + ಹಾಟ್ ಸ್ಟಾರ್ ಸಬ್‌ಸ್ಕ್ರಿಪ್ಶನ್ ಸಹ ಲಭ್ಯವಿರಲಿದೆ. ಇದಕ್ಕಾಗಿ ರೂ. 666 ಪಾವತಿ ಮಾಡಬೇಕಾಗಿದೆ.

ಪ್ಲಾನ್‌ 3 :ರೂ. 888

ಈ ಪ್ಲಾನ್‌ನಲ್ಲಿ ಬಳಕೆದಾರರು ಪ್ರತಿ ನಿತ್ಯ ವೇಗದ 2 GB ಡೇಟಾವನ್ನು ಪಡೆಯಲಿದ್ದಾರೆ. ಇದಲ್ಲದೇ ಅನಿಯಮಿತ ಕರೆಗಳು ಮತ್ತು ಮೇಸೆಜ್‌ ಕಳುಹಿಸುವ ಅವಕಾಶವು ದೊರೆಯಲಿದೆ. 84 ದಿನಗಳ ವ್ಯಾಲಿಡಿಟಿಯನ್ನು ಹೊಂದಿದ್ದು, ಡಿಸ್ನಿ + ಹಾಟ್ ಸ್ಟಾರ್ ಸಬ್‌ಸ್ಕ್ರಿಪ್ಶನ್ ಸಹ ಲಭ್ಯವಿರಲಿದೆ. ಇದಕ್ಕಾಗಿ ರೂ. 888 ಪಾವತಿ ಮಾಡಬೇಕಾಗಿದೆ.

ಪ್ಲಾನ್‌ 4 : ರೂ. 2599 (ಒಂದು ವರ್ಷ ವ್ಯಾಲಿಡಿಟಿ)

ಈ ಪ್ಲಾನ್‌ನಲ್ಲಿ ಬಳಕೆದಾರರು ಪ್ರತಿ ನಿತ್ಯ ವೇಗದ 2 GB ಡೇಟಾವನ್ನು ಪಡೆಯಲಿದ್ದಾರೆ. ಇದಲ್ಲದೇ ಅನಿಯಮಿತ ಕರೆಗಳು ಮತ್ತು ಮೇಸೆಜ್‌ ಕಳುಹಿಸುವ ಅವಕಾಶವು ದೊರೆಯಲಿದೆ. 365 ದಿನಗಳ ವ್ಯಾಲಿಡಿಟಿಯನ್ನು ಹೊಂದಿದ್ದು, ಡಿಸ್ನಿ + ಹಾಟ್ ಸ್ಟಾರ್ ಸಬ್‌ಸ್ಕ್ರಿಪ್ಶನ್ ಸಹ ಲಭ್ಯವಿರಲಿದೆ. ಇದಕ್ಕಾಗಿ ರೂ. 2599 ಪಾವತಿ ಮಾಡಬೇಕಾಗಿದೆ.

ಪ್ಲಾನ್‌ 5 : ರೂ. 549

ಈ ಪ್ಲಾನ್‌ನಲ್ಲಿ ಬಳಕೆದಾರರು ಪ್ರತಿ ನಿತ್ಯ ವೇಗದ 1.5 GB ಡೇಟಾವನ್ನು ಪಡೆಯಲಿದ್ದಾರೆ. 56 ದಿನಗಳ ವ್ಯಾಲಿಡಿಟಿಯನ್ನು ಹೊಂದಿದ್ದು, ಡಿಸ್ನಿ + ಹಾಟ್ ಸ್ಟಾರ್ ಸಬ್‌ಸ್ಕ್ರಿಪ್ಶನ್ ಸಹ ಲಭ್ಯವಿರಲಿದೆ. ಇದಕ್ಕಾಗಿ ರೂ. 549 ಪಾವತಿ ಮಾಡಬೇಕಾಗಿದೆ. (ಇದರಲ್ಲಿ ಉಚಿತ ಕರೆ ಸೌಲಭ್ಯವಿರುವುದಿಲ್ಲ)

ಈ ಹೊಸ ಪ್ಲಾನ್‌ ಗಳು 01ನೇ ಸೆಪ್ಟೆಂಬರ್ 2021 ರಿಂದ ಲಭ್ಯವಿರುತ್ತದೆ. ಸಕ್ರಿಯ ಡಿಸ್ನಿ+ ಹಾಟ್‌ಸ್ಟಾರ್ ಯೋಜನೆಗಳಲ್ಲಿರುವ ಎಲ್ಲಾ ಜಿಯೋ ಗ್ರಾಹಕರು ಅಸ್ತಿತ್ವದಲ್ಲಿರುವ ಪ್ರಯೋಜನಗಳನ್ನು ಅವರ ಪ್ರಸ್ತುತ ಚಂದಾದಾರಿಕೆ ಅವಧಿ ಮುಗಿಯುವವರೆಗೆ ಆನಂದಿಸುವುದನ್ನು ಮುಂದುವರಿಸುತ್ತಾರೆ.

Also read:

ಮಂಡ್ಯದಲ್ಲಿ ಸ್ವಂತ ಮನೆ ನಿರ್ಮಾಣಕ್ಕೆ ಸುಮಲತಾ ಗುದ್ದಲಿ ಪೂಜೆ; ಪುತ್ರನ ರಾಜಕೀಯ ಅಭಿಷೇಕಕ್ಕೆ ಅಡಿಪಾಯ ಹಾಕಿದರಾ?

ಅಪಘಾತಕ್ಕೂ ಮುನ್ನ ಜಿಗ್​ಜ್ಯಾಗ್​ ರೈಡ್: ಪೊಲೀಸರ​ ಮೇಲೆಯೇ ಕಾರು ಹತ್ತಿಸೋ ಯತ್ನ, ಜೊಮ್ಯಾಟೋ ಹುಡುಗ ಜಸ್ಟ್​ ಮಿಸ್

(Jio launches 5 prepaid recharge plans with free Disney plus Hotstar subscription)

Published On - 9:56 am, Wed, 1 September 21

ಲೈಂಗಿಕ ದೌರ್ಜನ್ಯ ನಡೆಸಿ ವಿಡಿಯೋ ಮಾಡಿದ್ದಾನೆ: ಮಡೆನೂರು ಮನು ಮೇಲೆ ಆರೋಪ
ಲೈಂಗಿಕ ದೌರ್ಜನ್ಯ ನಡೆಸಿ ವಿಡಿಯೋ ಮಾಡಿದ್ದಾನೆ: ಮಡೆನೂರು ಮನು ಮೇಲೆ ಆರೋಪ
ಕೆಣಕ್ಕಿದ ಸಿರಾಜ್​ಗೆ ಪೂರನ್ ನೀಡಿದ ಉತ್ತರ ಹೇಗಿತ್ತು ಗೊತ್ತಾ?
ಕೆಣಕ್ಕಿದ ಸಿರಾಜ್​ಗೆ ಪೂರನ್ ನೀಡಿದ ಉತ್ತರ ಹೇಗಿತ್ತು ಗೊತ್ತಾ?
ಗುಜರಾತ್ ವಿರುದ್ಧ ಸಿಡಿಲಬ್ಬರದ ಶತಕ ಸಿಡಿಸಿದ ಮಿಚೆಲ್ ಮಾರ್ಷ್
ಗುಜರಾತ್ ವಿರುದ್ಧ ಸಿಡಿಲಬ್ಬರದ ಶತಕ ಸಿಡಿಸಿದ ಮಿಚೆಲ್ ಮಾರ್ಷ್
ಭಾರತೀಯ ಸೇನೆ ಮಾಹಿತಿಯನ್ನು ಪಾಕಿಸ್ತಾನಕ್ಕೆ ಕಳಿಸುತ್ತಿದ್ದ ಇಬ್ಬರ ಬಂಧನ
ಭಾರತೀಯ ಸೇನೆ ಮಾಹಿತಿಯನ್ನು ಪಾಕಿಸ್ತಾನಕ್ಕೆ ಕಳಿಸುತ್ತಿದ್ದ ಇಬ್ಬರ ಬಂಧನ
ಇಲಿಗಳು ತಿಂದ ಆಹಾರವೇ ಈ ದೇವಸ್ಥಾನದ ಪ್ರಸಾದ: ಏನಿದರ ವಿಶೇಷತೆ?
ಇಲಿಗಳು ತಿಂದ ಆಹಾರವೇ ಈ ದೇವಸ್ಥಾನದ ಪ್ರಸಾದ: ಏನಿದರ ವಿಶೇಷತೆ?
ಬಿಜೆಪಿ ನಾಯಕರೆಲ್ಲ ಜೊತೆಗಿದ್ದೇವೆ, ನಮ್ಮ ಹೋರಾಟ ನಿಲ್ಲಲ್ಲ: ಚಲವಾದಿ
ಬಿಜೆಪಿ ನಾಯಕರೆಲ್ಲ ಜೊತೆಗಿದ್ದೇವೆ, ನಮ್ಮ ಹೋರಾಟ ನಿಲ್ಲಲ್ಲ: ಚಲವಾದಿ
ಗುಜರಾತ್​ನ ದಾಹೋದ್​ನಲ್ಲಿ 32 ವರ್ಷಗಳ ಬಳಿಕ ಹುಲಿ ಪ್ರತ್ಯಕ್ಷ
ಗುಜರಾತ್​ನ ದಾಹೋದ್​ನಲ್ಲಿ 32 ವರ್ಷಗಳ ಬಳಿಕ ಹುಲಿ ಪ್ರತ್ಯಕ್ಷ
ಗುತ್ತಿಗೆದಾರರಿಗೆ ಹಣ ಪಾವತಿಯಾಗದ ಕಾರಣ ಸಾಯಿ ಲೇಔಟ್​ನಲ್ಲಿ ಸಮಸ್ಯೆ: ನಿಖಿಲ್
ಗುತ್ತಿಗೆದಾರರಿಗೆ ಹಣ ಪಾವತಿಯಾಗದ ಕಾರಣ ಸಾಯಿ ಲೇಔಟ್​ನಲ್ಲಿ ಸಮಸ್ಯೆ: ನಿಖಿಲ್
‘ಅವನು ಸಾಯೋ ಬದಲು ಇವನು ಸಾಯಬಾರದಾ ಎಂದಿದ್ರು’: ಮಡೆನೂರು ಮನು
‘ಅವನು ಸಾಯೋ ಬದಲು ಇವನು ಸಾಯಬಾರದಾ ಎಂದಿದ್ರು’: ಮಡೆನೂರು ಮನು
ಕೇಂದ್ರಕ್ಕೆ ಪವರ್ ಇಲ್ಲ...ರಾಮನಗರ ಹೆಸರು ಬದಲಾವಣೆ ಬಗ್ಗೆ ಡಿಕೆಶಿ ಸ್ಪಷ್ಟನೆ
ಕೇಂದ್ರಕ್ಕೆ ಪವರ್ ಇಲ್ಲ...ರಾಮನಗರ ಹೆಸರು ಬದಲಾವಣೆ ಬಗ್ಗೆ ಡಿಕೆಶಿ ಸ್ಪಷ್ಟನೆ