ಮೈಸೂರು: ನಗರದ ಗೊಂಕುಲಂ ಬಡಾವಣೆಯಲ್ಲಿ ಕೊರೊನಾ ಸೋಂಕಿತ ವ್ಯಕ್ತಿ ಅತ್ಮಹತ್ಯೆಗೆ ಶರಣಾಗಿದ್ದಾರೆ. 54 ವರ್ಷದ ವ್ಯಕ್ತಿ ಕೊರೊನಾದಿಂದ ಕಂಗೆಟ್ಟು ಮಾನಸಿಕ ಖಿನ್ನತೆಗೆ ಒಳಗಾಗಿ ಅತ್ಮಹತ್ಯೆ ಮಾಡಿಕೊಂಡಿದ್ದಾರೆ. ಇವರು ಜೆ ಕೆ ಟೈರ್ಸ್ ಕಂಪನಿಯಲ್ಲಿ ಉದ್ಯೋಗಿಯಾಗಿದ್ದರು.
ಕೆಲ ದಿನಗಳ ಹಿಂದೆ ಸೋಂಕು ದೃಢಪಡುತ್ತಿದ್ದಂತೆ ಕೆಎಸ್ಓಯು ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಹೋಂ ಐಸೋಲೇಷನ್ ಚಿಕಿತ್ಸೆ ಪಡೆಯಲು ವೈದ್ಯರು ಸೂಚಿಸಿದ್ದರು. ಅದರಂತೆ ನಿನ್ನೆ ಕೋವಿಡ್ ಸೆಂಟರ್ ನಿಂದ ಮನೆಗೆ ಬಂದಿದ್ದ ವ್ಯಕ್ತಿ, ಇಂದು ಮನೆಯಲ್ಲಿ ನೇಣು ಬಿಗಿದುಕೊಂಡು ಅತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿವಿ ಪುರಂ ಪೊಲಿಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.