Tamil Nadu Elections 2021: ಕಮಲಧಾರಿ ಅಣ್ಣಾಮಲೈ ಸೈಕಲ್​ನಲ್ಲಿ ಬಂದು ನಾಮಪತ್ರ ಸಲ್ಲಿಕೆ; ಅರವಕುರುಚಿ ಕ್ಷೇತ್ರದಿಂದ ವಿಧಾನಸಭೆಗೆ ಸ್ಪರ್ಧೆ

ನಾಮಪತ್ರ ಸಲ್ಲಿಕೆಯ ವಿಡಿಯೋ ಹಾಗೂ ಮಾಹಿತಿಯನ್ನು ತನ್ನ ಅಧಿಕೃತ ಟ್ವಿಟರ್​ ಖಾತೆಯಲ್ಲಿ ಹಂಚಿಕೊಂಡಿರುವ ಕೆ.ಅಣ್ಣಾಮಲೈ, ತಾನು ಸಾಮಾನ್ಯ ಜನರ ಪ್ರತಿನಿಧಿಯಾಗಿ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದೇನೆ. ಅದರ ಸಂಕೇತವಾಗಿ ಸೈಕಲ್​ ಮೇಲೆ ತೆರಳಿ ನಾಮಪತ್ರ ಸಲ್ಲಿಸುತ್ತಿದ್ದೇನೆ ಎಂದು ಹೇಳಿಕೊಂಡಿದ್ದಾರೆ.

Tamil Nadu Elections 2021: ಕಮಲಧಾರಿ ಅಣ್ಣಾಮಲೈ ಸೈಕಲ್​ನಲ್ಲಿ ಬಂದು ನಾಮಪತ್ರ ಸಲ್ಲಿಕೆ; ಅರವಕುರುಚಿ ಕ್ಷೇತ್ರದಿಂದ ವಿಧಾನಸಭೆಗೆ ಸ್ಪರ್ಧೆ
ಅರವಕುರಿಚಿ ವಿಧಾನಸಭಾ ಕ್ಷೇತ್ರದಲ್ಲಿ ಕಳೆದ 53 ವರ್ಷಗಳಿಂದಲೂ ಡಿಎಂಕೆ ಗೆಲುವು
Follow us
Skanda
|

Updated on:Mar 19, 2021 | 6:52 PM

ಚೆನ್ನೈ: ಕೊರೊನಾ ವೈರಸ್ ಎರಡನೇ ಅಲೆಯ ಆತಂಕದ ನಡುವೆಯೇ ದೇಶದ ಹಲವು ಭಾಗಗಳಲ್ಲಿ ಚುನಾವಣಾ ಕಾವು ಏರುತ್ತಿದೆ. ನೆರೆರಾಜ್ಯ ತಮಿಳುನಾಡು ಸಹ ಚುನಾವಣೆಗೆ ಭರದಿಂದ ಸಿದ್ಧವಾಗುತ್ತಿದ್ದು, ಎಲ್ಲಾ ಪಕ್ಷಗಳೂ ಗೆಲುವಿಗೆ ತಂತ್ರ ರೂಪಿಸುತ್ತಿವೆ. ತಮಿಳುನಾಡಿನ ಅರವಕುರುಚಿ ವಿಧಾನಸಭಾ ಕ್ಷೇತ್ರದಿಂದ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ಮಾಜಿ ಐಪಿಎಸ್​ ಅಧಿಕಾರಿ, ಕರ್ನಾಟಕದ ಸಿಂಗಂ ಎಂದೇ ಖ್ಯಾತಿ ಹೊಂದಿದ್ದ ಕೆ.ಅಣ್ಣಾಮಲೈ ನಾಮಪತ್ರ ಸಲ್ಲಿಸಿದ್ದಾರೆ.

ಡಿಎಂಕೆ (ದ್ರಾವಿಡ ಮುನೇತ್ರ ಕಾಳಗಂ) ಪಕ್ಷದ ಭದ್ರಕೋಟೆ ಎಂದೆನಿಸಿಕೊಂಡಿರುವ ಅರವಕುರಿಚಿ ವಿಧಾನಸಭಾ ಕ್ಷೇತ್ರದಲ್ಲಿ ಅಲ್ಪಸಂಖ್ಯಾತ ಮತದಾರರೇ ಹೆಚ್ಚಿದ್ದು, ಕಳೆದ 53 ವರ್ಷಗಳಿಂದಲೂ ಡಿಎಂಕೆ ಅಭ್ಯರ್ಥಿಗಳೇ ಗೆಲುವು ಸಾಧಿಸುತ್ತಾ ಬಂದಿದ್ದಾರೆ. ಆದರೆ, ಈ ಬಾರಿ ಆ ಕ್ಷೇತ್ರವನ್ನು ತನ್ನ ತೆಕ್ಕೆಗೆ ತೆಗೆದುಕೊಳ್ಳುವ ಉತ್ಸಾಹದಲ್ಲಿರುವ ಬಿಜೆಪಿ ಪ್ರಬಲ ಅಭ್ಯರ್ಥಿಯನ್ನಾಗಿ ಅಣ್ಣಾಮಲೈ ಅವರನ್ನು ಕಣಕ್ಕಿಳಿಸುವ ಮೂಲಕ ಡಿಎಂಕೆ ಪಕ್ಷಕ್ಕೆ ಭಾರೀ ಪೈಪೋಟಿಯೊಡ್ಡಲು ಸಜ್ಜಾಗಿದೆ.

ತಮಿಳುನಾಡಿನಲ್ಲಿ ಭಾರತೀಯ ಜನತಾ ಪಕ್ಷ ಮತ್ತು ಎಐಡಿಎಂಕೆ ನಡುವೆ ಚುನಾವಣಾ ಪೂರ್ವ ಮೈತ್ರಿಯಾಗಿದ್ದು, ಬಿಜೆಪಿಗೆ 20 ಕ್ಷೇತ್ರಗಳನ್ನು ಬಿಟ್ಟುಕೊಡಲಾಗಿದೆ. ಈ ಪೈಕಿ ಕರೂರು ಜಿಲ್ಲೆಯ ಅರವಕುರಿಚಿ ವಿಧಾನಸಭಾ ಕ್ಷೇತ್ರ ಬಿಜೆಪಿ ಪಾಲಿಗೆ ಲಭಿಸಿದೆ. ಒಟ್ಟು 2,13,110 ಮತದಾರರನ್ನು ಹೊಂದಿರುವ ಕ್ಷೇತ್ರದಲ್ಲಿ 1,01,902 ಪುರುಷ ಮತ್ತು 1,11,201 ಮಹಿಳಾ ಮತದಾರರಿದ್ದು, 45,000ಕ್ಕೂ ಹೆಚ್ಚು ಮುಸ್ಲಿಂ ಮತದಾರರಿದ್ದಾರೆ. ಹೇಗಾದರೂ ಮಾಡಿ ಇಲ್ಲಿ ಗೆಲ್ಲಲೇಬೇಕು ಎಂದು ಪಣತೊಟ್ಟಿರುವ ಬಿಜೆಪಿ ತನ್ನ ಅಭ್ಯರ್ಥಿಯನ್ನಾಗಿ ಕೆ. ಅಣ್ಣಾಮಲೈ ಅವರನ್ನು ಕಣಕ್ಕಿಳಿಸುತ್ತಿದೆ.

ಸೈಕಲ್​ ಮೇಲೆ ತೆರಳಿ ನಾಮಪತ್ರ ಸಲ್ಲಿಕೆ ನಾಮಪತ್ರ ಸಲ್ಲಿಕೆಯ ವಿಡಿಯೋ ಹಾಗೂ ಮಾಹಿತಿಯನ್ನು ತನ್ನ ಅಧಿಕೃತ ಟ್ವಿಟರ್​ ಖಾತೆಯಲ್ಲಿ ಹಂಚಿಕೊಂಡಿರುವ ಕೆ.ಅಣ್ಣಾಮಲೈ, ತಾನು ಸಾಮಾನ್ಯ ಜನರ ಪ್ರತಿನಿಧಿಯಾಗಿ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದೇನೆ. ಅದರ ಸಂಕೇತವಾಗಿ ಸೈಕಲ್​ ಮೇಲೆ ತೆರಳಿ ನಾಮಪತ್ರ ಸಲ್ಲಿಸುತ್ತಿದ್ದೇನೆ. ಈ ಸಂದರ್ಭದಲ್ಲಿ ನನಗೆ ಜೊತೆಯಾಗಿ ನಿಂತ ತೇಜಸ್ವಿ ಸೂರ್ಯ ಅವರಿಗೆ ಧನ್ಯವಾದಗಳು ಎಂದು ಹೇಳಿಕೊಂಡಿದ್ದಾರೆ. ನಾಮಪತ್ರ ಸಲ್ಲಿಕೆ ವೇಳೆ ಅಣ್ಣಾಮಲೈಗೆ ಮುನಿರತ್ನ, ತೇಜಸ್ವಿ ಸೂರ್ಯ ಸೇರಿದಂತೆ ಬಿಜೆಪಿಯ ಹಲವು ಮುಖಂಡರು ಹಾಗೂ ಕಾರ್ಯಕರ್ತರು ಬೆಂಬಲ ಸೂಚಿಸಿದರು.

K Annamalai filed nomination from BJP

ನಾಮಪತ್ರ ಸಲ್ಲಿಸಿದ ಅಣ್ಣಾಮಲೈ

K Annamalai

ಅಣ್ಣಾಮಲೈ

ಇದನ್ನೂ ಓದಿ: ಬಿಜೆಪಿಯಿಂದ ಕೇರಳ, ಅಸ್ಸಾಂ, ತಮಿಳುನಾಡು, ಪಶ್ಚಿಮ ಬಂಗಾಳ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ; ಅಣ್ಣಾಮಲೈ, ಖುಷ್ಬೂಗೆ ಅವಕಾಶ 

Kamal Haasan: ತಮಿಳುನಾಡು ಚುನಾವಣೆ: ಕೊಯಮತ್ತೂರು ದಕ್ಷಿಣ ಕ್ಷೇತ್ರದಿಂದ ಕಮಲ್ ಹಾಸನ್ ನಾಮಪತ್ರ

Published On - 2:20 pm, Fri, 19 March 21

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್