ಚೆನ್ನೈ: ಕೊರೊನಾ ವೈರಸ್ ಎರಡನೇ ಅಲೆಯ ಆತಂಕದ ನಡುವೆಯೇ ದೇಶದ ಹಲವು ಭಾಗಗಳಲ್ಲಿ ಚುನಾವಣಾ ಕಾವು ಏರುತ್ತಿದೆ. ನೆರೆರಾಜ್ಯ ತಮಿಳುನಾಡು ಸಹ ಚುನಾವಣೆಗೆ ಭರದಿಂದ ಸಿದ್ಧವಾಗುತ್ತಿದ್ದು, ಎಲ್ಲಾ ಪಕ್ಷಗಳೂ ಗೆಲುವಿಗೆ ತಂತ್ರ ರೂಪಿಸುತ್ತಿವೆ. ತಮಿಳುನಾಡಿನ ಅರವಕುರುಚಿ ವಿಧಾನಸಭಾ ಕ್ಷೇತ್ರದಿಂದ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ಮಾಜಿ ಐಪಿಎಸ್ ಅಧಿಕಾರಿ, ಕರ್ನಾಟಕದ ಸಿಂಗಂ ಎಂದೇ ಖ್ಯಾತಿ ಹೊಂದಿದ್ದ ಕೆ.ಅಣ್ಣಾಮಲೈ ನಾಮಪತ್ರ ಸಲ್ಲಿಸಿದ್ದಾರೆ.
ಡಿಎಂಕೆ (ದ್ರಾವಿಡ ಮುನೇತ್ರ ಕಾಳಗಂ) ಪಕ್ಷದ ಭದ್ರಕೋಟೆ ಎಂದೆನಿಸಿಕೊಂಡಿರುವ ಅರವಕುರಿಚಿ ವಿಧಾನಸಭಾ ಕ್ಷೇತ್ರದಲ್ಲಿ ಅಲ್ಪಸಂಖ್ಯಾತ ಮತದಾರರೇ ಹೆಚ್ಚಿದ್ದು, ಕಳೆದ 53 ವರ್ಷಗಳಿಂದಲೂ ಡಿಎಂಕೆ ಅಭ್ಯರ್ಥಿಗಳೇ ಗೆಲುವು ಸಾಧಿಸುತ್ತಾ ಬಂದಿದ್ದಾರೆ. ಆದರೆ, ಈ ಬಾರಿ ಆ ಕ್ಷೇತ್ರವನ್ನು ತನ್ನ ತೆಕ್ಕೆಗೆ ತೆಗೆದುಕೊಳ್ಳುವ ಉತ್ಸಾಹದಲ್ಲಿರುವ ಬಿಜೆಪಿ ಪ್ರಬಲ ಅಭ್ಯರ್ಥಿಯನ್ನಾಗಿ ಅಣ್ಣಾಮಲೈ ಅವರನ್ನು ಕಣಕ್ಕಿಳಿಸುವ ಮೂಲಕ ಡಿಎಂಕೆ ಪಕ್ಷಕ್ಕೆ ಭಾರೀ ಪೈಪೋಟಿಯೊಡ್ಡಲು ಸಜ್ಜಾಗಿದೆ.
ತಮಿಳುನಾಡಿನಲ್ಲಿ ಭಾರತೀಯ ಜನತಾ ಪಕ್ಷ ಮತ್ತು ಎಐಡಿಎಂಕೆ ನಡುವೆ ಚುನಾವಣಾ ಪೂರ್ವ ಮೈತ್ರಿಯಾಗಿದ್ದು, ಬಿಜೆಪಿಗೆ 20 ಕ್ಷೇತ್ರಗಳನ್ನು ಬಿಟ್ಟುಕೊಡಲಾಗಿದೆ. ಈ ಪೈಕಿ ಕರೂರು ಜಿಲ್ಲೆಯ ಅರವಕುರಿಚಿ ವಿಧಾನಸಭಾ ಕ್ಷೇತ್ರ ಬಿಜೆಪಿ ಪಾಲಿಗೆ ಲಭಿಸಿದೆ. ಒಟ್ಟು 2,13,110 ಮತದಾರರನ್ನು ಹೊಂದಿರುವ ಕ್ಷೇತ್ರದಲ್ಲಿ 1,01,902 ಪುರುಷ ಮತ್ತು 1,11,201 ಮಹಿಳಾ ಮತದಾರರಿದ್ದು, 45,000ಕ್ಕೂ ಹೆಚ್ಚು ಮುಸ್ಲಿಂ ಮತದಾರರಿದ್ದಾರೆ. ಹೇಗಾದರೂ ಮಾಡಿ ಇಲ್ಲಿ ಗೆಲ್ಲಲೇಬೇಕು ಎಂದು ಪಣತೊಟ್ಟಿರುವ ಬಿಜೆಪಿ ತನ್ನ ಅಭ್ಯರ್ಥಿಯನ್ನಾಗಿ ಕೆ. ಅಣ್ಣಾಮಲೈ ಅವರನ್ನು ಕಣಕ್ಕಿಳಿಸುತ್ತಿದೆ.
ಸೈಕಲ್ ಮೇಲೆ ತೆರಳಿ ನಾಮಪತ್ರ ಸಲ್ಲಿಕೆ
ನಾಮಪತ್ರ ಸಲ್ಲಿಕೆಯ ವಿಡಿಯೋ ಹಾಗೂ ಮಾಹಿತಿಯನ್ನು ತನ್ನ ಅಧಿಕೃತ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿರುವ ಕೆ.ಅಣ್ಣಾಮಲೈ, ತಾನು ಸಾಮಾನ್ಯ ಜನರ ಪ್ರತಿನಿಧಿಯಾಗಿ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದೇನೆ. ಅದರ ಸಂಕೇತವಾಗಿ ಸೈಕಲ್ ಮೇಲೆ ತೆರಳಿ ನಾಮಪತ್ರ ಸಲ್ಲಿಸುತ್ತಿದ್ದೇನೆ. ಈ ಸಂದರ್ಭದಲ್ಲಿ ನನಗೆ ಜೊತೆಯಾಗಿ ನಿಂತ ತೇಜಸ್ವಿ ಸೂರ್ಯ ಅವರಿಗೆ ಧನ್ಯವಾದಗಳು ಎಂದು ಹೇಳಿಕೊಂಡಿದ್ದಾರೆ. ನಾಮಪತ್ರ ಸಲ್ಲಿಕೆ ವೇಳೆ ಅಣ್ಣಾಮಲೈಗೆ ಮುನಿರತ್ನ, ತೇಜಸ್ವಿ ಸೂರ್ಯ ಸೇರಿದಂತೆ ಬಿಜೆಪಿಯ ಹಲವು ಮುಖಂಡರು ಹಾಗೂ ಕಾರ್ಯಕರ್ತರು ಬೆಂಬಲ ಸೂಚಿಸಿದರು.
Thank you all for participating in my nomination today for Aravakurichi Assembly constituency as a candidate for @BJP4India. I’m grateful to Shri @Tejasvi_Surya for being with me today.
I’m a candidate for common people & to symbolize that I went in a cycle to file my nomination! pic.twitter.com/esP4dgFjmO— K.Annamalai (@annamalai_k) March 18, 2021
நேற்று என்னுடைய வேட்பு மனு தாக்கலின் பொழுது அரவக்குறிச்சி தொகுதியில் உள்ள ஒரு கட்சியின் சாதாரண தொண்டனாக , மக்களில் ஒருவனாக , மக்களோடு மக்களாக சைக்கிளில் சென்றது ஒரு நெகிழ்ச்சியான தருணம்.
இதுதாங்க நேரம், இனி எல்லாம் மாறும். pic.twitter.com/UHRUAUGeV5
— K.Annamalai (@annamalai_k) March 19, 2021
ಇದನ್ನೂ ಓದಿ:
ಬಿಜೆಪಿಯಿಂದ ಕೇರಳ, ಅಸ್ಸಾಂ, ತಮಿಳುನಾಡು, ಪಶ್ಚಿಮ ಬಂಗಾಳ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ; ಅಣ್ಣಾಮಲೈ, ಖುಷ್ಬೂಗೆ ಅವಕಾಶ
Kamal Haasan: ತಮಿಳುನಾಡು ಚುನಾವಣೆ: ಕೊಯಮತ್ತೂರು ದಕ್ಷಿಣ ಕ್ಷೇತ್ರದಿಂದ ಕಮಲ್ ಹಾಸನ್ ನಾಮಪತ್ರ
Published On - 2:20 pm, Fri, 19 March 21