AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲ್ಯಾಣ್​ ದೈಹಿಕ ಹಿಂಸೆ ನೀಡ್ತಿದ್ದಾರೆ, ನನಗೆ ವಿಚ್ಛೇದನ ಬೇಕು: ಕೋರ್ಟ್​ ಮೊರೆಹೋದ ಪ್ರೇಮಕವಿ ಪತ್ನಿ

ಬೆಳಗಾವಿ: ತಮ್ಮ ಪತ್ನಿ ಅಶ್ವಿನಿ ಕಿಡ್ನಾಪ್ ಆಗಿದ್ದಾರೆಂದು ಚಿತ್ರಸಾಹಿತಿ ಕೆ.ಕಲ್ಯಾಣ್ ನಗರದ ಮಾಳಮಾರುತಿ ಠಾಣೆಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಅವರ ಪತ್ನಿ ಅಶ್ವಿನಿಯನ್ನು ಠಾಣೆಗೆ ಕರೆತಂದು ವಿಚಾರಣೆ ನಡೆಸಲಾಗುತ್ತಿದೆ. ಕಿಡ್ನ್ಯಾಪ್‌ ಬಗ್ಗೆ ಪೊಲೀಸ್​ ಇನ್​ಸ್ಪೆಕ್ಟರ್​ ಶ್ರೀದೇವಿ ಪಾಟೀಲ್‌ರಿಂದ ವಿಚಾರಣೆ ನಡೆಸಲಾಗುತ್ತಿದ್ದು ಇನ್ನೊಂದು ಕೊಠಡಿಯಲ್ಲಿ ಅಶ್ವಿನಿ ತಂದೆ ಶಿವಾನಂದ ವಾಲಿ ವಿಚಾರಣೆ ನಡೆಸಲಾಗುತ್ತಿದೆ. ಈ ನಡುವೆ ಕೆ.ಕಲ್ಯಾಣ ಪತ್ನಿ ಅಶ್ವಿನಿ ಅಲಿಯಾಸ್ ಐಶ್ವರ್ಯಾ ವಿಚ್ಛೇದನ ಕೋರಿ ಅರ್ಜಿ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ. ಜೂನ್ 26ರಂದು ಬೆಳಗಾವಿಯ ಕೌಟುಂಬಿಕ […]

ಕಲ್ಯಾಣ್​ ದೈಹಿಕ ಹಿಂಸೆ ನೀಡ್ತಿದ್ದಾರೆ, ನನಗೆ ವಿಚ್ಛೇದನ ಬೇಕು: ಕೋರ್ಟ್​ ಮೊರೆಹೋದ ಪ್ರೇಮಕವಿ ಪತ್ನಿ
KUSHAL V
|

Updated on:Oct 03, 2020 | 7:26 PM

Share

ಬೆಳಗಾವಿ: ತಮ್ಮ ಪತ್ನಿ ಅಶ್ವಿನಿ ಕಿಡ್ನಾಪ್ ಆಗಿದ್ದಾರೆಂದು ಚಿತ್ರಸಾಹಿತಿ ಕೆ.ಕಲ್ಯಾಣ್ ನಗರದ ಮಾಳಮಾರುತಿ ಠಾಣೆಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಅವರ ಪತ್ನಿ ಅಶ್ವಿನಿಯನ್ನು ಠಾಣೆಗೆ ಕರೆತಂದು ವಿಚಾರಣೆ ನಡೆಸಲಾಗುತ್ತಿದೆ. ಕಿಡ್ನ್ಯಾಪ್‌ ಬಗ್ಗೆ ಪೊಲೀಸ್​ ಇನ್​ಸ್ಪೆಕ್ಟರ್​ ಶ್ರೀದೇವಿ ಪಾಟೀಲ್‌ರಿಂದ ವಿಚಾರಣೆ ನಡೆಸಲಾಗುತ್ತಿದ್ದು ಇನ್ನೊಂದು ಕೊಠಡಿಯಲ್ಲಿ ಅಶ್ವಿನಿ ತಂದೆ ಶಿವಾನಂದ ವಾಲಿ ವಿಚಾರಣೆ ನಡೆಸಲಾಗುತ್ತಿದೆ. ಈ ನಡುವೆ ಕೆ.ಕಲ್ಯಾಣ ಪತ್ನಿ ಅಶ್ವಿನಿ ಅಲಿಯಾಸ್ ಐಶ್ವರ್ಯಾ ವಿಚ್ಛೇದನ ಕೋರಿ ಅರ್ಜಿ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ. ಜೂನ್ 26ರಂದು ಬೆಳಗಾವಿಯ ಕೌಟುಂಬಿಕ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು ಎಂದು ಅಶ್ವಿನಿ ಪರ ವಕೀಲ ಸತೀಶ್ ದಳವಾಯಿ ಹೇಳಿದ್ದಾರೆ.

ಕೆ.ಕಲ್ಯಾಣ್ ದೈಹಿಕವಾಗಿ, ಮಾನಸಿಕವಾಗಿ ಹಿಂಸೆ ನೀಡುತ್ತಿದ್ದಾರೆ. ಹೀಗಾಗಿ ವಿಚ್ಛೇದನ ಬೇಕು ಎಂದು ಅರ್ಜಿ ಸಲ್ಲಿಸಿದ್ದಾರೆ. ಜೊತೆಗೆ, ಕಲ್ಯಾಣ ವಿರುದ್ಧ ಅಶ್ವಿನಿ ಮಾಳಮಾರುತಿ ಠಾಣೆಗೆ ದೂರು ಸಹ ನೀಡಿದ್ರು. ಜೂನ್ 26ರಂದು ದೂರು ನೀಡಿದ್ರೂ ಈ ಕುರಿತು ಪೊಲೀಸರು ವಿಚಾರಣೆ ನಡೆಸಿಲ್ಲ. ಆದ್ರೆ ಕೆ‌.ಕಲ್ಯಾಣ ನೀಡಿದ್ದ ದೂರನ್ನು ಸ್ವೀಕರಿಸಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಈಗ ಪೊಲೀಸರು ವಶಕ್ಕೆ ಪಡೆದಿರುವ ಶಿವಾನಂದ ಅಶ್ವಿನಿಯವರ ಸೋದರ ಸಂಬಂಧಿ ಎಂದು ಅಶ್ವಿನಿ ಪರ ವಕೀಲ ಸತೀಶ್ ದಳವಾಯಿ ಹೇಳಿದ್ದಾರೆ. ಪ್ರೇಮಕವಿ K ಕಲ್ಯಾಣ್​ ದಾಂಪತ್ಯದಲ್ಲಿ ಬಿರುಕು, ಪೊಲೀಸ್ ಠಾಣೆ ಮೆಟ್ಟಿಲೇರಿದ ದಂಪತಿ ಆಸ್ತಿಗೋಸ್ಕರ K ಕಲ್ಯಾಣ್ ನನ್ನನ್ನು ಮದುವೆ ಆಗಿದ್ದಾರೆ -ಪ್ರೇಮಕವಿ ವಿರುದ್ಧ ಪತ್ನಿ ಪ್ರತಿದೂರು

Published On - 7:01 pm, Sat, 3 October 20

Follow Us
KUSHAL V
KUSHAL V