ಹಿರಿಯ ರಾಜಕಾರಣಿ, ಮಾಜಿ ಶಾಸಕ ಕೆ ಮಲ್ಲಪ್ಪ ನಿಧನ

ದಾವಣಗೆರೆ: ಹಿರಿಯ ರಾಜಕಾರಣಿ ಹಾಗೂ ಮಾಜಿ ಶಾಸಕ ಕೆ.ಮಲ್ಲಪ್ಪ (92) ನಿಧನರಾಗಿದ್ದಾರೆ. ಕೆಲದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಇವರು ಇಂದು ಬೆಳಿಗ್ಗೆ ದಾವಣಗೆರೆ ನಗರದ ಆಂಜನೇಯ ಬಡಾವಣೆಯ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಕೆ.ಮಲ್ಲಪ್ಪನವರು ಜಿಲ್ಲೆಯ ಮಾಯಕೊಂಡ ಹಾಗೂ ಹರಿಹರ ಕ್ಷೇತ್ರದಿಂದ ಎರಡು ಸಲ ಶಾಸಕ ಹಾಗೂ ಒಮ್ಮೆ ವಿಧಾನ ಪರಿಷತ್ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ. ಕುಸ್ತಿ ಜೀರ್ಣೋದ್ಧಾರಕ ಸಂಘದ ಅಧ್ಯಕ್ಷರಾಗಿ ಹೆಸರು ಮಾಡಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ ಆಪ್ತರಾಗಿದ್ದ ಕೆ.ಮಲ್ಲಪ್ಪ ಅಹಿಂದಾ ಸಂಘಟನೆಯ ಪ್ರಮುಖ ರೂವಾರಿ. ಇವರು ಇಬ್ಬರು […]

ಹಿರಿಯ ರಾಜಕಾರಣಿ, ಮಾಜಿ ಶಾಸಕ ಕೆ ಮಲ್ಲಪ್ಪ ನಿಧನ
ಆಯೇಷಾ ಬಾನು

Updated on: Oct 12, 2020 | 10:01 AM

ದಾವಣಗೆರೆ: ಹಿರಿಯ ರಾಜಕಾರಣಿ ಹಾಗೂ ಮಾಜಿ ಶಾಸಕ ಕೆ.ಮಲ್ಲಪ್ಪ (92) ನಿಧನರಾಗಿದ್ದಾರೆ. ಕೆಲದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಇವರು ಇಂದು ಬೆಳಿಗ್ಗೆ ದಾವಣಗೆರೆ ನಗರದ ಆಂಜನೇಯ ಬಡಾವಣೆಯ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.

ಕೆ.ಮಲ್ಲಪ್ಪನವರು ಜಿಲ್ಲೆಯ ಮಾಯಕೊಂಡ ಹಾಗೂ ಹರಿಹರ ಕ್ಷೇತ್ರದಿಂದ ಎರಡು ಸಲ ಶಾಸಕ ಹಾಗೂ ಒಮ್ಮೆ ವಿಧಾನ ಪರಿಷತ್ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ. ಕುಸ್ತಿ ಜೀರ್ಣೋದ್ಧಾರಕ ಸಂಘದ ಅಧ್ಯಕ್ಷರಾಗಿ ಹೆಸರು ಮಾಡಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ ಆಪ್ತರಾಗಿದ್ದ ಕೆ.ಮಲ್ಲಪ್ಪ ಅಹಿಂದಾ ಸಂಘಟನೆಯ ಪ್ರಮುಖ ರೂವಾರಿ. ಇವರು ಇಬ್ಬರು ಪುತ್ರರು ಹಾಗೂ ಅಪಾರ ಬಂಧುಗಳನ್ನ ಅಗಲಿದ್ದಾರೆ.

ಇದನ್ನೂ ಓದಿ: ಖ್ಯಾತ ಸಂಗೀತ ನಿರ್ದೇಶಕ ರಾಜನ್ ಇನ್ನಿಲ್ಲ..

Published On - 9:01 am, Mon, 12 October 20

ಆಯೇಷಾ ಬಾನು

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Loading...
Unable to load recommendations.
Follow Us