ಪಿಎಸ್ಐ ಪರೀಕ್ಷಾ ಕೇಂದ್ರದಲ್ಲಿ ಕರ್ತವ್ಯದಲ್ಲಿದ್ದ ಕಲಬುರಗಿ 11 ಪೊಲೀಸ್ ಸಿಬ್ಬಂದಿ ಅಮಾನತು!

ತನಿಖೆಯಲ್ಲಿ ಒಂದಲ್ಲ ಒಂದು ಹೊಸ ವಿಚಾರಗಳು ಬೆಳಕಿಗೆ ಬರುತ್ತಿದೆ. ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿ ಕಲಬುರಗಿ ನಗರದ ವಿವಿಧ ಠಾಣೆಗಳ 11 ಪೊಲೀಸ್ (Police) ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ.

ಪಿಎಸ್ಐ ಪರೀಕ್ಷಾ ಕೇಂದ್ರದಲ್ಲಿ ಕರ್ತವ್ಯದಲ್ಲಿದ್ದ ಕಲಬುರಗಿ 11 ಪೊಲೀಸ್ ಸಿಬ್ಬಂದಿ ಅಮಾನತು!
ಸಾಂದರ್ಭಿಕ ಚಿತ್ರ
Follow us
| Updated By: sandhya thejappa

Updated on:May 07, 2022 | 12:21 PM

ಕಲಬುರಗಿ: 545 ಪಿಎಸ್ಐ ಹುದ್ದೆಗಳ (PSI Recruitment) ನೇಮಕಾತಿಯಲ್ಲಿ ನಡೆದ ಅಕ್ರಮ ಈಗಾಗಲೇ ಬಯಲಾಗಿದೆ. ಸಿಐಡಿ ಅಧಿಕಾರಿಗಳು ಬೇರೆ ಬೇರೆ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದಾರೆ. ತನಿಖೆಯಲ್ಲಿ ಒಂದಲ್ಲ ಒಂದು ಹೊಸ ವಿಚಾರಗಳು ಬೆಳಕಿಗೆ ಬರುತ್ತಿದೆ. ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿ ಕಲಬುರಗಿ ನಗರದ ವಿವಿಧ ಠಾಣೆಗಳ 11 ಪೊಲೀಸ್ (Police) ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ. ಸ್ಟೇಷನ್ ಬಜಾರ್ ಠಾಣೆಯ ಮೂವರು, ಮಹಿಳಾ ಠಾಣೆಯ 8 ಸಿಬ್ಬಂದಿ ಅಮಾನತುಗೊಂಡಿದ್ದಾರೆ. ಮಧ್ಯಾಹ್ನದ ಹೊತ್ತಿಗೆ ಅಮಾನತ್ತು ಆದೇಶ ಹೊರಬೀಳುವ ಸಾಧ್ಯತೆಯಿದೆ. ಅಮಾನತುಗೊಂಡಿರುವ ಪೊಲೀಸ್ ಸಿಬ್ಬಂದಿ ಪಿಎಸ್ಐ ಪರೀಕ್ಷಾ ಕೇಂದ್ರದಲ್ಲಿ ಕರ್ತವ್ಯದಲ್ಲಿದ್ದರು.

ಇನ್ನು ಅಕ್ರಮದಲ್ಲಿ ಭಾಗಿಯಾದ ಆರೋಪದ ಮೇಲೆ ಕೆಎಸ್​ಆರ್​ಪಿ ಅಸಿಸ್ಟೆಂಟ್ ಕಮಾಂಡೆಂಟ್ ವೈಜನಾಥ್​ನನ್ನ ಸಿಐಡಿ ಪೊಲೀಸರು ಬಂಧಿಸಿದ್ದಾರೆ. ವೈಜನಾಥ್ ಕಿಂಗ್​ಪಿನ್ ಆರ್​ಡಿ ಪಾಟೀಲ್ ಜೊತೆ ಸಂಪರ್ಕ ಹೊಂದಿದ್ದ.  ಸರಕಾರಿ ಪಾಲಿಟೆಕ್ನಿಕ್ ಕಾಲೇಜ್​ನ ಉಸ್ತುವಾರಿ ವಹಿಸಿದ್ದ.

ಸಿಐಡಿ ನೋಟಿಸ್​ಗೆ ಪ್ರಿಯಾಂಕ್ ಖರ್ಗೆ ಲಿಖಿತ ಉತ್ತರ: ಅಕ್ರಮದ ಬಗ್ಗೆ ಆಡಿಯೋ ಬಿಡುಗಡೆ ಮಾಡಿದ್ದ ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆಯವರಿಗೆ ಸಿಐಡಿ ನೋಟೀಸ್ ನೀಡಿತ್ತು. ಆದರೆ ಸಿಐಡಿ ನೋಟಿಸ್​ಗೆ ಪ್ರಿಯಾಂಕ್ ಖರ್ಗೆ ಲಿಖಿತ ಉತ್ತರ ನೀಡಿದ್ದಾರೆ. 3ನೇ ನೋಟಿಸ್‌ಗೂ ಲಿಖಿತ ಉತ್ತರ ನೀಡಿದ್ದಾರೆ. 6 ಪುಟಗಳ ಸುದೀರ್ಘ ಉತ್ತರ ಕೊಟ್ಟಿದ್ದಾರೆ. ನಿನ್ನೆ ಸಂಜೆ ಆಪ್ತ ಸಹಾಯಕನ ಮೂಲಕ ನೋಟಿಸ್‌ಗೆ ಉತ್ತರಿಸಿದ್ದಾರೆ.

ಆಡಿಯೋ ಬಿಡುಗಡೆ ಮಾಡಿದ ಬಳಿಕ ಹೆಚ್ಚಿನ ಮಾಹಿತಿ ನೀಡುವಂತೆ ಸಿಐಡಿ ನೋಟಿಸ್ ನೀಡಿತ್ತು. ಮೊದಲ ನೋಟಿಸ್​ಗೆ ಲಿಖಿತ ರೂಪದಲ್ಲಿ ಉತ್ತರ ನೀಡಿದ್ದರು. 2ನೇ ನೋಟಿಸ್ ಸ್ವೀಕರಿಸದೆ ವಾಪಸ್ ಕಳುಹಿಸಿದ್ದರು. ಖುದ್ದು ಹಾಜರಾಗುವಂತೆ ಸಿಐಡಿ 3ನೇ ನೋಟಿಸ್ ನೀಡಿತ್ತು. ಆದರೆ ಶಾಸಕರು ಹಾಜರಾಗದೆ ಲಿಖಿತ ಉತ್ತರ ಕೊಟ್ಟಿದ್ದಾರೆ.

ಈ ಬಗ್ಗೆ ಮಾಧ್ಯಮದೊಂದಿಗೆ ಮಾತನಾಡಿದ ಪ್ರಿಯಾಂಕ್ ಖರ್ಗೆ, ಬಿಜೆಪಿಯವರು ಸೂಕ್ತ ರೀತಿಯಲ್ಲಿ ತನಿಖೆ ನಡೆಸಬೇಕು. ಸರ್ಕಾರದಲ್ಲಿ‌ ದುಡ್ಡು ಎಲ್ಲಿ ಹೋಗ್ತಿದೆ ಎಂದು ಬಾಯಿ ಬಿಡುತ್ತಿಲ್ಲ. ಇವರೆಗೂ ಅರೆಸ್ಟ್ ಮಾಡಿರೋದು 20 ಜನರನ್ನ ಮಾತ್ರ. ಉಳಿದವರು ಎಲ್ಲಿ ಹೋಗಿದ್ದಾರೆ. ಸಿಐಡಿ ನೋಟಿಸ್​ಗೆ ಲಿಖಿತ ರೂಪದಲ್ಲಿ ದಾಖಲೆ ಕೊಟ್ಟಿದ್ದೀನಿ. ಇದು ಅರ್ಥ ಆಗಲಿಲ್ಲ ಅಂದರೆ ಗೃಹ ಸಚಿವರಾಗಲು ನಾಲಾಯಕ್. ಕರ್ನಾಟಕ ಪೊಲೀಸ್ ಮುಂಚೆ ಮಾದರಿಯಾಗಿತ್ತು ಎಂದು ಹೇಳಿದ್ದರು. ಈ ಅಸಮರ್ಥರಾಗಿ ಈ ಹೇಳಿಕೆ ಕೊಟ್ರಾ? ಎಂದು ಪ್ರಶ್ನಿಸಿದ್ದಾರೆ.

ರಾಜಕೀಯ ನಾಯಕರ ಜೊತೆ ಸಂಪರ್ಕದಲ್ಲಿದ್ದ ಕಿಂಗ್​ಪಿನ್ ರುದ್ರಗೌಡ ಪಾಟೀಲ್: ಕಿಂಗ್​ಪಿನ್ ರುದ್ರಗೌಡ ಪಾಟೀಲ್ ಅನೇಕ ಜನಪ್ರತಿನಿಧಿಗಳು, ರಾಜಕೀಯ ನಾಯಕರ ಜೊತೆ ಸಂಪರ್ಕದಲ್ಲಿದ್ದ. ಕಲಬುರಗಿ ಜಿಲ್ಲೆಯ ಅನೇಕ ಜವಪ್ರತಿನಿಧಿಗಳ‌ ಜೊತೆ ಹಣಕಾಸು ವ್ಯವಹಾರ ಕೂಡಾ ಹೊಂದಿದ್ದಾನೆ. ಈ ಅಕ್ರಮ ಪ್ರಕರಣ ಕೆಲ ಜನಪ್ರತಿನಿಧಿಗಳ ಕೊರಳಿಗೂ‌ ಸುತ್ತಿಕೊಳ್ಳುವ ಸಾಧ್ಯತೆಯಿದೆ. ಸಿಐಡಿ ಅಧಿಕಾರಿಗಳು ಅಕ್ರಮದ ಬಗ್ಗೆ ಇಂಚಿಂಚು ಮಾಹಿತಿ ಸಂಗ್ರಹಿಸುತಿದ್ದಾರೆ. ರಾಜಕಾರಣಿಗಳ ಸಂಬಂಧ ಕೇವಲ ರಾಜಕೀಯವಾಗಿ ಮಾತ್ರ ಇದೆಯಾ? ಅಥವಾ ಅಕ್ರಮದಲ್ಲಿ ಅವರ‌ ಕೈವಾಡವಿದೆಯಾ? ಎನ್ನುವ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ.

ಇದನ್ನೂ ಓದಿ

ಯತ್ನಾಳ್ ವಿರುದ್ಧ ಶಿಸ್ತು ಕ್ರಮಕ್ಕೆ ಬಿಜೆಪಿ ರಾಜ್ಯ ಸಮಿತಿ ಶಿಫಾರಸು; ಕೇಂದ್ರ ಶಿಸ್ತು ಸಮಿತಿಗೆ ವರದಿ ರವಾನೆ

Mother’s Day 2022: ಅಮ್ಮನಿಗೆ ಗಿಫ್ಟ್​ ಕೊಡ್ಬೇಕಾ? ಇಲ್ಲಿವೆ ಐಡಿಯಾಗಳು

Published On - 11:08 am, Sat, 7 May 22

ತಾಜಾ ಸುದ್ದಿ
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ