ಕಲಬುರಗಿ: 545 ಪಿಎಸ್ಐ ಹುದ್ದೆಗಳ (PSI Recruitment) ನೇಮಕಾತಿಯಲ್ಲಿ ನಡೆದ ಅಕ್ರಮ ಈಗಾಗಲೇ ಬಯಲಾಗಿದೆ. ಸಿಐಡಿ ಅಧಿಕಾರಿಗಳು ಬೇರೆ ಬೇರೆ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದಾರೆ. ತನಿಖೆಯಲ್ಲಿ ಒಂದಲ್ಲ ಒಂದು ಹೊಸ ವಿಚಾರಗಳು ಬೆಳಕಿಗೆ ಬರುತ್ತಿದೆ. ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿ ಕಲಬುರಗಿ ನಗರದ ವಿವಿಧ ಠಾಣೆಗಳ 11 ಪೊಲೀಸ್ (Police) ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ. ಸ್ಟೇಷನ್ ಬಜಾರ್ ಠಾಣೆಯ ಮೂವರು, ಮಹಿಳಾ ಠಾಣೆಯ 8 ಸಿಬ್ಬಂದಿ ಅಮಾನತುಗೊಂಡಿದ್ದಾರೆ. ಮಧ್ಯಾಹ್ನದ ಹೊತ್ತಿಗೆ ಅಮಾನತ್ತು ಆದೇಶ ಹೊರಬೀಳುವ ಸಾಧ್ಯತೆಯಿದೆ. ಅಮಾನತುಗೊಂಡಿರುವ ಪೊಲೀಸ್ ಸಿಬ್ಬಂದಿ ಪಿಎಸ್ಐ ಪರೀಕ್ಷಾ ಕೇಂದ್ರದಲ್ಲಿ ಕರ್ತವ್ಯದಲ್ಲಿದ್ದರು.
ಇನ್ನು ಅಕ್ರಮದಲ್ಲಿ ಭಾಗಿಯಾದ ಆರೋಪದ ಮೇಲೆ ಕೆಎಸ್ಆರ್ಪಿ ಅಸಿಸ್ಟೆಂಟ್ ಕಮಾಂಡೆಂಟ್ ವೈಜನಾಥ್ನನ್ನ ಸಿಐಡಿ ಪೊಲೀಸರು ಬಂಧಿಸಿದ್ದಾರೆ. ವೈಜನಾಥ್ ಕಿಂಗ್ಪಿನ್ ಆರ್ಡಿ ಪಾಟೀಲ್ ಜೊತೆ ಸಂಪರ್ಕ ಹೊಂದಿದ್ದ. ಸರಕಾರಿ ಪಾಲಿಟೆಕ್ನಿಕ್ ಕಾಲೇಜ್ನ ಉಸ್ತುವಾರಿ ವಹಿಸಿದ್ದ.
ಸಿಐಡಿ ನೋಟಿಸ್‌ಗೆ ಪ್ರಿಯಾಂಕ್ ಖರ್ಗೆ ಲಿಖಿತ ಉತ್ತರ:
ಅಕ್ರಮದ ಬಗ್ಗೆ ಆಡಿಯೋ ಬಿಡುಗಡೆ ಮಾಡಿದ್ದ ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆಯವರಿಗೆ ಸಿಐಡಿ ನೋಟೀಸ್ ನೀಡಿತ್ತು. ಆದರೆ ಸಿಐಡಿ ನೋಟಿಸ್‌ಗೆ ಪ್ರಿಯಾಂಕ್ ಖರ್ಗೆ ಲಿಖಿತ ಉತ್ತರ ನೀಡಿದ್ದಾರೆ. 3ನೇ ನೋಟಿಸ್‌ಗೂ ಲಿಖಿತ ಉತ್ತರ ನೀಡಿದ್ದಾರೆ. 6 ಪುಟಗಳ ಸುದೀರ್ಘ ಉತ್ತರ ಕೊಟ್ಟಿದ್ದಾರೆ. ನಿನ್ನೆ ಸಂಜೆ ಆಪ್ತ ಸಹಾಯಕನ ಮೂಲಕ ನೋಟಿಸ್‌ಗೆ ಉತ್ತರಿಸಿದ್ದಾರೆ.
ಆಡಿಯೋ ಬಿಡುಗಡೆ ಮಾಡಿದ ಬಳಿಕ ಹೆಚ್ಚಿನ ಮಾಹಿತಿ ನೀಡುವಂತೆ ಸಿಐಡಿ ನೋಟಿಸ್ ನೀಡಿತ್ತು. ಮೊದಲ ನೋಟಿಸ್‌ಗೆ ಲಿಖಿತ ರೂಪದಲ್ಲಿ ಉತ್ತರ ನೀಡಿದ್ದರು. 2ನೇ ನೋಟಿಸ್ ಸ್ವೀಕರಿಸದೆ ವಾಪಸ್ ಕಳುಹಿಸಿದ್ದರು. ಖುದ್ದು ಹಾಜರಾಗುವಂತೆ ಸಿಐಡಿ 3ನೇ ನೋಟಿಸ್ ನೀಡಿತ್ತು. ಆದರೆ ಶಾಸಕರು ಹಾಜರಾಗದೆ ಲಿಖಿತ ಉತ್ತರ ಕೊಟ್ಟಿದ್ದಾರೆ.
ಈ ಬಗ್ಗೆ ಮಾಧ್ಯಮದೊಂದಿಗೆ ಮಾತನಾಡಿದ ಪ್ರಿಯಾಂಕ್ ಖರ್ಗೆ, ಬಿಜೆಪಿಯವರು ಸೂಕ್ತ ರೀತಿಯಲ್ಲಿ ತನಿಖೆ ನಡೆಸಬೇಕು. ಸರ್ಕಾರದಲ್ಲಿ ದುಡ್ಡು ಎಲ್ಲಿ ಹೋಗ್ತಿದೆ ಎಂದು ಬಾಯಿ ಬಿಡುತ್ತಿಲ್ಲ. ಇವರೆಗೂ ಅರೆಸ್ಟ್ ಮಾಡಿರೋದು 20 ಜನರನ್ನ ಮಾತ್ರ. ಉಳಿದವರು ಎಲ್ಲಿ ಹೋಗಿದ್ದಾರೆ. ಸಿಐಡಿ ನೋಟಿಸ್‌ಗೆ ಲಿಖಿತ ರೂಪದಲ್ಲಿ ದಾಖಲೆ ಕೊಟ್ಟಿದ್ದೀನಿ. ಇದು ಅರ್ಥ ಆಗಲಿಲ್ಲ ಅಂದರೆ ಗೃಹ ಸಚಿವರಾಗಲು ನಾಲಾಯಕ್. ಕರ್ನಾಟಕ ಪೊಲೀಸ್ ಮುಂಚೆ ಮಾದರಿಯಾಗಿತ್ತು ಎಂದು ಹೇಳಿದ್ದರು. ಈ ಅಸಮರ್ಥರಾಗಿ ಈ ಹೇಳಿಕೆ ಕೊಟ್ರಾ? ಎಂದು ಪ್ರಶ್ನಿಸಿದ್ದಾರೆ.
ರಾಜಕೀಯ ನಾಯಕರ ಜೊತೆ ಸಂಪರ್ಕದಲ್ಲಿದ್ದ ಕಿಂಗ್ಪಿನ್ ರುದ್ರಗೌಡ ಪಾಟೀಲ್: ಕಿಂಗ್ಪಿನ್ ರುದ್ರಗೌಡ ಪಾಟೀಲ್ ಅನೇಕ ಜನಪ್ರತಿನಿಧಿಗಳು, ರಾಜಕೀಯ ನಾಯಕರ ಜೊತೆ ಸಂಪರ್ಕದಲ್ಲಿದ್ದ. ಕಲಬುರಗಿ ಜಿಲ್ಲೆಯ ಅನೇಕ ಜವಪ್ರತಿನಿಧಿಗಳ ಜೊತೆ ಹಣಕಾಸು ವ್ಯವಹಾರ ಕೂಡಾ ಹೊಂದಿದ್ದಾನೆ. ಈ ಅಕ್ರಮ ಪ್ರಕರಣ ಕೆಲ ಜನಪ್ರತಿನಿಧಿಗಳ ಕೊರಳಿಗೂ ಸುತ್ತಿಕೊಳ್ಳುವ ಸಾಧ್ಯತೆಯಿದೆ. ಸಿಐಡಿ ಅಧಿಕಾರಿಗಳು ಅಕ್ರಮದ ಬಗ್ಗೆ ಇಂಚಿಂಚು ಮಾಹಿತಿ ಸಂಗ್ರಹಿಸುತಿದ್ದಾರೆ. ರಾಜಕಾರಣಿಗಳ ಸಂಬಂಧ ಕೇವಲ ರಾಜಕೀಯವಾಗಿ ಮಾತ್ರ ಇದೆಯಾ? ಅಥವಾ ಅಕ್ರಮದಲ್ಲಿ ಅವರ ಕೈವಾಡವಿದೆಯಾ? ಎನ್ನುವ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ.
ಇದನ್ನೂ ಓದಿ
ಯತ್ನಾಳ್ ವಿರುದ್ಧ ಶಿಸ್ತು ಕ್ರಮಕ್ಕೆ ಬಿಜೆಪಿ ರಾಜ್ಯ ಸಮಿತಿ ಶಿಫಾರಸು; ಕೇಂದ್ರ ಶಿಸ್ತು ಸಮಿತಿಗೆ ವರದಿ ರವಾನೆ
Mother’s Day 2022: ಅಮ್ಮನಿಗೆ ಗಿಫ್ಟ್ ಕೊಡ್ಬೇಕಾ? ಇಲ್ಲಿವೆ ಐಡಿಯಾಗಳು
Published On - 11:08 am, Sat, 7 May 22