AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಬುರಗಿ ಡಿ.ಸಿ. ಯಶವಂತ ಗುರುಕಾರ್ ಜೋಳಿಗೆ ಹಿಡಿದರು! ಹಣ ಎತ್ತಲು ಅಲ್ಲಾ, ಗ್ರಾಮೀಣ ಭಾಗದ ಜನರ ಓದಿಗಾಗಿ!

IAS Yashwant Gurikar: ಕಲಬುರಗಿ ತಾಲೂಕಿನ ಭೀಮಳ್ಳಿ ಗ್ರಾಮದಲ್ಲಿ ಇಂದು ಜಿಲ್ಲಾಧಿಕಾರಿ ಯಶವಂತ ಗುರುಕಾರ್ ಗ್ರಾಮ ವಾಸ್ತವ್ಯ ಮಾಡಿದ್ದಾರೆ. ಮುಂಜಾನೆ ಭೀಮಳ್ಳಿ ಗ್ರಾಮಕ್ಕೆ ಆಗಮಿಸಿದ ಜಿಲ್ಲಾಧಿಕಾರಿ ಸೂಟು ಬೂಟು ಬಿಟ್ಟು, ಜಿಲ್ಲಾಧಿಕಾರಿ ಹಮ್ಮುಬಿಮ್ಮು ಪಕ್ಕಕ್ಕಿಟ್ಟು ಪಂಚೆ ತೊಟ್ಟು, ಟಾಂಗಾದಲ್ಲಿ ಗ್ರಾಮಕ್ಕೆ ಎಂಟ್ರಿ ಕೊಟ್ಟರು. ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಜೋಳಿಗೆ ಹಿಡಿದು ಸಂಚರಿಸಿದ್ದು ವಿಶೇಷವಾಗಿತ್ತು.

ಕಲಬುರಗಿ ಡಿ.ಸಿ. ಯಶವಂತ ಗುರುಕಾರ್ ಜೋಳಿಗೆ ಹಿಡಿದರು!  ಹಣ ಎತ್ತಲು ಅಲ್ಲಾ, ಗ್ರಾಮೀಣ ಭಾಗದ ಜನರ ಓದಿಗಾಗಿ!
ಕಲಬುರಗಿ ಜಿಲ್ಲಾಧಿಕಾರಿ ಯಶವಂತ ಜೋಳಿಗೆ ಹಿಡಿದರು! ಹಣ ಎತ್ತಲು ಅಲ್ಲಾ, ಗ್ರಾಮೀಣ ಭಾಗದ ಜನರ ಓದಿಗಾಗಿ!
Follow us
TV9 Web
| Updated By: ಸಾಧು ಶ್ರೀನಾಥ್​

Updated on:Mar 19, 2022 | 3:57 PM

ಕಲಬುರಗಿ: ಕಲಬುರಗಿ ಜಿಲ್ಲಾಧಿಕಾರಿ ಇದೀಗ ಜೋಳಿಗೆ ಹಿಡಿದು ಸುದ್ದಿಯಾಗಿದ್ದಾರೆ. ಅಷ್ಟಕ್ಕೂ ಜಿಲ್ಲಾಧಿಕಾರಿ ಜೋಳಿಗೆ ಹಿಡಿದಿದ್ದು ಹಣಕ್ಕಾಗಿ ಅಲ್ಲಾ! ಗ್ರಾಮೀಣ ಭಾಗದ ಜನರ ಓದಿಗೆ ಅನುಕೂಲವಾಗಲು ಪುಸ್ತಕಗಳಿಗಾಗಿ…!!! ರಾಜ್ಯದಲ್ಲಿ ಪ್ರತಿ ತಿಂಗಳು ಮೂರನೇ ಶನಿವಾರ ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ ಕಾರ್ಯಕ್ರಮವನ್ನು ಸರ್ಕಾರ ಪ್ರಾರಂಭಿಸಿದೆ. ಜಿಲ್ಲಾಧಿಕಾರಿ, ತಹಶಿಲ್ದಾರಗಳು ತಮ್ಮ ವ್ಯಾಪ್ತಿಯಲ್ಲಿ ಒಂದು ದಿನ ಒಂದು ಹಳ್ಳಿಯಲ್ಲಿ ಗ್ರಾಮ ವಾಸ್ತವ್ಯ ಮಾಡುತ್ತಾರೆ. ಅದರೆ ಕಲಬುರಗಿ ಜಿಲ್ಲಾಧಿಕಾರಿ ಯಶವಂತ ಗುರುಕಾರ್ ಮಾತ್ರ ಪ್ರತಿ ಗ್ರಾಮ ವಾಸ್ತವ್ಯದಲ್ಲಿ ಕೂಡಾ ತಮ್ಮ ನಡೆ ನುಡಿ ಆಚಾರಗಳಿಂದ ಜನರ ಮೆಚ್ಚುಗೆ ಪಡೆಯುತ್ತಿದ್ದಾರೆ. ಇಂದು ತಮ್ಮ ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ ಗ್ರಾಮವಾಸ್ತವ್ಯದಲ್ಲಿ ಜೋಳಿಗೆ ಹಿಡಿದು ಜನರಿಂದ ಪುಸ್ತಕಗಳನ್ನು (Book) ಬೇಡಿ ಪಡೆಯುವ ಮೂಲಕ ಹೊಸ ಸಂಪ್ರದಾಯಕ್ಕೆ ಚಾಲನೆ ನೀಡಿದ್ದಾರೆ (Kalaburagi District Deputy Commissioner Yashwant Gurikar).

ಕಲಬುರಗಿ ತಾಲೂಕಿನ ಭೀಮಳ್ಳಿ ಗ್ರಾಮದಲ್ಲಿ ಇಂದು ಜಿಲ್ಲಾಧಿಕಾರಿ ಯಶವಂತ ಗುರುಕಾರ್ ಗ್ರಾಮ ವಾಸ್ತವ್ಯ ಮಾಡಿದ್ದಾರೆ. ಗ್ರಾಮವಾಸ್ತವ್ಯ ಹಿನ್ನೆಲೆಯಲ್ಲಿ ಮುಂಜಾನೆ ಭೀಮಳ್ಳಿ ಗ್ರಾಮಕ್ಕೆ ಆಗಮಿಸಿದ ಜಿಲ್ಲಾಧಿಕಾರಿ ಸೂಟು ಬೂಟು ಬಿಟ್ಟು, ಜಿಲ್ಲಾಧಿಕಾರಿ ಹಮ್ಮುಬಿಮ್ಮು ಪಕ್ಕಕ್ಕಿಟ್ಟು ಪಂಚೆ ತೊಟ್ಟು, ಟಾಂಗಾದಲ್ಲಿ ಗ್ರಾಮಕ್ಕೆ ಎಂಟ್ರಿ ಕೊಟ್ಟರು. ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಜೋಳಿಗೆ ಹಿಡಿದು ಸಂಚರಿಸಿದ್ದು ವಿಶೇಷವಾಗಿತ್ತು. ಅಷ್ಟಕ್ಕೂ ಜಿಲ್ಲಾಧಿಕಾರಿ ಜೋಳಿಗೆ ಹಿಡಿದು ಗ್ರಾಮದಲ್ಲಿ ಸಂಚರಿಸಿದ್ದು ಪುಸ್ತಕಗಳಿಗಾಗಿ.

ನೀವು ಓದಿ ಮುಗಿಸಿರುವ ಪುಸ್ತಕಗಳು ಮನೆಯಲ್ಲಿ ಇದ್ರೆ ದಾನ ಮಾಡಿ: ಹೌದು ಭೀಮಳ್ಳಿ ಗ್ರಾಮದಲ್ಲಿ ಜೋಳಿಗೆ ಹಿಡಿದು ಗ್ರಾಮದಲ್ಲಿ ಅಡ್ಡಾಡಿದ ಜಿಲ್ಲಾಧಿಕಾರಿ ಯಶವಂತ್, ನಿಮ್ಮ ಮನೆಯಲ್ಲಿ ನೀವು ಓದಿ ಮುಗಿಸಿರುವ ಪುಸ್ತಕಗಳು ಇದ್ರೆ ಅವುಗಳನ್ನು ದಾನದ ರೂಪದಲ್ಲಿ ನೀಡಿ ಅಂತ ಜನರಲ್ಲಿ ಮನವಿ ಮಾಡಿದರು. ಜಿಲ್ಲಾಧಿಕಾರಿ ಮನವಿಗೆ ಸ್ಪಂಧಿಸಿದ ಗ್ರಾಮದ ಕೆಲವರು ತಮ್ಮಲ್ಲಿದ್ದ ಪುಸ್ತಕಗಳನ್ನು ದಾನ ಮಾಡಿದ್ರು. ಜನರಿಂದ ಸಂಗ್ರಹಿಸಿದ ಪುಸ್ತಕಗಳನ್ನು ಗ್ರಾಮದಲ್ಲಿನ ಗ್ರಂಥಾಲಯಕ್ಕೆ ಜಿಲ್ಲಾಧಿಕಾರಿ ಯಶವಂತ ಗುರುಕಾರ್ ನೀಡಿದರು.

ಗ್ರಾಮೀಣ ಭಾಗದ ಜನರು ಓದುವ ಹವ್ಯಾಸ ಬಳಸಿಕೊಳ್ಳಬೇಕು. ಗ್ರಾಮದಲ್ಲಿನ ಗ್ರಂಥಾಲಯದಲ್ಲಿರುವ ಪುಸ್ತಕಗಳನ್ನು ಓದಬೇಕು. ವಿದ್ಯಾರ್ಥಿಗಳು, ಯುವಕರು ದುಶ್ಚಟಗಳಿಗೆ ಬಲಿಯಾಗದೇ ಓದುವ ಗುಣ ಬೆಳಸಿಕೊಳ್ಳಬೇಕು ಅಂತ ಜಿಲ್ಲಾಧಿಕಾರಿ ಗ್ರಾಮದ ಜನರಲ್ಲಿ ಮನವಿ ಮಾಡಿದರು.

Published On - 2:32 pm, Sat, 19 March 22

ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ತಮಿಳು ಕನ್ನಡದ ತಾಯಿ ಭಾಷೆ ಅಲ್ಲ: ಕಮಲ್ ಹೇಳಿಕೆಗೆ ನಾಗತಿಹಳ್ಳಿ ವಿರೋಧ
ತಮಿಳು ಕನ್ನಡದ ತಾಯಿ ಭಾಷೆ ಅಲ್ಲ: ಕಮಲ್ ಹೇಳಿಕೆಗೆ ನಾಗತಿಹಳ್ಳಿ ವಿರೋಧ
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ
ಕನ್ನಡಿಗರು ಸಹನಶೀಲರು ಆದರೆ ಕಣಕಿದರೆ ಸುಮ್ಮನಿರಲ್ಲ: ನಾರಾಯಣಗೌಡ, ಕರವೇ
ಕನ್ನಡಿಗರು ಸಹನಶೀಲರು ಆದರೆ ಕಣಕಿದರೆ ಸುಮ್ಮನಿರಲ್ಲ: ನಾರಾಯಣಗೌಡ, ಕರವೇ