ಕೊಲೆ ಪ್ರಕರಣದಲ್ಲಿ 14 ವರ್ಷ ಜೈಲು ಶಿಕ್ಷೆ ಅನುಭವಿಸಿದಾತ ಈಗ ಡಾಕ್ಟರ್!

ಕಲಬುರಗಿ: ಕೊಲೆ ಪ್ರಕರಣದಲ್ಲಿ ಜೈಲುಪಾಲಾಗಿ 14 ವರ್ಷ ಶಿಕ್ಷೆ ಅನುಭವಿಸಿ ಸನ್ನಡತೆಯಿಂದ ಹೊರಬಂದಿದ್ದ ವ್ಯಕ್ತಿ ಈಗ ಡಾಕ್ಟರ್ ಆಗಿದ್ದಾರೆ. ಅಫಜಲಪುರ ತಾಲೂಕಿನ ಬೋಸಗಾ ಗ್ರಾಮದ ಸುಭಾಷ್ ಪಾಟೀಲ್​, ಜೈಲಿನಿಂದ ಹೊರಬಂದ ನಂತರ ತಾನು ಅರ್ಧಕ್ಕೆ ನಿಲ್ಲಿಸಿದ್ದ ಎಂಬಿಬಿಎಸ್​ನಲ್ಲಿ ಪದವಿ ಪೂರೈಸಿ ಅಂದು ಕಂಡಿದ್ದ ಕನಸನ್ನು ಇದೀಗ ನನಸು ಮಾಡಿಕೊಂಡಿದ್ದಾರೆ. 2002ರಲ್ಲಿ ಕೊಲೆ ಪ್ರಕರಣದಲ್ಲಿ ಸುಭಾಷ್ ಪಾಟೀಲ್ ಜೈಲು ಪಾಲಾಗಿದ್ದ. ಆಗ ಆತ ಎಂಬಿಬಿಎಸ್ 2ನೇ ವರ್ಷದಲ್ಲಿ ಓದುತ್ತಿದ್ದ. ಜೈಲು ಪಾಲಾದ್ದರಿಂದ ಎಂಬಿಬಿಎಸ್ ಕೋರ್ಸ್​ ಅನ್ನು ಅರ್ಧಕ್ಕೆ ಮೊಟಕುಗೊಳಿಸಿದ್ದ. […]

ಕೊಲೆ ಪ್ರಕರಣದಲ್ಲಿ 14 ವರ್ಷ ಜೈಲು ಶಿಕ್ಷೆ ಅನುಭವಿಸಿದಾತ ಈಗ ಡಾಕ್ಟರ್!
Follow us
ಸಾಧು ಶ್ರೀನಾಥ್​
|

Updated on: Feb 15, 2020 | 11:46 AM

ಕಲಬುರಗಿ: ಕೊಲೆ ಪ್ರಕರಣದಲ್ಲಿ ಜೈಲುಪಾಲಾಗಿ 14 ವರ್ಷ ಶಿಕ್ಷೆ ಅನುಭವಿಸಿ ಸನ್ನಡತೆಯಿಂದ ಹೊರಬಂದಿದ್ದ ವ್ಯಕ್ತಿ ಈಗ ಡಾಕ್ಟರ್ ಆಗಿದ್ದಾರೆ. ಅಫಜಲಪುರ ತಾಲೂಕಿನ ಬೋಸಗಾ ಗ್ರಾಮದ ಸುಭಾಷ್ ಪಾಟೀಲ್​, ಜೈಲಿನಿಂದ ಹೊರಬಂದ ನಂತರ ತಾನು ಅರ್ಧಕ್ಕೆ ನಿಲ್ಲಿಸಿದ್ದ ಎಂಬಿಬಿಎಸ್​ನಲ್ಲಿ ಪದವಿ ಪೂರೈಸಿ ಅಂದು ಕಂಡಿದ್ದ ಕನಸನ್ನು ಇದೀಗ ನನಸು ಮಾಡಿಕೊಂಡಿದ್ದಾರೆ.

2002ರಲ್ಲಿ ಕೊಲೆ ಪ್ರಕರಣದಲ್ಲಿ ಸುಭಾಷ್ ಪಾಟೀಲ್ ಜೈಲು ಪಾಲಾಗಿದ್ದ. ಆಗ ಆತ ಎಂಬಿಬಿಎಸ್ 2ನೇ ವರ್ಷದಲ್ಲಿ ಓದುತ್ತಿದ್ದ. ಜೈಲು ಪಾಲಾದ್ದರಿಂದ ಎಂಬಿಬಿಎಸ್ ಕೋರ್ಸ್​ ಅನ್ನು ಅರ್ಧಕ್ಕೆ ಮೊಟಕುಗೊಳಿಸಿದ್ದ. 2016ರಲ್ಲಿ ಸನ್ನಡತೆ ಆಧಾರದ ಮೇಲೆ ಜೈಲಿನಿಂದ ಹೊರಬಂದ ಸುಭಾಷ್ ಪಾಟೀಲ್, 14 ವರ್ಷದ ಹಿಂದೆ ಅರ್ಧಕ್ಕೆ ನಿಲ್ಲಿಸಿದ್ದ ಎಂಬಿಬಿಎಸ್ ಕೋರ್ಸ್​ಗೆ ಸೇರ್ಪಡೆಯಾಗಿದ್ದಾರೆ.

ಇಂದು ಸಂಜೆ ಪದವಿ ಪಡೆಯಲಿರುವ ಸುಭಾಷ್: ಕಲಬುರಗಿ ನಗರದಲ್ಲಿರುವ MRMC ಮೆಡಿಕಲ್ ಕಾಲೇಜಿಗೆ ಸೇರಿದ ಸುಭಾಷ್, 3 ವರ್ಷ ನಿರಂತರವಾಗಿ ಅಧ್ಯಯನ ಮಾಡಿ ಇದೀಗ ಎಂಬಿಬಿಎಸ್ ಕೋರ್ಸ್ ಕಂಪ್ಲೀಟ್ ಮಾಡಿದ್ದಾರೆ. 2019ರಲ್ಲಿ ಎಂಬಿಬಿಎಸ್ ಪೂರ್ಣಗೊಳಿಸಿ, 1 ವರ್ಷ ಇಂಟರ್ನ್‌ಶಿಪ್ ಸಹ ಪೂರ್ಣಗೊಳಿಸಿದ್ದಾರೆ. ಕೋರ್ಸ್​ ಕಂಪ್ಲೀಟ್ ಆದ ಕಾರಣ ಇಂದು ಸಂಜೆ ಕಾಲೇಜಿನಲ್ಲಿ ಪದವಿ ಪಡೆಯಲಿದ್ದಾರೆ.

ಡಾ.ಸುಭಾಷ್ ಪಾಟೀಲ್, ಮುಂದೆ ತನ್ನದೆ ಆದ ಕ್ಲಿನಿಕ್ ಪ್ರಾರಂಭಿಸಿ, ಕೈದಿಗಳ ಕುಟುಂಬದವರಿಗೆ ಹಾಗೂ ಯೋಧರ ಕುಟುಂಬದವರಿಗೆ ಉಚಿತವಾಗಿ ಆರೋಗ್ಯ ಸೇವೆಯನ್ನು ನೀಡುವ ಮಹದಾಸೆ ಹೊಂದಿದ್ದಾರೆ.

Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ