ಯಾರಿದು ಬುಜ್ಜಿ? ಪ್ರಭಾಸ್​ರ ನಂಬಿಕಸ್ತ ಗೆಳೆಯ, ಮೇ 22ಕ್ಕೆ ರಿವೀಲ್

ಪ್ರಭಾಸ್ ನಟನೆಯ ‘ಕಲ್ಕಿ’ ಸಿನಿಮಾನಲ್ಲಿ ‘ಬುಜ್ಜಿ’ ಎಂಬ ಐದನೇ ಸೂಪರ್ ಸ್ಟಾರ್ ಇದ್ದಾರಂತೆ. ಈ ಬುಜ್ಜಿ ಪ್ರಭಾಸ್​ರಿಗೆ ಅತ್ಯಂತ ಆತ್ಮೀಯ ಗೆಳೆಯನಂತೆ. ಬುಜ್ಜಿ ಯಾರು ಎಂದು ಮೇ 22ಕ್ಕೆ ತಿಳಿಯಲಿದೆ.

ಯಾರಿದು ಬುಜ್ಜಿ? ಪ್ರಭಾಸ್​ರ ನಂಬಿಕಸ್ತ ಗೆಳೆಯ, ಮೇ 22ಕ್ಕೆ ರಿವೀಲ್
Follow us
ಮಂಜುನಾಥ ಸಿ.
|

Updated on: May 19, 2024 | 10:01 PM

ಪ್ರಭಾಸ್‍ (Prabhas) ಸೇರಿದಂತೆ ಹಲವು ಸ್ಟಾರ್ ನಟ, ನಟಿಯರು ನಟಿಸಿರುವ ‘ಕಲ್ಕಿ 2898 AD’ ಸಿನಿಮಾ ಬಿಡುಗಡೆ ಆಗಲು ಇನ್ನೂ ಎರಡು ತಿಂಗಳಿದೆ. ಸಿನಿಮಾದ ಬಗ್ಗೆ ಪ್ರೇಕ್ಷಕರಲ್ಲಿ ಭಾರಿ ನಿರೀಕ್ಷೆ ಇದೆ. ಈ ಸಿನಿಮಾನಲ್ಲಿ ಹಲವು ಸೂಪರ್ ಸ್ಟಾರ್​ಗಳಿದ್ದಾರೆ. ಪ್ರಭಾಸ್, ದೀಪಿಕಾ ಪಡುಕೋಣೆ, ಕಮಲ್ ಹಾಸನ್, ಅಮಿತಾಬ್ ಬಚ್ಚನ್​ ಅವರುಗಳು ಈ ಸಿನಿಮಾದಲ್ಲಿದ್ದಾರೆ. ಇದೀಗ ಈ ಸಿನಿಮಾದ ಐದನೇ ಸೂಪರ್‍ ಸ್ಟಾರ್ ಅನ್ನು ಇದೇ ಮೇ 22ರಂದು ಅನಾವರಣಗೊಳಿಸುವುದಾಗಿ ಚಿತ್ರತಂಡ ಘೋಷಿಸಿದೆ.

ಈ ಐದನೇ ಸೂಪರ್‍ ಸ್ಟಾರ್‍ ಹೆಸರು ಬುಜ್ಜಿ ಮತ್ತು ಈತ ‘ಕಲ್ಕಿ’ ಸಿನಿಮಾದ ನಾಯಕ ಭೈರವನ ಅತ್ಯಂತ ನಂಬಿಕಸ್ಥ ಗೆಳೆಯನಂತೆ. ಈ ಗೆಳೆಯನ ಕುರಿತು ವೈಜಯಂತಿ ನೆಟ್‍ವರ್ಕ್ ಯೂಟ್ಯೂಬ್‍ನ ಚಾನಲ್‍ನಲ್ಲಿ ಹೊಸ ವೀಡಿಯೋ ಬಿಡುಗಡೆ ಮಾಡಲಾಗಿದೆ. ‘From Skratch: Building A Superstar’ ಹೆಸರಿನ ಈ ವೀಡಿಯೋದಲ್ಲಿ ಬುಜ್ಜಿಯ ಕುರಿತು ಪರಿಚಯ ಮಾಡಿಕೊಡಲಾಗಿದೆ. 2020ರ ಜೂನ್‍ನಲ್ಲಿ ಅಂಥದ್ದೊಂದು ಪಾತ್ರದ ಸೃಷ್ಠಿ ಹೇಗಾಯಿತು ಎಂದು ಪ್ರಾರಂಭವಾಗುವುದರಿಂದ, ಅಂತಿಮವಾಗಿ ಅದು ಹೇಗೆ ರೂಪುಗೊಂಡಿತು ಎಂಬುದನ್ನು ಈ ವೀಡಿಯೋದಲ್ಲಿ ತೋರಿಸಲಾಗಿದೆ. ಭೈರವನ ಅಚ್ಚುಮೆಚ್ಚಿನ ಗೆಳೆಯನ ಕುರಿತು ಸಾಕಷ್ಟು ಬಿಲ್ಡಪ್‍ ನೀಡಲಾಗಿದ್ದು, ಈ ಐದನೇ ಸೂಪರ್‍ ಸ್ಟಾರ್‍ ಯಾರಿರಬಹುದು ಎಂಬ ಕುತೂಹಲ ಪ್ರೇಕ್ಷಕರಲ್ಲಿ ಮನೆಮಾಡಿದೆ. ಬುಜ್ಜಿ ಯಾರು ಎಂಬ ಪ್ರಶ್ನೆಗೆ, ಎರಡು ನಿಮಿಷ 22 ಸೆಕೆಂಡ್‍ನ ಈ ವೀಡಿಯೋದಲ್ಲಿ ಚಿತ್ರಕ್ಕೆ ದುಡಿದ ಹಲವು ತಂತ್ರಜ್ಞರು ಉತ್ತರ ನೀಡುವ ಪ್ರಯತ್ನ ಮಾಡಿದ್ದಾರೆ. ಇಷ್ಟಕ್ಕೂ ಬುಜ್ಜಿ ಯಾರು? ಉತ್ತರಕ್ಕಾಗಿ ಮೇ 22ರವರೆಗೂ ಕಾಯಬೇಕು.

ಇದನ್ನೂ ಓದಿ:ಸಿನಿಮಾ ಪ್ರಚಾರಕ್ಕೆ ಮದುವೆ ವಿಚಾರ ಎಳೆತಂದ ಪ್ರಭಾಸ್​? ಸ್ಟೇಟಸ್​ ಅರ್ಥ ಏನು?

ಕೆಲವು ದಿನಗಳ ಹಿಂದಷ್ಟೇ ಅಮಿತಾಭ್ ಬಚ್ಚನ್‍ ಅವರ ಪಾತ್ರದ ಲುಕ್ ಅನಾವರಣ ಮಾಡಲಾಗಿತ್ತು. ಅಶ್ವತ್ಥಾಮನಾಗಿ ‘ಕಲ್ಕಿ’ ಸಿನಿಮಾನಲ್ಲಿ ಅಮಿತಾಭ್‍ ನಟಿಸಿದ್ದು, ಅವರ ಪಾತ್ರ ಹೇಗಿರಬಹುದು ಎಂಬ ಕುತೂಹಲ ಪ್ರೇಕ್ಷಕರಿಗಿದೆ. ಅವರ ಪಾತ್ರ ಪರಿಚಯಿಸುವ ಟೀಸರ್‍ ತೆಲುಗು, ತಮಿಳು, ಕನ್ನಡ, ಹಿಂದಿ, ಮಲಯಾಳಂ ಮತ್ತು ಇಂಗ್ಲೀಷ್‍ ಭಾಷೆಗಳಲ್ಲಿ ಏಕಕಾಲಕ್ಕೆ ಬಿಡುಗಡೆಯಾಗಿದೆ.

ಈ ವರ್ಷದ ಅತೀ ನಿರೀಕ್ಷಿತ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ‘ಕಲ್ಕಿ 2898 AD’ ಚಿತ್ರದಲ್ಲಿ ಅಮಿತಾಭ್‍ ಬಚ್ಚನ್, ಕಮಲ್ ಹಾಸನ್, ಪ್ರಭಾಸ್,‍ ದೀಪಿಕಾ ಪಡುಕೋಣೆ, ದಿಶಾ ಪಠಾಣಿ ಮುಂತಾದವರು ನಟಿಸಿದ್ದಾರೆ. ವೈಜಯಂತಿ ಮೂವೀಸ್ ಬ್ಯಾನರ್​ ಅಡಿ ಅಶ್ವಿನಿ ದತ್‍ ನಿರ್ಮಿಸಿರುವ ಈ ಚಿತ್ರವನ್ನು ನಾಗ್‍ ಅಶ್ವಿನ್‍ ನಿರ್ದೇಶನ ಮಾಡಿದ್ದಾರೆ. ‘ಕಲ್ಕಿ 2898 AD’ ಚಿತ್ರವು ಜಗತ್ತಿನಾದ್ಯಂತ ಜೂನ್‍ 27ರಂದು ಬಿಡುಗಡೆ ಆಗಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ