ಕೊರೊನಾ ಸಂಕಷ್ಟದ ನಡುವೆಯೂ.. ಕುಂದಾನಗರಿಯಲ್ಲಿ ಅದ್ದೂರಿ ಕನ್ನಡ ರಾಜ್ಯೋತ್ಸವ
ಬೆಳಗಾವಿ: ಕೊರೊನಾ ಸಂಕಷ್ಟದ ನಡುವೆಯೂ ಕುಂದಾನಗರಿಯಲ್ಲಿ ಅದ್ದೂರಿ 65ನೇ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು. ನಗರದ ಪ್ರಮುಖ ಬೀದಿಗಳಲ್ಲಿ ಕನ್ನಡದ ಬಾವುಟ ರಾರಾಜಿಸುತ್ತಿರುವ ದೃಶ್ಯಗಳು ಕಂಡುಬಂದವು. ನಗರದ ಚೆನ್ನಮ್ಮ ವೃತ್ತ, ಡಿ.ಸಿ. ಕಚೇರಿ, ಕಾಲೇಜು ರೋಡ್ ಮತ್ತು ಕ್ಲಬ್ ರಸ್ತೆ ಸೇರಿದಂತೆ ಎಲ್ಲೆಡೆ ವಾತಾವರಣ ಕನ್ನಡಮಯವಾಗಿತ್ತು. ರಾಜ್ಯೋತ್ಸವದ ಸಂಭ್ರಮಾಚರಣೆ ಅಂಗವಾಗಿ ನಗರದ ಸಿಪಿಎಡ್ ಮೈದಾನದಲ್ಲಿ ಜಿಲ್ಲಾಡಳಿತದಿಂದ ಕಾರ್ಯಕ್ರಮ ಏರ್ಪಾಟು ಮಾಡಲಾಯಿತು. ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ಭುವನೇಶ್ವರಿ ದೇವಿಗೆ ಪೂಜೆ ಸಲ್ಲಿಸಿದರು. ನಂತರ ಧ್ವಜಾರೋಹಣ ನೆರವೇರಿಸಿದ ಸಚಿವರು […]

ಬೆಳಗಾವಿ: ಕೊರೊನಾ ಸಂಕಷ್ಟದ ನಡುವೆಯೂ ಕುಂದಾನಗರಿಯಲ್ಲಿ ಅದ್ದೂರಿ 65ನೇ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು. ನಗರದ ಪ್ರಮುಖ ಬೀದಿಗಳಲ್ಲಿ ಕನ್ನಡದ ಬಾವುಟ ರಾರಾಜಿಸುತ್ತಿರುವ ದೃಶ್ಯಗಳು ಕಂಡುಬಂದವು. ನಗರದ ಚೆನ್ನಮ್ಮ ವೃತ್ತ, ಡಿ.ಸಿ. ಕಚೇರಿ, ಕಾಲೇಜು ರೋಡ್ ಮತ್ತು ಕ್ಲಬ್ ರಸ್ತೆ ಸೇರಿದಂತೆ ಎಲ್ಲೆಡೆ ವಾತಾವರಣ ಕನ್ನಡಮಯವಾಗಿತ್ತು.
ರಾಜ್ಯೋತ್ಸವದ ಸಂಭ್ರಮಾಚರಣೆ ಅಂಗವಾಗಿ ನಗರದ ಸಿಪಿಎಡ್ ಮೈದಾನದಲ್ಲಿ ಜಿಲ್ಲಾಡಳಿತದಿಂದ ಕಾರ್ಯಕ್ರಮ ಏರ್ಪಾಟು ಮಾಡಲಾಯಿತು. ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ಭುವನೇಶ್ವರಿ ದೇವಿಗೆ ಪೂಜೆ ಸಲ್ಲಿಸಿದರು. ನಂತರ ಧ್ವಜಾರೋಹಣ ನೆರವೇರಿಸಿದ ಸಚಿವರು ವಿವಿಧ ಪಥಸಂಚಲಗಳ ಪರಿವೀಕ್ಷಣೆ ಸಹ ಮಾಡಿದರು.




