Award : ಹಿರಿಯ ಲೇಖಕ ಡಾ. ಗುರುಲಿಂಗ ಕಾಪಸೆ ಅವರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿಯ ಅನುವಾದ ಪ್ರಶಸ್ತಿ

Kendra Sahitya Akademi : ಡಾ. ಗುರುಲಿಂಗ ಕಾಪಸೆ ಅವರು ಮರಾಠಿಯಿಂದ ಕನ್ನಡಕ್ಕೆ ಅನುವಾದಿಸಿದ ವಿ. ಸ. ಖಾಂಡೇಕರ್ ಅವರ 'ಒಂದು ಪುಟದ ಕಥೆ' ಯು ಈ ಸಲದ ಕೇಂದ್ರ ಸಾಹಿತ್ಯ ಅಕಾಡೆಮಿಯ ಅನುವಾದ ಪ್ರಶಸ್ತಿಗೆ ಭಾಜನವಾಗಿದೆ.

Award : ಹಿರಿಯ ಲೇಖಕ ಡಾ. ಗುರುಲಿಂಗ ಕಾಪಸೆ ಅವರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿಯ ಅನುವಾದ ಪ್ರಶಸ್ತಿ
ಡಾ. ಗುರುಲಿಂಗ ಕಾಪಸೆ
Follow us
| Updated By: ಶ್ರೀದೇವಿ ಕಳಸದ

Updated on:Jun 24, 2022 | 6:32 PM

ನವದೆಹಲಿ : ಕೇಂದ್ರ ಸಾಹಿತ್ಯ ಅಕಾಡೆಮಿಯು ನೀಡುವ ಅನುವಾದ ಪುಸ್ತಕ ಪ್ರಶಸ್ತಿಗೆ ಹಿರಿಯ ಲೇಖಕರಾದ ಡಾ. ಗುರುಲಿಂಗ ಕಾಪಸೆ ಅವರು ಭಾಜನರಾಗಿದ್ದಾರೆ. ಕಾಪಸೆ ಅವರು ಮರಾಠಿಯಿಂದ ಕನ್ನಡಕ್ಕೆ ಅನುವಾದಿಸಿದ ವಿ. ಸ. ಖಾಂಡೇಕರ್ ಅವರ ‘ಒಂದು ಪುಟದ ಕಥೆ’ ಯು ಈ ಸಲದ ಕೇಂದ್ರ ಸಾಹಿತ್ಯ ಅಕಾಡೆಮಿಯ ಅನುವಾದ ಪ್ರಶಸ್ತಿಗೆ ಭಾಜನವಾಗಿದೆ. ‘ಒಂದು ಪುಟದ ಕಥೆ’ (ಮೂಲದಲ್ಲಿ ‘ಏಕಾ ಪಾನಾಚಿ ಕಹಾನಿ’)ಯು ಖಾಂಡೇಕರ್ ಅವರ ಆತ್ಮಕಥೆ. ಖಾಂಡೇಕರ್ ಅವರು ಮರಾಠಿಯ ಮೊದಲ ಜ್ಞಾನಪೀಠ ಪ್ರಶಸ್ತಿ ಪಡೆದ ಲೇಖಕರು. ಅವರ ‘ಯಯಾತಿ ‘ ಎಂಬ ಕೃತಿಗೆ ಜ್ಞಾನಪೀಠ ಪ್ರಶಸ್ತಿಯು ಬಂದಿತ್ತು. ಖಾಂಡೇಕರ್ ಅವರ ಆತ್ಮಕಥೆಯು ಕಳೆದ ಶತಮಾನದ ಭಾರತದ ಅದರಲ್ಲಿಯೂ ಮಹಾರಾಷ್ಟ್ರದ ಕೊಂಕಣ ಭಾಗದ ಸಾಮಾಜಿಕ, ಆರ್ಥಿಕ, ರಾಜಕೀಯ, ಜಾತೀಯ ಸ್ಥಿತಿಗತಿಗಳ ಸಮಗ್ರವಾದ ವಿವರಣೆ ನೀಡುತ್ತದೆ.

ಕೇಂದ್ರ ಸಾಹಿತ್ಯ ಅಕಾಡೆಮಿಯ ಕನ್ನಡ ವಿಭಾಗದ ಸಂಚಾಲಕರಾಗಿರುವ ಡಾ. ಸರಜೂ ಕಾಟ್ಕರ್ ಅವರ ನೇತೃತ್ವದಲ್ಲಿ ನಡೆದ ಅನುವಾದ ಸಾಹಿತ್ಯ ಪ್ರಶಸ್ತಿ ಆಯ್ಕೆ ಸಮಿತಿಯು ಡಾ. ಕಾಪಸೆಯವರು ಅನುವಾದಿಸಿದ ಈ ಕೃತಿಯನ್ನು ಪ್ರಶಸ್ತಿಗೆ ಆಯ್ಕೆಮಾಡಿದೆ. ಆಯ್ಕೆ ಸಮಿತಿಯ ತೀರ್ಪುಗಾರರಾಗಿ ಹಿರಿಯ ಲೇಖಕರಾದ ಡಾ ಬಸವರಾಜ ಕಲ್ಗುಡಿ, ಕವಿಗಳಾದ ಬಿ. ಆರ್. ಲಕ್ಷ್ಮಣರಾವ್ ಹಾಗೂ ಡಾ ಸುಬ್ಬು ಹೊಲಿಯಾರ್ ಇದ್ದರು. ಪ್ರಶಸ್ತಿ ಪ್ರದಾನ ಸಮಾರಂಭವು ಆಗಸ್ಟ್‌ ಅಥವಾ ಸೆಪ್ಟೆಂಬರ್ ತಿಂಗಳಲ್ಲಿ ದಿಲ್ಲಿಯಲ್ಲಿ ನೆರವೇರಲಿದೆ. ಪ್ರಶಸ್ತಿಯು 50,000 ರುಪಾಯಿ , ಸ್ಮೃತಿ ಫಲಕ, ಶಾಲು ಸನ್ಮಾನ ಒಳಗೊಂಡಿರುತ್ತದೆ.

(ಇನ್ನಷ್ಟು ಮಾಹಿತಿಗಾಗಿ ನಿರೀಕ್ಷಿಸಿ)

ಇದನ್ನೂ ಓದಿ
Image
Literature: ನೆರೆನಾಡ ನುಡಿಯೊಳಗಾಡಿ; ‘ಈಗಲೇ ರಿಕಾರ್ಡ್ ಹಚ್ಚಬಾರದು, ಇನ್ನೂ ಅಪ್ಪನ ಖತಮು ಮುಗಿದಿಲ್ಲ’
Image
Literature : ನೆರೆನಾಡ ನುಡಿಯೊಳಗಾಡಿ; ಬಿಎಂ ಶರ್ಮಾ ಅನುವಾದಿಸಿದ ರಾಹುಲ ಸಾಂಕೃತ್ಯಾಯನ ಕಥೆ ‘ನಿಶಾ‘
Image
Literature: ನೆರೆನಾಡ ನುಡಿಯೊಳಗಾಡಿ; ‘ಉಭಯ ಜೀವನ’ ಕೆಕೆ ಗಂಗಾಧರನ್ ಅನುವಾದಿಸಿದ ಮಲಯಾಳ ಕಥೆ
Image
Literature: ನೆರೆನಾಡ ನುಡಿಯೊಳಗಾಡಿ; ಪಾವಣ್ಣನ್ ಚಿಂತಾಮಣಿ ಕೊಡ್ಲೆಕೆರೆ ಅನುವಾದಿಸಿದ ಬಿ ಜಯಮೋಹನ್ ಕಥೆ ‘ವಿಷಸರ್ಪ’

Published On - 1:50 pm, Fri, 24 June 22