ಹಿರಿಯ ಸಾಹಿತಿ, ಸಂಶೋಧಕ ಡಾ.ಎಂ.ಚಿದಾನಂದಮೂರ್ತಿ ವಿಧಿವಶ
ಬೆಂಗಳೂರು: ಹಿರಿಯ ಸಂಶೋಧಕ ಡಾ.ಚಿದಾನಂದಮೂರ್ತಿ(88) ವಿಧಿವಶರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಹಿರಿಯ ಸಾಹಿತಿ ಚಿದಾನಂದಮೂರ್ತಿ, ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಿಸದೆ ಬೆಳಗಿನ ಜಾವ 3.30ಕ್ಕೆ ಕೊನೆಯುಸಿರೆಳೆದಿದ್ದಾರೆ. ಬೆಳಗ್ಗೆ 9 ಗಂಟೆಯ ನಂತರ ಆರ್ಪಿಸಿ ಲೇಔಟ್ನ ಸ್ವಗೃಹದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ. ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ಹಿರೆಕೊಗಳುರ್ ಗ್ರಾಮದಲ್ಲಿ ಮೇ 10, 1931ರಂದು ಜನಿಸಿದ್ದ ಎಂ.ಚಿದಾನಂದ ಮೂರ್ತಿ, ಹಂಪಿಯ ಸ್ಮಾರಕಗಳ ಸಂರಕ್ಷಣೆಗೆ ನಿರಂತರ ಹೋರಾಟ ನಡೆಸಿದ್ದರು. ಕನ್ನಡ ಭಾಷೆಯ ಐತಿಹಾಸಿಕತೆಯ ಕುರಿತು ಚಿಮೂ […]
ಬೆಂಗಳೂರು: ಹಿರಿಯ ಸಂಶೋಧಕ ಡಾ.ಚಿದಾನಂದಮೂರ್ತಿ(88) ವಿಧಿವಶರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಹಿರಿಯ ಸಾಹಿತಿ ಚಿದಾನಂದಮೂರ್ತಿ, ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಿಸದೆ ಬೆಳಗಿನ ಜಾವ 3.30ಕ್ಕೆ ಕೊನೆಯುಸಿರೆಳೆದಿದ್ದಾರೆ. ಬೆಳಗ್ಗೆ 9 ಗಂಟೆಯ ನಂತರ ಆರ್ಪಿಸಿ ಲೇಔಟ್ನ ಸ್ವಗೃಹದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ.
ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ಹಿರೆಕೊಗಳುರ್ ಗ್ರಾಮದಲ್ಲಿ ಮೇ 10, 1931ರಂದು ಜನಿಸಿದ್ದ ಎಂ.ಚಿದಾನಂದ ಮೂರ್ತಿ, ಹಂಪಿಯ ಸ್ಮಾರಕಗಳ ಸಂರಕ್ಷಣೆಗೆ ನಿರಂತರ ಹೋರಾಟ ನಡೆಸಿದ್ದರು. ಕನ್ನಡ ಭಾಷೆಯ ಐತಿಹಾಸಿಕತೆಯ ಕುರಿತು ಚಿಮೂ ಸಂಶೋಧನೆ ನಡೆಸಿದ್ದರು. ಕನ್ನಡಕ್ಕೆ ಶಾಸ್ತ್ರೀಯ ಭಾಷೆ ಸ್ಥಾನಮಾನ ಸಿಗಲು ಚಿಮೂ ಪ್ರಮುಖ ಕಾರಣರಾಗಿದ್ದಾರೆ.
Published On - 6:32 am, Sat, 11 January 20