AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನ್ನಡಕ್ಕಾಗಿ ಹೋರಾಡಿದರೆ ದೇಶದ್ರೋಹಿ ಎಂದು ಪಟ್ಟ ಕಟ್ಟಲಾಗುತ್ತಿದೆ -ಕರವೇ ರಾಜ್ಯಾಧ್ಯಕ್ಷ ಪ್ರವೀಣ್​ ಶೆಟ್ಟಿ

ಕನ್ನಡಕ್ಕಾಗಿ ಹೋರಾಡಿದರೆ ದೇಶದ್ರೋಹಿ ಪಟ್ಟ ಕಟ್ಟಲಾಗುತ್ತಿದೆ. ದೇಶದ್ರೋಹದ ಕೇಸ್​ ಹಾಕಿ ಬಂಧಿಸಿದ ಘಟನೆ ನಡೆದಿದೆ ಎಂದು ಜಿಲ್ಲೆಯಲ್ಲಿ ಕರವೇ ರಾಜ್ಯಾಧ್ಯಕ್ಷ ಪ್ರವೀಣ್ ಶೆಟ್ಟಿ ಆಗ್ರಹಿಸಿದರು.

ಕನ್ನಡಕ್ಕಾಗಿ ಹೋರಾಡಿದರೆ ದೇಶದ್ರೋಹಿ ಎಂದು ಪಟ್ಟ ಕಟ್ಟಲಾಗುತ್ತಿದೆ -ಕರವೇ ರಾಜ್ಯಾಧ್ಯಕ್ಷ ಪ್ರವೀಣ್​ ಶೆಟ್ಟಿ
ಕರವೇ ರಾಜ್ಯಾಧ್ಯಕ್ಷ ಪ್ರವೀಣ್ ಶೆಟ್ಟಿ
KUSHAL V
|

Updated on:Feb 06, 2021 | 7:07 PM

Share

ಉಡುಪಿ: ಬೆಳಗಾವಿ ಗಡಿಯ ವಿಚಾರಕ್ಕೆ ಬಂದರೆ ತಕ್ಕ ಪಾಠ ಕಲಿಸುತ್ತೇವೆ ಎಂದು ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆಗೆ ಕರವೇ ರಾಜ್ಯಾಧ್ಯಕ್ಷ ಪ್ರವೀಣ್ ಶೆಟ್ಟಿ ಎಚ್ಚರಿಕೆ ಕೊಟ್ಟಿದ್ದಾರೆ. ಜೊತೆಗೆ, ಕರ್ನಾಟಕದ ಒಂದು ಹಿಡಿ ಮಣ್ಣು ಸಹ ನಿಮಗೆ ಸಿಗುವುದಿಲ್ಲ. ಸಿಎಂ ಉದ್ಧವ್‌ ಠಾಕ್ರೆ ವಿರುದ್ಧ ಮಹಾರಾಷ್ಟ್ರ ಚಲೋ ನಡೆಸ್ತೇವೆ. ಲಾಠಿ ಏಟು, ಜೈಲು ನಾವು ನೋಡಿಯಾಗಿದೆ ಎಂದು ಹೇಳಿದರು.

ಇಡೀ ದೇಶದಲ್ಲಿ ರೈತರು ಹೋರಾಟ ಮಾಡುತ್ತಿದ್ದಾರೆ. ನಾವೆಲ್ಲರೂ ರೈತರ ಮಕ್ಕಳೇ. ರೈತರು ಇಲ್ಲದಿದ್ದರೆ ಈ ದೇಶ ಇಲ್ಲ. ರೈತರ ಜೊತೆ ನಾವಿದ್ದೇವೆ. ರೈತರ ಹೋರಾಟಕ್ಕೆ ನೈತಿಕ ಬೆಂಬಲ ನೀಡುತ್ತೇವೆ ಎಂದು ಸಹ ಹೇಳಿದರು.

‘ಬೆಂಗಳೂರು ಏರ್ ಶೋದಲ್ಲಿ ಕನ್ನಡಕ್ಕೆ ಅಪಮಾನವಾಗಿದೆ’ ಬೆಂಗಳೂರು ಏರ್ ಶೋದಲ್ಲಿ ಕನ್ನಡಕ್ಕೆ ಅಪಮಾನವಾಗಿದೆ. ಶಿವಮೊಗ್ಗದಲ್ಲಿ ಅಮಿತ್ ಶಾ ಪಾಲ್ಗೊಂಡ ಕಾರ್ಯಕ್ರಮದಲ್ಲಿ ಕನ್ನಡ ಮಾಯವಾಗಿತ್ತು. ಗಡಿ ಪ್ರದೇಶದ ರಾಜಕಾರಣಿಗಳು ಕನ್ನಡವನ್ನು ಮರೆತಿದ್ದಾರೆ. ಮರಾಠಿ ಭಾಷೆಯಲ್ಲಿ ರಾಜಕಾರಣಿಗಳು ವ್ಯವಹರಿಸುತ್ತಾರೆ. ಗಣ್ಯರು ದೆಹಲಿ, ವಿದೇಶದಿಂದ ಬಂದ್ರೂ ಕನ್ನಡ ಕಡ್ಡಾಯ ಮಾಡ್ಲಿ. ಕನ್ನಡದ ಕೀಳರಿಮೆಯನ್ನು ನಾವು ಸಹಿಸಿಕೊಳ್ಳಲ್ಲ ಎಂದು ಪ್ರವೀಣ್ ಶೆಟ್ಟಿ ತಮ್ಮ ಆಕ್ರೋಶ ಹೊರಹಾಕಿದರು. ಮುಂದಿನ ದಿನಗಳಲ್ಲಿ ಇದಕ್ಕೆ ತಕ್ಕ ಉತ್ತರವನ್ನು ಕೊಡುತ್ತೇವೆ ಎಂದು ಹೇಳಿದರು.

‘ದೇಶದ್ರೋಹದ ಕೇಸ್​ ಹಾಕಿ ಬಂಧಿಸಿದ ಘಟನೆ ನಡೆದಿದೆ’ ಕನ್ನಡಕ್ಕಾಗಿ ಹೋರಾಡಿದರೆ ದೇಶದ್ರೋಹಿ ಪಟ್ಟ ಕಟ್ಟಲಾಗುತ್ತಿದೆ. ದೇಶದ್ರೋಹದ ಕೇಸ್​ ಹಾಕಿ ಬಂಧಿಸಿದ ಘಟನೆ ನಡೆದಿದೆ. ಕನ್ನಡ ನಿರ್ಲಕ್ಷವಾದರೆ ಮುಖ್ಯಮಂತ್ರಿಗಳು ಕಣ್ಣುಕಟ್ಟಿ ಕುಳಿತುಕೊಳ್ಳಬಾರದು. ಸಚಿವರು ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳಬೇಕು ಎಂದು ಜಿಲ್ಲೆಯಲ್ಲಿ ಕರವೇ ರಾಜ್ಯಾಧ್ಯಕ್ಷ ಪ್ರವೀಣ್ ಶೆಟ್ಟಿ ಆಗ್ರಹಿಸಿದರು.

ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೆಂಪೇಗೌಡರ ಪ್ರತಿಮೆ: ಪುತ್ಥಳಿ ನಿರ್ಮಾಣ ಕಾರ್ಯ ವೀಕ್ಷಿಸಿದ ನಿರ್ಮಲಾನಂದಶ್ರೀ, DCM ಅಶ್ವತ್ಥ್​​ ನಾರಾಯಣ

Published On - 7:05 pm, Sat, 6 February 21

ಬೆಳೆಬಾಳುವ ಮರಗಳನ್ನೇ ಕಡಿದು ಮಾರಿಕೊಂಡ್ರಾ ಅಧಿಕಾರಿಗಳು?
ಬೆಳೆಬಾಳುವ ಮರಗಳನ್ನೇ ಕಡಿದು ಮಾರಿಕೊಂಡ್ರಾ ಅಧಿಕಾರಿಗಳು?
ಬಿಜೆಪಿಗೆ ಮತ ಹಾಕಿ, ಅಸ್ಸಾಂನಿಂದ ನುಸುಳುಕೋರರನ್ನು ಓಡಿಸುತ್ತೇವೆ; ಅಮಿತ್ ಶಾ
ಬಿಜೆಪಿಗೆ ಮತ ಹಾಕಿ, ಅಸ್ಸಾಂನಿಂದ ನುಸುಳುಕೋರರನ್ನು ಓಡಿಸುತ್ತೇವೆ; ಅಮಿತ್ ಶಾ
ಆರ್​​ಎಸ್​ಎಸ್​ ಕುರಿತ ದಿಗ್ವಿಜಯ ಸಿಂಗ್ ಹೇಳಿಕೆಗೆ ಶಶಿ ತರೂರ್ ಬೆಂಬಲ
ಆರ್​​ಎಸ್​ಎಸ್​ ಕುರಿತ ದಿಗ್ವಿಜಯ ಸಿಂಗ್ ಹೇಳಿಕೆಗೆ ಶಶಿ ತರೂರ್ ಬೆಂಬಲ
ತನ್ನ ಕ್ಷೇತ್ರದಲ್ಲಿ ಕರೆಂಟ್ ತೆಗೆದಿದ್ದಕ್ಕೆ ವಿದ್ಯುತ್ ಕಂಬ ಹತ್ತಿದ ಶಾಸಕ
ತನ್ನ ಕ್ಷೇತ್ರದಲ್ಲಿ ಕರೆಂಟ್ ತೆಗೆದಿದ್ದಕ್ಕೆ ವಿದ್ಯುತ್ ಕಂಬ ಹತ್ತಿದ ಶಾಸಕ
ನ್ಯೂ ಇಯರ್ ಗಿಫ್ಟ್​: ಮನೆ ಕಳೆದುಕೊಂಡ ಕೋಗಲು ಜನರಿಗೆ ಹೊಸ ಸೂರು
ನ್ಯೂ ಇಯರ್ ಗಿಫ್ಟ್​: ಮನೆ ಕಳೆದುಕೊಂಡ ಕೋಗಲು ಜನರಿಗೆ ಹೊಸ ಸೂರು
ಬಿಗ್ ಬಾಸ್: ಮುಚ್ಚುಮರೆ ಇಲ್ಲದೇ 3 ರಿಲೇಷನ್​ಶಿಪ್ ಬಗ್ಗೆ ನಿಜ ಹೇಳಿದ ಸೂರಜ್
ಬಿಗ್ ಬಾಸ್: ಮುಚ್ಚುಮರೆ ಇಲ್ಲದೇ 3 ರಿಲೇಷನ್​ಶಿಪ್ ಬಗ್ಗೆ ನಿಜ ಹೇಳಿದ ಸೂರಜ್
ಕಾರಿನ ಮೇಲೆ ಬಿದ್ದ ವಾಟರ್ ಟ್ಯಾಂಕರ್
ಕಾರಿನ ಮೇಲೆ ಬಿದ್ದ ವಾಟರ್ ಟ್ಯಾಂಕರ್
ಮತ್ತೊಂದು ಕೆನರಾ ಬ್ಯಾಂಕಿನಿಂದ ಗ್ರಾಹಕರಿಗೆ ಮಹಾ ಮೋಸ
ಮತ್ತೊಂದು ಕೆನರಾ ಬ್ಯಾಂಕಿನಿಂದ ಗ್ರಾಹಕರಿಗೆ ಮಹಾ ಮೋಸ
ಕೋಗಿಲು ಲೇಔಟ್​​ಗೆ ಡಿಕೆ ಶಿವಕುಮಾರ್​ ಭೇಟಿ: ಪರಿಶೀಲನೆ, ಹೇಳಿದ್ದಿಷ್ಟು
ಕೋಗಿಲು ಲೇಔಟ್​​ಗೆ ಡಿಕೆ ಶಿವಕುಮಾರ್​ ಭೇಟಿ: ಪರಿಶೀಲನೆ, ಹೇಳಿದ್ದಿಷ್ಟು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು