ಬೆಂಗಳೂರು: ಉಪಚುನಾವಣೆ ಸೋಲಿನ ನೈತಿಕ ಹೊಣೆಹೊತ್ತು ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ದಿನೇಶ್ ಗುಂಡೂರಾವ್ ರಾಜೀನಾಮೆ ನೀಡಿದ್ದಾರೆ. ರಾಜೀನಾಮೆ ವಿಚಾರವಾಗಿ ನಾನು ಹೈಕಮಾಂಡ್ ಜೊತೆ ನಿನ್ನೆ ಮತನಾಡಿದ್ದೆ. ನನ್ನ ರಾಜೀನಾಮೆ ಪತ್ರವನ್ನು ಕಾಂಗ್ರೆಸ್ ಹೈಕಮಾಂಡ್ಗೆ ಕಳಿಸುತ್ತೇನೆ ಎಂದು ಸುದ್ದಿಗೋಷ್ಠಿಯಲ್ಲಿ ಹೇಳಿದರು.
ರಾಹುಲ್ ಗಾಂಧಿ ಅವರು ನನಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೊಟ್ಟಿದ್ದರು. ನಾನು ನನ್ನ ಶಕ್ತಿಮೀರಿ ಕೆಲಸಮಾಡಿದ್ದೇನೆ. ಆದ್ರೆ, ಎಲ್ಲಿ ತಪ್ಪಾಗಿದೆ, ಏನು ಸಮಸ್ಯೆಯಾಗಿದೆ ಎಂದು ತಿಳಿದುಕೊಳ್ಳಬೇಕು. ಸೋಲಿನ ಬಗ್ಗೆ ನಾವು ಆತ್ಮಾವಲೋಕನ ಮಾಡಿಕೊಳ್ಳಬೇಕು. ಚುನಾವಣೆ ಬಳಿಕ ರಾಜ್ಯದ, ಜನರ ಹಿತ ಮುಖ್ಯವಾಗಿದೆ. ಲೋಕಸಭೆ ಚುನಾವಣೆ ವೇಳೆಯೂ ನಾನೇ ಅಧ್ಯಕ್ಷನಾಗಿದ್ದೆ. ಈವರೆಗೂ ಎಐಸಿಸಿ ನಮ್ಮ ಮೇಲೆ ವಿಶ್ವಾಸವಿಟ್ಟು ಸಹಕಾರ ನೀಡಿದೆ. ಅಭ್ಯರ್ಥಿಗಳ ಆಯ್ಕೆ ಸೇರಿದಂತೆ ಎಲ್ಲದಕ್ಕೂ ಮುಕ್ತ ಅವಕಾಶ ಕಲ್ಪಿಸಲಾಗಿತ್ತು ಎಂದರು.
Published On - 4:35 pm, Mon, 9 December 19