DK shivakumar: ಕಾಂಗ್ರೆಸ್ ಟಿಕೆಟ್ ಹಂಚಿಕೆಗೆ ಮತ್ತಷ್ಟು ವೇಗ! ಅಭ್ಯರ್ಥಿಗಳ ಆಯ್ಕೆಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನೀಡಿದರು ಮಾರ್ಗಸೂಚಿ

Karnataka Assembly Elections 2023: ಮುಂದಿನ ವಿಧಾನಸಭಾ ಚುನಾವಣೆಯ ಕಾಂಗ್ರೆಸ್ ಟಿಕೆಟ್ ಹಂಚಿಕೆಗೆ ಮತ್ತಷ್ಟು ವೇಗ ದೊರೆತಿದೆ. ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ನಡೆಯುತ್ತಿದ್ದು, ಅದರ ಮಧ್ಯೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಪಕ್ಷವನ್ನು ಚುನಾವಣೆಗೆ ಅಣಿಗೊಳಿಸುವ ಕಾರ್ಯದಲ್ಲಿ ಮಗ್ನರಾಗಿದ್ದಾರೆ.

DK shivakumar: ಕಾಂಗ್ರೆಸ್ ಟಿಕೆಟ್ ಹಂಚಿಕೆಗೆ ಮತ್ತಷ್ಟು ವೇಗ! ಅಭ್ಯರ್ಥಿಗಳ ಆಯ್ಕೆಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನೀಡಿದರು ಮಾರ್ಗಸೂಚಿ
ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್
Follow us
TV9 Web
| Updated By: ಸಾಧು ಶ್ರೀನಾಥ್​

Updated on:Dec 21, 2022 | 1:48 PM

2023 ರ ವಿಧಾನಸಭಾ ಚುನಾವಣೆಯ (Karnataka Assembly Elections 2023) ಕಾಂಗ್ರೆಸ್ ಟಿಕೆಟ್ ಹಂಚಿಕೆಗೆ ಮತ್ತಷ್ಟು ವೇಗ ದೊರೆತಿದೆ. ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ನಡೆಯುತ್ತಿದ್ದು, ಅದರ ಮಧ್ಯೆ ಕೆಪಿಸಿಸಿ (KPCC) ಅಧ್ಯಕ್ಷ ಡಿಕೆ ಶಿವಕುಮಾರ್ (DK shivakumar) ಅವರು ಪಕ್ಷವನ್ನು ಚುನಾವಣೆಗೆ ಅಣಿಗೊಳಿಸುವ ಕಾರ್ಯದಲ್ಲಿ ಮಗ್ನರಾಗಿದ್ದಾರೆ. ಜಿಲ್ಲಾವಾರು ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಗೆ ಮಾರ್ಗಸೂಚಿ (Guidelines) ನೀಡಿರುವ ಡಿಕೆಶಿ, ಮುಂದಿನ ಹಂತದ ಪ್ರಕ್ರಿಯೆಗಳ ಬಗ್ಗೆ ಸ್ಪಷ್ಟ ಮಾರ್ಗಸೂಚಿಯನ್ನೂ ನಿಗದಿಪಡಿಸಿದ್ದಾರೆ. ಅದರ ಸಂಪೂರ್ಣ ಮಾಹಿತಿ ಇಲ್ಲಿದೆ.

  1.  ಪ್ರತೀ ಕ್ಷೇತ್ರಕ್ಕೆ ಸೂಕ್ತವಾದ 1 ರಿಂದ 3 ಅಭ್ಯರ್ಥಿಗಳ ಪಟ್ಟಿಯನ್ನು ಕೆಪಿಸಿಸಿಗೆ ಗೌಪ್ಯವಾಗಿ ತಲುಪಿಸಬೇಕು
  2. ಜಿಲ್ಲಾ ಚುನಾವಣಾ ಸಮಿತಿಯು ಜಿಲ್ಲೆಯ ಮಂಚೂಣಿ ಘಟಕಗಳ, ವಿಭಾಗಗಳ ಮತ್ತು ಸೆಲ್‌ಗಳ ಅಧ್ಯಕ್ಷರುಗಳ ಜೊತೆ ಪ್ರತ್ಯೇಕವಾಗಿ ಸಮಾಲೋಚನೆ ನಡೆಸಿ ಅವರ ಅಭಿಪ್ರಾಯಗಳನ್ನು ಪಡೆದುಕೊಳ್ಳಬೇಕು.
  3. ಪ್ರತೀ ಕ್ಷೇತ್ರದಿಂದ ಮೊದಲು ಕಾರ್ಯಕರ್ತರನ್ನು ಕರೆಸಿ ಮಾತನಾಡಬೇಕು. ನಂತರ ಕ್ಷೇತ್ರದ ನಾಯಕರುಗಳನ್ನು ಕರೆಸಿ ಅವರೊಂದಿಗೆ ಪ್ರತ್ಯೇಕವಾಗಿ ಮಾತುಕತೆ ನಡೆಸಬೇಕು ಆ ನಂತರ ಕಾರ್ಯಕರ್ತರು ಮತ್ತು ನಾಯಕರ ಸಭೆ ನಡೆಸಬೇಕು. ಪ್ರತಿ ಕ್ಷೇತ್ರಕ್ಕೂ ಪ್ರತ್ಯೇಕವಾಗಿ ಸಮಯಗಳನ್ನು ನಿಗದಿ ಮಾಡಬೇಕು. ಬ್ಲಾಕ್ ಸಮಿತಿಯ ಅಭಿಪ್ರಾಯವನ್ನು ತಪ್ಪದೇ ಸಂಗ್ರಹಿಸಬೇಕು
  4. ಚುನಾವಣಾ ಸಮಿತಿಯು ಕ್ಷೇತ್ರವಾರು ಸಭೆಗಳನ್ನು ಜಿಲ್ಲಾ ಕಾಂಗ್ರೆಸ್ ಕಛೇರಿ ಅಥವಾ ಸಮುದಾಯ ಭವನದಲ್ಲಿ ನಿಗದಿ ಪಡಿಸಿದ ಸಮಯದಲ್ಲಿ ಜರಗಿಸಬೇಕು. ಯಾರದೇ ಮನೆ ಅಥವಾ ವೈಯಕ್ತಿಕ ಕಛೇರಿಗಳಲ್ಲಿ ಸಭೆಗಳನ್ನು ನಡೆಸುವಂತಿಲ್ಲ.
  5. ಸಭೆಯ ಕಲಾಪಗಳ ಧ್ವನಿ ಮುದ್ರಣ (ರೆಕಾರ್ಡಿಂಗ್), ಅಥವಾ ವಿಡಿಯೋ ರೆಕಾರ್ಡಿಂಗ್ ಗಳನ್ನು ಮಾಡಲು ಯಾವುದೇ ರಿತಿಯಲ್ಲಿ ಅವಕಾಶ ನೀಡಬಾರದು. ಮಾಧ್ಯಮದವರಿಗೆ ಸಭೆಗೆ ಆಹ್ವಾನ ಮಾಡಬಾರದು ಮತ್ತು ಅವರಿಗೆ ಯಾವುದೇ ಪ್ರತಿಕ್ರೀಯೆಯನ್ನು ನೀಡಬಾರದು.
  6. ಜಿಲ್ಲಾ ಚುನಾವಣಾ ಸಮಿತಿಯು ಚುನಾವಣೆಗಳಲ್ಲಿ ಗೆಲ್ಲುವಂತಹ ಸೂಕ್ತ ಅಭ್ಯರ್ಥಿಗೆ ಆದ್ಯತೆ ನೀಡುವುದರ ಜೊತೆಗೆ ಅವರ ಹಿನ್ನೆಲೆ, ಕ್ಷೇತ್ರದಲ್ಲಿ ಅವರಿಗಿರುವ ಮಾನ್ಯತೆ, ಅಕ್ಕ ಪಕ್ಕದ ಕ್ಷೇತ್ರಗಳಲ್ಲಿ ಅವರು ಹೊಂದಿರುವ ಪ್ರಭಾವ ಹಾಗೂ ಚುನಾವಣೆಯನ್ನು ಎಲ್ಲರ ಸಹಕಾರ ಪಡೆದು ನಿರ್ವಹಿಸಬಲ್ಲ ಸಾಮರ್ಥ್ಯ ಮತ್ತು ಸಂಪನ್ಮೂಲ ಮುಂತಾದ ವಿಷಯಗಳನ್ನು ಕೂಡ ಗಮನದಲ್ಲಿರಿಸಿ
  7. ನಮ್ಮ ಪಕ್ಷದ ಸಿದ್ಧಾಂತ, ಆದರ್ಶಗಳಿಗೆ ಅನುಗುಣವಾಗಿ ಅಭ್ಯರ್ಥಿಗಳ ಆಯ್ಕೆಯಲ್ಲಿ ಸಾಮಾಜಿಕ ನ್ಯಾಯ ಒದಗಿಸಿ, ಸಮಾಜದ ಎಲ್ಲಾ ವರ್ಗಗಳಿಗೆ ಸಮಾನವಾದ ಅವಕಾಶ ಸಿಗುವಂತ ನೋಡಿಕೊಳ್ಳಬೇಕು.
  8. ಯಾವುದೇ ಸಮಾಜಘಾತುಕ ಚಟುವಟಿಕೆಗಳಲ್ಲಿ ಭಾಗವಹಿಸಿರುವ ಹಾಗೂ ಕೋಮುವಾದವನ್ನು ಪ್ರಚೋದಿಸಿರುವ ಹಾಗೂ ಕಾಂಗ್ರೆಸ್‌ ಪಕ್ಷದ ಸಿದ್ಧಾಂತ ಮತ್ತು ತತ್ವಗಳ ವಿರುದ್ಧವಾಗಿರುವ ಆಚಾರ ಮತ್ತು ವಿಚಾರವನ್ನು ಪ್ರತಿಪಾದಿಸುವ ಯಾವುದೇ ಆಕಾಂಕ್ಷಿಗೆ ಅವಕಾಶ ನೀಡಬಾರದು
  9. ಜಿಲ್ಲಾ ಚುನಾವಣಾ ಸಮಿತಿಯ ಸಭೆಯಲ್ಲಿ ಯಾವುದೇ ಕಾರಣಕ್ಕೂ ಸಮಿತಿಯ ಸದಸ್ಯರಲ್ಲದವರು ಭಾಗವಹಿಸಲು ಅವಕಾಶವಿರಬಾರದು. ನಿಗದಿತ ನಮೂನೆಯಲ್ಲಿ ಬಂದಿರುವ ಎಲ್ಲಾ ಅರ್ಜಿಗಳನ್ನು ಸಮಿತಿಯವರು ಸೂಕ್ಷ್ಮವಾಗಿ ಪರಿಶೀಲಿಸಬೇಕು. ಚುನಾವಣಾ ಸಮಿತಿಯ ಸಭೆಗಳ ದಿನಾಂಕ ಮತ್ತು ಸ್ಥಳ ಸಾಕಷ್ಟು ಮುನ್ನವೇ ಸಂಬಂಧಪಟ್ಟ ಎಲ್ಲರಿಗೂ ತಿಳಿಸಿ, ಎಲ್ಲರೂ ಭಾಗವಹಿಸುವಂತೆ ಮಾಡಬೇಕು. ಯಾವುದೇ ಕಾರಣಕ್ಕೂ ಕೆಲವರು ಮಾತ್ರ ಸೇರಿ ತಮಗೆ ಬೇಕಾದ ಕಡೆ ಸಭೆ ನಡೆಸಿ ತೀರ್ಮಾನ ತೆಗೆದುಕೊಳ್ಳಲಾಗಿದೆ ಮಾಡಬಾರದು.
  10. ಜಿಲ್ಲಾ ಆಯ್ಕೆ ಸಮಿತಿಯು ಎಲ್ಲಾ ಅರ್ಜಿಗಳನ್ನು ಪರಿಶೀಲಿಸಿ ಪರಸ್ಪರ ಸಮಾಲೋಚನೆಯೊಂದಿಗೆ ಸರ್ವಾನುಮತದಿಂದ ಕಾಂಗ್ರೆಸ್ ಪಕ್ಷದ ಟಿಕೆಟ್ ಪಡೆಯಲು ಸೂಕ್ತ ಅಭ್ಯರ್ಥಿ ಎಂದೆನಿಸಿದವರ ಪಟ್ಟಿಯನ್ನು ಪ್ರತಿ ಕ್ಷೇತ್ರಕ್ಕಾಗಿ ಸಿದ್ಧಪಡಿಸಬೇಕು. ಆಯಾ ಕ್ಷೇತ್ರದ ರಾಜಕೀಯ ಪರಿಸ್ಥಿತಿ ಮತ್ತು ಹಿನ್ನೆಲೆಯ ಜೊತೆಗೆ ಸೂಕ್ತ ಅಭ್ಯರ್ಥಿಗಳ ಪಟ್ಟಿಯಲ್ಲಿರುವ ಪ್ರತಿಯೊಬ್ಬರ ಬಗ್ಗೆ ಟಿಪ್ಪಣಿಯನ್ನು ಜೊತೆಯಲ್ಲಿ ಸೇರಿಸಿ ಕೆ.ಪಿ.ಸಿ.ಸಿ. ಗೆ ಕಳುಹಿಸಬೇಕು. ಪ್ರತಿ ಅಭ್ಯರ್ಥಿಯ ಶಕ್ತಿ ಮತ್ತು ದೌರ್ಬಲ್ಯಗಳನ್ನು ನಮೂದಿಸಬೇಕು.
  11. ಸ್ಥಳೀಯ ಮಟ್ಟದಲ್ಲಿ ಜನರ ವಿಶ್ವಾಸ ಮತ್ತು ಅಭಿಮಾನಗಳಿಸಿರುವ ಹಾಗೂ ಆಯಾ ಕ್ಷೇತ್ರಗಳಲ್ಲಿ ಸೇವಾನಿರತರಾಗಿರುವವರಿಗೆ ಮಾತ್ರ ಅವಕಾಶ ಮಾಡಿಕೊಡಬೇಕು. ಯುವಕರು ಮತ್ತು ಮಹಿಳಾ ಮುಖಂಡರು ಗೆಲ್ಲುವ ಸಾಧ್ಯತೆ ಇರುವಲ್ಲಿ ಅವರಿಗೆ ಪ್ರಾಮುಖ್ಯತೆ ನೀಡಬೇಕು. ಸ್ಥಳೀಯ ಕಾರ್ಯಕರ್ತರ ಸಹಕಾರವನ್ನು ಪಡೆದು ಗೆಲ್ಲುವಂತಹ ಅಭ್ಯರ್ಥಿಗಳಿಗೆ ಮಾತ್ರ ಆದ್ಯತೆ ನೀಡತಕ್ಕದ್ದು. ಪಕ್ಷದಲ್ಲಿ ಸೇವಾಹಿರಿತನ, ಅಗತ್ಯ ಸಂಪನ್ಮೂಲ ಮತ್ತು ಕಾರ್ಯಕರ್ತರ ಪಡೆಯನ್ನು ರೂಢಿಸಬಲ್ಲ ಸಾಮರ್ಥ್ಯ, ಕ್ಷೇತ್ರದಲ್ಲಿ ಜನಪ್ರಿಯತೆ ಮತ್ತು ಬೆಂಬಲ ಅಭ್ಯರ್ಥಿಯ ಆಯ್ಕೆಗೆ ಆಧಾರವಾಗಿರಬೇಕು. ಅವರಿಗಿರುವ
  12. ಚುನಾವಣಾ ಸಮಿತಿಯು ಯಾವುದೇ ಕಾರಣಕ್ಕೆ ಅದರ ನಡವಳಿಕೆಗಳಿಂದ ಪಕ್ಷದ ಘನತೆಗೆ ಧಕ್ಕೆಯಾಗದಂತೆ ಮತ್ತು ಪಕ್ಷ ಸಂಘಟನೆಯಲ್ಲಿ ಯಾವುದೇ ಬಿರುಕು ಮೂಡದಂತೆ ಎಚ್ಚರಿಕೆಯನ್ನು ವಹಿಸಬೇಕು.
  13. ಜಿಲ್ಲಾ/ಕ್ಷೇತ್ರ ಹಂತದಲ್ಲಿ ಅಭ್ಯರ್ಥಿಗಳ ಆಯ್ಕೆಯಲ್ಲಿ ವಿವಾದ ಉಂಟಾದಲ್ಲಿ ಎ.ಐ.ಸಿ.ಸಿ. ಹಾಗೂ ಕೆ.ಪಿ.ಸಿ.ಸಿ, ಉಸ್ತುವಾರಿ ಪದಾಧಿಕಾರಿಗಳ ಸಹಕಾರದಿಂದ ಅದನ್ನು ಪರಿಹರಿಸಿಕೊಂಡು ಸಾಧ್ಯವಾದಷ್ಟು ಸರ್ವಾನುಮತದಿಂದ ಗೆಲ್ಲ ಬಲ್ಲ ಅಭ್ಯರ್ಥಿಗಳ ಪಟ್ಟಿಯನ್ನು ಕೆಪಿಸಿಸಿ ಅಧ್ಯಕ್ಷರಿಗೆ ಸಲ್ಲಿಸತಕ್ಕದ್ದು.
  14. ಆಯ್ಕೆ ಪ್ರಕ್ರಿಯೆಯನ್ನು ಸಮಿತಿಯು 31/12/2022 ರ ಒಳಗೆ ಮುಗಿಸಿ 1 ರಿಂದ 3 ಸೂಕ್ತ ಅಭ್ಯರ್ಥಿಗಳ ಪಟ್ಟಿಯನ್ನು ವಿವರವಾದ ವರದಿಯೊಂದಿಗೆ ಗೌಪ್ಯವಾಗಿ ದಿನಾಂಕ 01/01/2023 ರ ಒಳಗಾಗಿ ಕೆಪಿಸಿಸಿ ಅಧ್ಯಕ್ಷರಿಗೆ ಸಲ್ಲಿಸಬೇಕು.

Published On - 1:47 pm, Wed, 21 December 22

ಕೊಟ್ಟ ಮಾತು ಉಳಿಸಿಕೊಂಡ ಸುರೇಶ್, ಧನರಾಜ್ ಮಗಳಿಗೆ ಉಡುಗೊರೆ
ಕೊಟ್ಟ ಮಾತು ಉಳಿಸಿಕೊಂಡ ಸುರೇಶ್, ಧನರಾಜ್ ಮಗಳಿಗೆ ಉಡುಗೊರೆ
ಬಿಗ್​ಬಾಸ್: ಫ್ಯಾಮಿಲಿ ವಿಸಿಟ್ ಬಳಿಕ ಗೆಳೆತನಗಳೆಲ್ಲ ಪೀಸ್-ಪೀಸ್
ಬಿಗ್​ಬಾಸ್: ಫ್ಯಾಮಿಲಿ ವಿಸಿಟ್ ಬಳಿಕ ಗೆಳೆತನಗಳೆಲ್ಲ ಪೀಸ್-ಪೀಸ್
ಬಳ್ಳಾರಿಯ ಕಂಪ್ಲಿಯಿಂದ ವಕ್ಫ್ ವಿರುದ್ಧ ಹೋರಾಟ ಪುನರಾರಂಭಿಸಿದ ಯತ್ನಾಳ್ ತಂಡ
ಬಳ್ಳಾರಿಯ ಕಂಪ್ಲಿಯಿಂದ ವಕ್ಫ್ ವಿರುದ್ಧ ಹೋರಾಟ ಪುನರಾರಂಭಿಸಿದ ಯತ್ನಾಳ್ ತಂಡ
ಕುಟುಂಬದ ಅರಣ್ಯರೋದನೆ; ಗೋಗರೆದರೂ ಕಿವಿಗೆ ಹಾಕಿಕೊಳ್ಳದ ಪೊಲೀಸರು
ಕುಟುಂಬದ ಅರಣ್ಯರೋದನೆ; ಗೋಗರೆದರೂ ಕಿವಿಗೆ ಹಾಕಿಕೊಳ್ಳದ ಪೊಲೀಸರು
ಹಿರಿಯ ನಾಯಕರನ್ನು ಪೊಲೀಸ್ ವಶಕ್ಕೆ ಪಡೆದರೂ ಎದೆಗುಂದದ ಕಾರ್ಯಕರ್ತರು
ಹಿರಿಯ ನಾಯಕರನ್ನು ಪೊಲೀಸ್ ವಶಕ್ಕೆ ಪಡೆದರೂ ಎದೆಗುಂದದ ಕಾರ್ಯಕರ್ತರು
ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ