Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದಿನಿಂದ 7 ದಿನಗಳ ಕಾಲ ಚಳಿಗಾಲದ ಅಧಿವೇಶನ: ಮಂಡನೆಯಾಗತ್ತಾ ಲವ್ ಜಿಹಾದ್, ಗೋ ಹತ್ಯೆ ನಿಷೇಧ ಕಾಯ್ದೆ?

ಇಂದಿನಿಂದ ಏಳು ದಿನಗಳ ಕಾಲ ಚಳಿಗಾಲದ ಅಧಿವೇಶನ ಶುರುವಾಗಲಿದ್ದು ರಾಜಕೀಯ ಪಕ್ಷಗಳ ಕದನ ತಾರಕಕ್ಕೇರಲಿದೆ. ಪ್ರತಿ ಬಾರಿ ಚಳಿಗಾಲದ ಅಧಿವೇಶನ ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿತ್ತು. ಆದ್ರೆ ಈ ಬಾರಿ ಬೆಂಗಳೂರಲ್ಲೇ ಚಳಿಗಾಲದ ವಿಧಾನ ಮಂಡಲ ಅಧಿವೇಶನ ನಡೆಯಲಿದೆ.

ಇಂದಿನಿಂದ 7 ದಿನಗಳ ಕಾಲ ಚಳಿಗಾಲದ ಅಧಿವೇಶನ: ಮಂಡನೆಯಾಗತ್ತಾ ಲವ್ ಜಿಹಾದ್, ಗೋ ಹತ್ಯೆ ನಿಷೇಧ ಕಾಯ್ದೆ?
Follow us
ಆಯೇಷಾ ಬಾನು
|

Updated on: Dec 07, 2020 | 6:53 AM

ಬೆಂಗಳೂರು: ಚಳಿಗಾಲದ ಅಧಿವೇಶನಕ್ಕೆ ಕೌಂಟ್‌ಡೌನ್ ಸ್ಟಾರ್ಟ್ ಆಗಿದೆ. ಇಂದಿನಿಂದ ಏಳು ದಿನಗಳ ಕಾಲ ನಡೆಯಲಿರುವ ಅಧಿವೇಶನದಲ್ಲಿ ರಾಜಕೀಯ ಪಕ್ಷಗಳ ಕದನ ತಾರಕಕ್ಕೇರಲಿದೆ. ಅಂದಹಾಗೆ ಪ್ರತಿ ಬಾರಿ ಚಳಿಗಾಲದ ಅಧಿವೇಶನ ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿತ್ತು. ಆದ್ರೆ ಈ ಬಾರಿ ಬೆಂಗಳೂರಲ್ಲೇ ಚಳಿಗಾಲದ ವಿಧಾನ ಮಂಡಲ ಅಧಿವೇಶನ ನಡೆಯಲಿದೆ.

14 ಪ್ರಮುಖ ಮಸೂದೆಗಳ ಮಂಡನೆಗೆ ಸರ್ಕಾರ ಸಜ್ಜು ಈ ಬಾರಿಯ ಅಧಿವೇಶನದಲ್ಲಿ 14 ಪ್ರಮುಖ ಮಸೂದೆಗಳನ್ನ ಮಂಡಿಸಲು ಬಿಜೆಪಿ ಸರ್ಕಾರ ಸಿದ್ದವಾಗಿದ್ರೆ, ಸರ್ಕಾರವನ್ನ ಸದನದಲ್ಲಿ ಕಟ್ಟಿ ಹಾಕಲು ಕಾಂಗ್ರೆಸ್ ಕೂಡ ಸಿದ್ಧವಾಗಿದೆ. ಅಂದ್ಹಾಗೆ ಮಂಡನೆಗೆ ಸಿದ್ಧವಾಗಿರುವ ಮಸೂದೆಗಳು ಯಾವುವು ಅಂತಾ ನೋಡೋದಾದ್ರೆ

ಯಾವ್ಯಾವ ಮಸೂದೆ ಮಂಡನೆಯಾಗುತ್ತೆ? ಕಳೆದ ಬಾರಿಯ ಅಧಿವೇಶನದ ಅವಧಿಯಲ್ಲಿ ಭೂ ಸುಧಾರಣಾ ತಿದ್ದುಪಡಿ ಕಾಯ್ದೆ ವಿಧಾನ ಪರಿಷತ್‌ನಲ್ಲಿ ಪಾಸ್ ಆಗಿರಲಿಲ್ಲ.‌ ಹೀಗಾಗಿ ಭೂಸುಧಾರಣಾ ತಿದ್ದುಪಡಿ ಕಾಯ್ದೆ ಮತ್ತೆ ಮಂಡನೆಯಾಗಲಿದೆ. ಇದರ ಜೊತೆಗೆ ಈಗಾಗಲೇ ಬಿಬಿಎಂಪಿ ಚುನಾವಣೆ ನಡೆಸುವಂತೆ ಹೈಕೋರ್ಟ್ ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಚುನಾವಣೆ ಮುಂದೂಡುವ ದೃಷ್ಠಿಯಿಂದ ಬಿಬಿಎಂಪಿ ವಿಧೇಯಕವನ್ನು ಮಂಡಿಸುವ ಸಾಧ್ಯತೆ ದಟ್ಟವಾಗಿದೆ. ಕೃಷಿ ಉತ್ಪನ್ನ ಮಾರುಕಟ್ಟೆ ವಿಧೇಯಕ ತಿದ್ದುಪಡಿ, ರಾಜ್ಯ ವಿಶ್ವವಿದ್ಯಾಲಯಗಳ ಕಾನೂನು ತಿದ್ದುಪಡಿ ಸೇರಿದಂತೆ ಮಹತ್ವದ ವಿಧೇಯಕಗಳ ಮೇಲೆಯೂ ಚರ್ಚೆ ನಡೆಯುವ ಸಾಧ್ಯತೆ ಇದೆ.

ಇನ್ನು ಬಿಜೆಪಿಯ ಕೆಲ ನಾಯಕರು ಹೇಳಿರುವ ಪ್ರಕಾರ ಗೋ ಹತ್ಯೆ ನಿಷೇಧ ಕಾಯ್ದೆ ಹಾಗೂ ಲವ್ ಜಿಹಾದ್ ನಿಷೇಧ ಕಾಯ್ದೆ ಜಾರಿಗೆ ತರಲು ಸರ್ಕಾರ ಸನ್ನದ್ದವಾಗಿದೆ. ಗೋ ಹತ್ಯೆ ನಿಷೇಧ ಕಾಯ್ದೆಗೆ ಅಗತ್ಯ ಸಿದ್ಧತೆಯಾಗಿರುವ ಬಗ್ಗೆ ವಿರೋಧ ಪಕ್ಷ ಕಾಂಗ್ರೆಸ್‌ಗೂ ಮುನ್ಸೂಚನೆ ಸಿಕ್ಕಿದೆ. ಇದನ್ನು ವಿರೋಧಿಸಲು ವಿಪಕ್ಷ ನಾಯಕರು ಸಿದ್ದರಾಗಿದ್ದಾರೆ.

ಪರಿಷತ್ ಸಭಾಪತಿ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆ! ಇನ್ನು ವಿಧಾನ ಪರಿಷತ್‌ನ ಸಭಾಪತಿ ಪ್ರತಾಪ್ ಚಂದ್ರ ಶೆಟ್ಟಿ ವಿರುದ್ಧ ಬಿಜೆಪಿ ಸದಸ್ಯರು ಅವಿಶ್ವಾಸ ನಿರ್ಣಯ ಮಂಡಿಸಿ ಕಾರ್ಯದರ್ಶಿಗೆ ನೋಟಿಸ್ ನೀಡಿದ್ದಾರೆ. ಇದರಿಂದ ಪರಿಷತ್ ಸಭಾಪತಿ ಸ್ಥಾನಕ್ಕೆ ಚುನಾವಣೆ ನಡೆಯುವ ಸಾಧ್ಯತೆ ಇದೆ.

ಮೊದಲ ದಿನದ ಅಧಿವೇಶನಕ್ಕೆ ಗೈರಾಗಲಿರುವ ಸಿಎಂ ಅಧಿವೇಶನದ ಮೊದಲ ದಿನವೇ ಸಿಎಂ ಯಡಿಯೂರಪ್ಪ ಸದನಕ್ಕೆ ಗೈರಾಗಲಿದ್ದಾರೆ. ಇಂದು ಸಿಎಂ ಯಡಿಯೂರಪ್ಪ ಬೆಳಗ್ಗೆ ತಮ್ಮ ತವರು ಜಿಲ್ಲೆ ಪ್ರವಾಸ ಕೈಗೊಂಡಿದ್ದು ಸಂಜೆಯ ವೇಳೆಗೆ ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ.

ಗದ್ದಲ ಎಬ್ಬಿಸಲಿದೆ ಒನ್ ನೇಷನ್ ಒನ್ ಎಲೆಕ್ಷನ್ ಈ ಬಾರಿಯ ಅಧಿವೇಶನದ ಕೊನೆಯ ಎರಡು ದಿನಗಳ ಕಾಲ ಮಹತ್ವದ ಚರ್ಚೆಗೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವಕಾಶ ಕಲ್ಪಿಸಿದ್ದು, ಸದ್ದುಗದ್ದಲ ಏರ್ಪಡಲಿದೆ. ಒನ್ ನೇಷನ್ ಒನ್ ಎಲೆಕ್ಷನ್ ಕುರಿತು ಎರಡು ದಿನಗಳ ವಿಶೇಷ ಚರ್ಚೆಗೆ ನಿರ್ಧರಿಸಿರುವುದು ಈ ಅಧಿವೇಶನದ ಹೈಲೈಟ್ಸ್ ಆಗಿದೆ.

‘ಮೇ 9ಕ್ಕೆ ತಂದೆ ಕನಸು ನನಸಾಗುತ್ತೆ, ನನ್ನ ಹೊಸ ಜೀವನ ಶುರು’: ಚಂದನ್ ಶೆಟ್ಟಿ
‘ಮೇ 9ಕ್ಕೆ ತಂದೆ ಕನಸು ನನಸಾಗುತ್ತೆ, ನನ್ನ ಹೊಸ ಜೀವನ ಶುರು’: ಚಂದನ್ ಶೆಟ್ಟಿ
ಕೇವಲ 10 ರನ್​​ಗಳಿಂದ ಶತಕ ವಂಚಿತರಾದ ಶುಭ್​ಮನ್ ಗಿಲ್
ಕೇವಲ 10 ರನ್​​ಗಳಿಂದ ಶತಕ ವಂಚಿತರಾದ ಶುಭ್​ಮನ್ ಗಿಲ್
ಚಂದನ್ ಶೆಟ್ಟಿ ಟ್ಯಾಲೆಂಟ್ ಬಗ್ಗೆ ವಿವರಿಸಿದ ಅನುಭವಿ ಕಲಾವಿದ ತಬಲಾ ನಾಣಿ
ಚಂದನ್ ಶೆಟ್ಟಿ ಟ್ಯಾಲೆಂಟ್ ಬಗ್ಗೆ ವಿವರಿಸಿದ ಅನುಭವಿ ಕಲಾವಿದ ತಬಲಾ ನಾಣಿ
ಮಂಗಳೂರು: ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದ ಮುಂಭಾಗ ಬೆಂಕಿ ಆಟ
ಮಂಗಳೂರು: ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದ ಮುಂಭಾಗ ಬೆಂಕಿ ಆಟ
ರಾಂಬನ್‌ನಲ್ಲಿ ಭೂಕುಸಿತ; ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಬಂದ್
ರಾಂಬನ್‌ನಲ್ಲಿ ಭೂಕುಸಿತ; ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಬಂದ್
ತಾನೇ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿ ದೂರು ನೀಡಿದ ವಿಂಗ್ ಕಮಾಂಡರ್: ವಿಡಿಯೋ
ತಾನೇ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿ ದೂರು ನೀಡಿದ ವಿಂಗ್ ಕಮಾಂಡರ್: ವಿಡಿಯೋ
ದಾಖಲಾತಿ ಹೆಚ್ಚಳಕ್ಕೆ ಸರ್ಕಾರಿ ಶಾಲೆ ಶಿಕ್ಷಕರಿಂದ ಡಿಫರೆಂಟ್ ಕ್ಯಾಂಪೇನ್
ದಾಖಲಾತಿ ಹೆಚ್ಚಳಕ್ಕೆ ಸರ್ಕಾರಿ ಶಾಲೆ ಶಿಕ್ಷಕರಿಂದ ಡಿಫರೆಂಟ್ ಕ್ಯಾಂಪೇನ್
ಮೋದಿ ತಾತ ಕೊಟ್ಟ ನವಿಲುಗರಿ ಹಿಡಿದು ಕುಣಿದಾಡಿದ ಜೆಡಿ ವ್ಯಾನ್ಸ್ ಮಕ್ಕಳು
ಮೋದಿ ತಾತ ಕೊಟ್ಟ ನವಿಲುಗರಿ ಹಿಡಿದು ಕುಣಿದಾಡಿದ ಜೆಡಿ ವ್ಯಾನ್ಸ್ ಮಕ್ಕಳು
ಓಂ ಪ್ರಕಾಶ್​ ಹತ್ಯೆ: ಏನಿದು ಸ್ಕಿಜೋಫ್ರೇನಿಯಾ ರೋಗ? ಎಷ್ಟು ಡೇಂಜರ್​?
ಓಂ ಪ್ರಕಾಶ್​ ಹತ್ಯೆ: ಏನಿದು ಸ್ಕಿಜೋಫ್ರೇನಿಯಾ ರೋಗ? ಎಷ್ಟು ಡೇಂಜರ್​?
ಕಾರು ಅಡ್ಡಗಟ್ಟಿ ಮಧ್ಯದ ಬೆರಳು ತೋರಿಸಿ ನಿಂದಿನಿಸಿದ ಆಟೋ ಚಾಲಕ
ಕಾರು ಅಡ್ಡಗಟ್ಟಿ ಮಧ್ಯದ ಬೆರಳು ತೋರಿಸಿ ನಿಂದಿನಿಸಿದ ಆಟೋ ಚಾಲಕ