ಮೈಸೂರಿನಲ್ಲಿಲ್ಲ ಕರ್ನಾಟಕ ಬಂದ್ ಬಿಸಿ.. ಯಥಾ ಪ್ರಕಾರ ಜನಜೀವನ

ಮೈಸೂರು: ಭೂ ಸುಧಾರಣೆ ಕಾಯ್ದೆ, ಎಪಿಎಂಸಿ ತಿದ್ದುಪಡಿ ಕಾಯ್ದೆ ವಿರೋಧಿಸಿ ರಾಜ್ಯದಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೆ ಮೈಸೂರಿನಲ್ಲಿ ಬಂದ್ ಭಾಗಶಃ ವಿಫಲವಾಗಿದೆ. ಎಂದಿನಂತೆ ಜನಜೀವನ ಆರಂಭವಾಗಿದೆ. ಹೌದು ರಾಜ್ಯದ ಅನೇಕ ಕಡೆ ರೈತರ ಆಕ್ರೋಶದ ಕಿಚ್ಚು ಎಲ್ಲೆ ಮೀರಿದೆ. ಆದರೆ ಮೈಸೂರಿನಲ್ಲಿ ಪ್ರತಿಭಟನೆಯ ಕಿಚ್ಚು ಕಾಣಿಸುತ್ತಿಲ್ಲ. ಕೇವಲ ಪ್ರತಿಭಟನೆಗೆ ಮಾತ್ರ ಬಂದ್ ಸೀಮಿತವಾದಂತಿದೆ. ‍9 ಗಂಟೆ ನಂತರ ಬಂದ್ ಬಿಸಿ ಕಡಿಮೆಯಾಗಿದೆ. ಮೈಸೂರಿನ ಮಾರುಕಟ್ಟೆಯಲ್ಲಿ ವ್ಯಾಪಾರ ವಹಿವಾಟು ಆರಂಭವಾಗಿದೆ. ನಗರ ಬಸ್ ನಿಲ್ದಾಣ ಹಾಗೂ ಗ್ರಾಮಾಂತರ […]

ಮೈಸೂರಿನಲ್ಲಿಲ್ಲ ಕರ್ನಾಟಕ ಬಂದ್ ಬಿಸಿ.. ಯಥಾ ಪ್ರಕಾರ ಜನಜೀವನ
ಆಯೇಷಾ ಬಾನು Edited By: ಸಾಧು ಶ್ರೀನಾಥ್​

Updated on: Sep 28, 2020 | 10:53 AM

ಮೈಸೂರು: ಭೂ ಸುಧಾರಣೆ ಕಾಯ್ದೆ, ಎಪಿಎಂಸಿ ತಿದ್ದುಪಡಿ ಕಾಯ್ದೆ ವಿರೋಧಿಸಿ ರಾಜ್ಯದಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೆ ಮೈಸೂರಿನಲ್ಲಿ ಬಂದ್ ಭಾಗಶಃ ವಿಫಲವಾಗಿದೆ. ಎಂದಿನಂತೆ ಜನಜೀವನ ಆರಂಭವಾಗಿದೆ.

ಹೌದು ರಾಜ್ಯದ ಅನೇಕ ಕಡೆ ರೈತರ ಆಕ್ರೋಶದ ಕಿಚ್ಚು ಎಲ್ಲೆ ಮೀರಿದೆ. ಆದರೆ ಮೈಸೂರಿನಲ್ಲಿ ಪ್ರತಿಭಟನೆಯ ಕಿಚ್ಚು ಕಾಣಿಸುತ್ತಿಲ್ಲ. ಕೇವಲ ಪ್ರತಿಭಟನೆಗೆ ಮಾತ್ರ ಬಂದ್ ಸೀಮಿತವಾದಂತಿದೆ. ‍9 ಗಂಟೆ ನಂತರ ಬಂದ್ ಬಿಸಿ ಕಡಿಮೆಯಾಗಿದೆ. ಮೈಸೂರಿನ ಮಾರುಕಟ್ಟೆಯಲ್ಲಿ ವ್ಯಾಪಾರ ವಹಿವಾಟು ಆರಂಭವಾಗಿದೆ. ನಗರ ಬಸ್ ನಿಲ್ದಾಣ ಹಾಗೂ ಗ್ರಾಮಾಂತರ ಬಸ್ ನಿಲ್ದಾಣದಲ್ಲಿ ಬಸ್ ಸಂಚಾರ ಯಥಾ ಪ್ರಕಾರ ನಡೆಯುತ್ತಿದೆ.

ಅಂಗಡಿ ಮಾಲೀಕರು ಬಾಗಿಲು ತೆರೆದು ವ್ಯಾಪಾರಕ್ಕಿಳಿದಿದ್ದಾರೆ. ವಾಹನ ಸಂಚಾರ ಎಂದಿನಂತೆ ಆರಂಭವಾಗಿದೆ. ನಿತ್ಯದ ಚಟುವಟಿಕೆಗಳಿಗೆ ಯಾವುದೇ ಅಡೆತಡೆ ಇಲ್ಲ. ದೇವರಾಜು ಅರಸು ರಸ್ತೆ, ಶಿವರಾಂಪೇಟೆ, ಸಯ್ಯಾಜಿರಾವ್ ರಸ್ತೆಗಳಲ್ಲಿ ಸಹಜ ಸ್ಥಿತಿ ಕಂಡು ಬಂದಿದೆ.

ಆಯೇಷಾ ಬಾನು

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Loading...
Unable to load recommendations.
Follow Us