ಕೊವಿಡ್ ಮಧ್ಯೆಯೂ ಹಾಸನದಲ್ಲಿ ಬಿಜೆಪಿ ರಾಜ್ಯ ಕಾರ್ಯಕಾರಣಿ; ಗುದ್ದಲಿ ಪೂಜೆ ನೆರವೇರಿಸಿದ ಸಚಿವ ಗೋಪಾಲಯ್ಯ

| Updated By: ಸಾಧು ಶ್ರೀನಾಥ್​

Updated on: Apr 09, 2021 | 2:48 PM

ಬಿ.ಎಸ್​ ಯಡಿಯೂರಪ್ಪನವರ ಕುರಿತು ಮಾತನಾಡುವವರ ಬಗ್ಗೆ ಹೈಕಮಾಂಡ್ ಗಮನಿಸುತ್ತಿದೆ. ಈ ಕುರಿತಾಗಿ ಬಸನಗೌಡ ಪಾಟೀಲ್ ಯತ್ನಾಳ್​ ಅವರಿಗೆ ಈಗಾಗಲೇ ನೋಟಿಸ್ ನೀಡಲಾಗಿದೆ. ಸೂಕ್ತ ಸಮಯದಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ.

ಕೊವಿಡ್ ಮಧ್ಯೆಯೂ ಹಾಸನದಲ್ಲಿ ಬಿಜೆಪಿ ರಾಜ್ಯ ಕಾರ್ಯಕಾರಣಿ; ಗುದ್ದಲಿ ಪೂಜೆ ನೆರವೇರಿಸಿದ ಸಚಿವ ಗೋಪಾಲಯ್ಯ
ಗುದ್ದಲಿ ಪೂಜೆ
Follow us on

ಹಾಸನ: ಬಿ.ಎಸ್​ ಯಡಿಯೂರಪ್ಪನವರ ಕುರಿತು ಮಾತನಾಡುವವರ ಬಗ್ಗೆ ಹೈಕಮಾಂಡ್ ಗಮನಿಸುತ್ತಿದೆ. ಈ ಕುರಿತಾಗಿ ಬಸನಗೌಡ ಪಾಟೀಲ್ ಯತ್ನಾಳ್​ ಅವರಿಗೆ ಈಗಾಗಲೇ ನೋಟಿಸ್ ನೀಡಲಾಗಿದೆ. ಸೂಕ್ತ ಸಮಯದಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಬಿಜೆಪಿ ರಾಜ್ಯ ರಾಜಕಾರಣಿ ಸಭೆ ನಡೆಯಲಿರುವ ವೇದಿಕೆ ನಿರ್ಮಾಣದ ಗುದ್ದಲಿ ಪೂಜೆ ಸಲ್ಲಿಸಿ, ಅಬಕಾರಿ ಸಚಿವ ಕೆ ಗೋಪಾಲಯ್ಯ ಹೇಳಿದ್ದಾರೆ. 

ಏಪ್ರಿಲ್​ 18- 19ರಂದು ಎರಡು ದಿನಗಳ ಕಾಲ ಹಾಸನದಲ್ಲಿ ಬಿಜೆಪಿ ರಾಜ್ಯ ಕಾರ್ಯಕಾರಣಿ ಸಭೆ ನಡೆಯಲಿದೆ. ಸಭೆ ನಡೆಯುವ ಸ್ಥಳದ ವೇದಿಕೆ ನಿರ್ಮಾಣಕ್ಕೆ ಇಂದು ಸಚಿವ ಗೋಪಾಲಯ್ಯ ಗುದ್ದಲಿ ಪೂಜೆ ನೆರವೇರಿಸಿದ್ದಾರೆ. ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಸಚಿವ ಗೋಪಾಲಯ್ಯ, ಇದೇ ಏಪ್ರಿಲ್ ತಿಂಗಳ18-19 ನೇ ತಾರೀಕಿನಂದು ರಾಜ್ಯ ಕಾರ್ಯಕಾರಿಣಿ ಸಭೆ ನಡೆಸಲು ವರಿಷ್ಠರು ತೀರ್ಮಾನ ನಡೆಸಿದ್ದಾರೆ.

ರಾಜ್ಯದ ಆಗು ಹೋಗುಗಳ ಹಾಗೂ ಪಕ್ಷ ಸಂಘಟನೆ ಬಗ್ಗೆ ಎರಡು ದಿನ ಚರ್ಚೆ ನಡೆಯಲಿದೆ. ರಾಜ್ಯದ 338 ಕಾರ್ಯಕಾರಿಣಿ ಸದಸ್ಯರು, ರಾಜ್ಯ ನಾಯಕರು ಹಾಗೂ ಮುಖ್ಯಮಂತ್ರಿ ಬಿ.ಎಸ್​ ಯಡಿಯೂರಪ್ಪ ಎಲ್ಲರೂ ಸಭೆಯಲ್ಲಿ ಭಾಗಿಯಾಗಲಿದ್ದಾರೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ.

ಕೊವಿಡ್ ಮಧ್ಯೆಯೂ ಸಭೆ ನಡೆಯಬೇಕಿರುವ ಹಿನ್ನೆಲೆಯಲ್ಲಿ ದೊಡ್ಡ ಪ್ರದೇಶದಲ್ಲಿ ಸಭೆ ಮಾಡಲು ತೀರ್ಮಾನ ಕೈಗೊಳ್ಳಲಾಗಿದೆ. ಸಾಮಾಜಿಕ ಅಂತರ ಕಾಯ್ದುಕೊಂಡು ಸಭೆ ನಡೆಸಲು ತಯಾರಿ ನಡೆದಿದೆ. ಸಂಪೂರ್ಣ ಅವಧಿಗೆ ಯಡಿಯೂರಪ್ಪನವರೇ ಮುಖ್ಯಮಂತ್ರಿ ಆಗಿರುತ್ತಾರೆ. ಈ ಬಗ್ಗೆ ಅನುಮಾನ ಬೇಡ ಜಗತ್ತಿನಲ್ಲೇ ಅತಿ ದೊಡ್ಡ ಪಕ್ಷ ಬಿಜೆಪಿ ಎಂದು ಮಾತನಾಡಿದ್ದಾರೆ.

 

ಇದನ್ನೂ ಓದಿ:

ಮಾದಕ ದ್ರವ್ಯ ನಿಯಂತ್ರಣಕ್ಕೆ ಪ್ರತ್ಯೇಕ ಡಿಸಿಗಳನ್ನು ನೇಮಿಸಲಾಗುವುದು -ಅಬಕಾರಿ ಸಚಿವ ಗೋಪಾಲಯ್ಯ

ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿಯನ್ನು ಸ್ವತಃ ಆಸ್ಪತ್ರೆಗೆ ದಾಖಲಿಸಿದ ಸಚಿವ ಗೋಪಾಲಯ್ಯ