ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್ ಕಟೀಲ್‌ಗೆ ಕೊರೊನಾ ಸೋಂಕು, ಆಸ್ಪತ್ರೆಗೆ ದಾಖಲು
ಬೆಂಗಳೂರು: ಭಾರತೀಯ ಜನತಾ ಪಾರ್ಟಿಯ ರಾಜ್ಯ ಘಟಕದ ಅಧ್ಯಕ್ಷ ನಳೀನ್‌ಕುಮಾರ್ ಕಟೀಲ್‌ಗೆ ಕೊರೊನಾ ಸೋಂಕು ತಗುಲಿದೆ. ಈ ಸಂಬಂಧ ಸ್ವತಃ ನಳಿನ್‌ಕುಮಾರ್ ಕಟೀಲ್ ಅವರೇ ತಮ್ಮ ಸಾಮಾಜಿಕ ತಾಣದ ಮೂಲಕ ತಿಳಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಕಟೀಲ್ ” ನಾನು ಕೋವಿಡ್-19 ಪರೀಕ್ಷೆಗೊಳಗಾಗಿದ್ದು, ವರದಿಯಲ್ಲಿ ಪಾಸಿಟಿವ್ ಎಂದು ಬಂದಿದೆ. ನನಗೆ ಯಾವುದೇ ರೋಗ ಲಕ್ಷಣಗಳಿಲ್ಲದಿದ್ದರೂ ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ದಾಖಲಾಗಿದ್ದೇನೆ” ಎಂದಿದ್ದಾರೆ. ಅಷ್ಟೇ ಅಲ್ಲ ತಮ್ಮೊಂದಿಗೆ ಸಂಪರ್ಕಕ್ಕೆ ಬಂದ ಎಲ್ಲರೂ ಜಾಗರೂಕರಾಗಿ ಎಂದು ತಮ್ಮ […]

ಬೆಂಗಳೂರು: ಭಾರತೀಯ ಜನತಾ ಪಾರ್ಟಿಯ ರಾಜ್ಯ ಘಟಕದ ಅಧ್ಯಕ್ಷ ನಳೀನ್‌ಕುಮಾರ್ ಕಟೀಲ್‌ಗೆ ಕೊರೊನಾ ಸೋಂಕು ತಗುಲಿದೆ. ಈ ಸಂಬಂಧ ಸ್ವತಃ ನಳಿನ್‌ಕುಮಾರ್ ಕಟೀಲ್ ಅವರೇ ತಮ್ಮ ಸಾಮಾಜಿಕ ತಾಣದ ಮೂಲಕ ತಿಳಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಕಟೀಲ್ ” ನಾನು ಕೋವಿಡ್-19 ಪರೀಕ್ಷೆಗೊಳಗಾಗಿದ್ದು, ವರದಿಯಲ್ಲಿ ಪಾಸಿಟಿವ್ ಎಂದು ಬಂದಿದೆ. ನನಗೆ ಯಾವುದೇ ರೋಗ ಲಕ್ಷಣಗಳಿಲ್ಲದಿದ್ದರೂ ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ದಾಖಲಾಗಿದ್ದೇನೆ” ಎಂದಿದ್ದಾರೆ.
ಅಷ್ಟೇ ಅಲ್ಲ ತಮ್ಮೊಂದಿಗೆ ಸಂಪರ್ಕಕ್ಕೆ ಬಂದ ಎಲ್ಲರೂ ಜಾಗರೂಕರಾಗಿ ಎಂದು ತಮ್ಮ ಜತೆ ಸಂಪರ್ಕಕ್ಕೆ ಬಂದವರಿಗೆ ಮನವಿ ಮಾಡಿದ್ದಾರೆ.
ನಾನು #COVID19 ಪರೀಕ್ಷೆಗೆ ಒಳಗಾಗಿದ್ದು ವರದಿಯಲ್ಲಿ ಪಾಸಿಟಿವ್ ಎಂದು ಬಂದಿದೆ. ರೋಗಲಕ್ಷಣಗಳಿಲ್ಲದಿದ್ದರೂ ವೈದ್ಯರ ಸಲಹೆಯ ಮೇರೆಗೆ ಆಸ್ಪತ್ರೆಗೆ ದಾಖಲಾಗಿದ್ದೇನೆ.
ನಿಮ್ಮ ಶುಭಾಶಯಗಳು ಮತ್ತು ಆಶೀರ್ವಾದಗಳೊಂದಿಗೆ ಶೀಘ್ರದಲ್ಲೇ ಹಿಂತಿರುಗುವ ವಿಶ್ವಾಸವಿದೆ. ನನ್ನೊಂದಿಗೆ ಸಂಪರ್ಕಕ್ಕೆ ಬಂದ ಎಲ್ಲರೂ ಜಾಗರೂಕರಾಗಿರಿ ಎಂದು ಮನವಿ ಮಾಡುತ್ತೇನೆ.
— Nalinkumar Kateel (@nalinkateel) August 30, 2020