ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್‌ ಕಟೀಲ್‌ಗೆ ಕೊರೊನಾ ಸೋಂಕು, ಆಸ್ಪತ್ರೆಗೆ ದಾಖಲು

ಬೆಂಗಳೂರು: ಭಾರತೀಯ ಜನತಾ ಪಾರ್ಟಿಯ ರಾಜ್ಯ ಘಟಕದ ಅಧ್ಯಕ್ಷ ನಳೀನ್‌ಕುಮಾರ್‌ ಕಟೀಲ್‌ಗೆ ಕೊರೊನಾ ಸೋಂಕು ತಗುಲಿದೆ. ಈ ಸಂಬಂಧ ಸ್ವತಃ ನಳಿನ್‌ಕುಮಾರ್‌ ಕಟೀಲ್‌ ಅವರೇ ತಮ್ಮ ಸಾಮಾಜಿಕ ತಾಣದ ಮೂಲಕ ತಿಳಿಸಿದ್ದಾರೆ. ಈ ಬಗ್ಗೆ ಟ್ವೀಟ್‌ ಮಾಡಿರುವ ಕಟೀಲ್‌ ” ನಾನು ಕೋವಿಡ್‌-19 ಪರೀಕ್ಷೆಗೊಳಗಾಗಿದ್ದು, ವರದಿಯಲ್ಲಿ ಪಾಸಿಟಿವ್‌ ಎಂದು ಬಂದಿದೆ. ನನಗೆ ಯಾವುದೇ ರೋಗ ಲಕ್ಷಣಗಳಿಲ್ಲದಿದ್ದರೂ ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ದಾಖಲಾಗಿದ್ದೇನೆ” ಎಂದಿದ್ದಾರೆ. ಅಷ್ಟೇ ಅಲ್ಲ ತಮ್ಮೊಂದಿಗೆ ಸಂಪರ್ಕಕ್ಕೆ ಬಂದ ಎಲ್ಲರೂ ಜಾಗರೂಕರಾಗಿ ಎಂದು ತಮ್ಮ […]

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್‌ ಕಟೀಲ್‌ಗೆ ಕೊರೊನಾ ಸೋಂಕು, ಆಸ್ಪತ್ರೆಗೆ ದಾಖಲು
Guru

Updated on: Aug 30, 2020 | 4:59 PM

ಬೆಂಗಳೂರು: ಭಾರತೀಯ ಜನತಾ ಪಾರ್ಟಿಯ ರಾಜ್ಯ ಘಟಕದ ಅಧ್ಯಕ್ಷ ನಳೀನ್‌ಕುಮಾರ್‌ ಕಟೀಲ್‌ಗೆ ಕೊರೊನಾ ಸೋಂಕು ತಗುಲಿದೆ. ಈ ಸಂಬಂಧ ಸ್ವತಃ ನಳಿನ್‌ಕುಮಾರ್‌ ಕಟೀಲ್‌ ಅವರೇ ತಮ್ಮ ಸಾಮಾಜಿಕ ತಾಣದ ಮೂಲಕ ತಿಳಿಸಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಕಟೀಲ್‌ ” ನಾನು ಕೋವಿಡ್‌-19 ಪರೀಕ್ಷೆಗೊಳಗಾಗಿದ್ದು, ವರದಿಯಲ್ಲಿ ಪಾಸಿಟಿವ್‌ ಎಂದು ಬಂದಿದೆ. ನನಗೆ ಯಾವುದೇ ರೋಗ ಲಕ್ಷಣಗಳಿಲ್ಲದಿದ್ದರೂ ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ದಾಖಲಾಗಿದ್ದೇನೆ” ಎಂದಿದ್ದಾರೆ.

ಅಷ್ಟೇ ಅಲ್ಲ ತಮ್ಮೊಂದಿಗೆ ಸಂಪರ್ಕಕ್ಕೆ ಬಂದ ಎಲ್ಲರೂ ಜಾಗರೂಕರಾಗಿ ಎಂದು ತಮ್ಮ ಜತೆ ಸಂಪರ್ಕಕ್ಕೆ ಬಂದವರಿಗೆ ಮನವಿ ಮಾಡಿದ್ದಾರೆ.

Guru
Loading...
Unable to load recommendations.
Follow Us