ಚಿಕ್ಕಬಳ್ಳಾಪುರದಲ್ಲಿ ಮೊದಲ ಬಾರಿಗೆ ಅರಳಿದ ಕಮಲ

|

Updated on: Dec 09, 2019 | 3:23 PM

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಕೆ.ಸುಧಾಕರ್ ಗೆಲುವಿನ ಕೇಕೆ ಹಾಕಿದ್ದಾರೆ. ಇದೇ ಮೊದಲ ಬಾರಿಗೆ ಚಿಕ್ಕಬಳ್ಳಾಪುರದಲ್ಲಿ ಕಮಲ ಅರಳಿದೆ. ಮೈತ್ರಿ ಸರ್ಕಾರದ ಆಡಳಿತಕ್ಕೆ ಬೇಸತ್ತು ಸುಧಾಕರ್ ರಾಜೀನಾಮೆ ನೀಡಿ, ಬಿಜೆಪಿಗೆ ಸೇರಿದ್ದರು. ಇದೀಗ ಬಿಜೆಪಿಯಿಂದ 34,801 ಮತಗಳ ಅಂತರದಿಂದ ಡಾ.ಕೆ.ಸುಧಾಕರ್ ಭರ್ಜರಿ ಗೆಲುವು ಸಾಧಿಸಿದ್ದಾರೆ. ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್ 84,389 ಮತಗಳನ್ನು ಪಡೆದಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಎಂ.ಆಂಜಿನಪ್ಪ 49,588 ಮತಗಳನ್ನು ಪಡೆದಿದ್ದು, ಜೆಡಿಎಸ್​ ಅಭ್ಯರ್ಥಿ ಎನ್.ರಾಧಾಕೃಷ್ಣ 35,869 ಮತಗಳಿಗೆ ತೃಪ್ತಿಪಟ್ಟುಕೊಂಡಿದ್ದಾರೆ.

ಚಿಕ್ಕಬಳ್ಳಾಪುರದಲ್ಲಿ ಮೊದಲ ಬಾರಿಗೆ ಅರಳಿದ ಕಮಲ
Follow us on

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಕೆ.ಸುಧಾಕರ್ ಗೆಲುವಿನ ಕೇಕೆ ಹಾಕಿದ್ದಾರೆ. ಇದೇ ಮೊದಲ ಬಾರಿಗೆ ಚಿಕ್ಕಬಳ್ಳಾಪುರದಲ್ಲಿ ಕಮಲ ಅರಳಿದೆ. ಮೈತ್ರಿ ಸರ್ಕಾರದ ಆಡಳಿತಕ್ಕೆ ಬೇಸತ್ತು ಸುಧಾಕರ್ ರಾಜೀನಾಮೆ ನೀಡಿ, ಬಿಜೆಪಿಗೆ ಸೇರಿದ್ದರು. ಇದೀಗ ಬಿಜೆಪಿಯಿಂದ 34,801 ಮತಗಳ ಅಂತರದಿಂದ ಡಾ.ಕೆ.ಸುಧಾಕರ್ ಭರ್ಜರಿ ಗೆಲುವು ಸಾಧಿಸಿದ್ದಾರೆ.

ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್ 84,389 ಮತಗಳನ್ನು ಪಡೆದಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಎಂ.ಆಂಜಿನಪ್ಪ 49,588 ಮತಗಳನ್ನು ಪಡೆದಿದ್ದು, ಜೆಡಿಎಸ್​ ಅಭ್ಯರ್ಥಿ ಎನ್.ರಾಧಾಕೃಷ್ಣ 35,869 ಮತಗಳಿಗೆ ತೃಪ್ತಿಪಟ್ಟುಕೊಂಡಿದ್ದಾರೆ.

Published On - 11:32 am, Mon, 9 December 19